ಬೆಂಗಳೂರು: ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯ ಸರ್ಕಾರವು ಆತ್ಮಹತ್ಯೆ ಭಾಗ್ಯವನ್ನು ಕರ್ನಾಟಕ ರಾಜ್ಯಕ್ಕೆ ದಯಪಾಲಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ವಾಗ್ದಾಳಿ ನಡೆಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದರ್ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಉಲ್ಲೇಖಿಸಿ ಮಾತನಾಡಿದರು. ಇದನ್ನೂ ಓದಿ: ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ – ಮೃತ ಸಚಿನ್ ವಿರುದ್ಧವೇ ಲಕ್ಷಾಂತರ ರೂಪಾಯಿ ವಂಚನೆ ಆರೋಪ
Advertisement
Advertisement
ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಸರ್ಕಾರಿ ಪ್ರಾಯೋಜಿತ ಆತ್ಮಹತ್ಯೆಗಳು ಅಥವಾ ರಾಜ್ಯ ಸರ್ಕಾರದ ಕುಮ್ಮಕ್ಕಿನ ಆತ್ಮಹತ್ಯೆ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿದೆ.ಸರ್ಕಾರ, ಸಚಿವರು, ಆಡಳಿತ ಪಕ್ಷದ ಶಾಸಕರ ಕುಮ್ಮಕ್ಕಿನಿಂದ ಹಿಂದೆಂದೂ ಇಂಥ ಸರಣಿ ಆತ್ಮಹತ್ಯೆ ಪ್ರಕರಣಗಳನ್ನು ಕೇಳಿರಲಿಲ್ಲ, ನೋಡಿರಲಿಲ್ಲ ಎಂದು ವಿಜಯೇಂದ್ರ ಅವರು ವಿಶ್ಲೇಷಿಸಿದರು.
Advertisement
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯ ಸರ್ಕಾರವು ಆತ್ಮಹತ್ಯೆ ಭಾಗ್ಯವನ್ನು ಕರ್ನಾಟಕ ರಾಜ್ಯಕ್ಕೆ ದಯಪಾಲಿಸಿದೆ ಎಂದು ಅವರು ಆಕ್ಷೇಪಿಸಿದರು. ಇದನ್ನೂ ಓದಿ: ಇಸ್ರೋದ ಸ್ಪೇಡೆಕ್ಸ್ ಉಪಗ್ರಹಕ್ಕೆ ರಾಜ್ಯದ ಬಿಜಿಎಸ್ ಕಾಲೇಜಿನ ಪೇಲೋಡ್ ಸೇರ್ಪಡೆ
Advertisement
ಭ್ರಷ್ಟಾಚಾರ ಬಯಲಾದುದರಿಂದ ವಾಲ್ಮೀಕಿ ನಿಗಮದ ಅಕೌಂಟೆಂಟ್ ಚಂದ್ರಶೇಖರ್ ಮೊದಲ ಆತ್ಮಹತ್ಯೆ ಮಾಡಿಕೊಂಡಿದ್ದು, ಬಿಜೆಪಿ ಹೋರಾಟದಿಂದ ಸಚಿವ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದರು. ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಪಿ.ಎ. ಹೆಸರು ಬರೆದಿಟ್ಟು ರುದ್ರಣ್ಣ ಯಡವಣ್ಣವರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ದಾವಣಗೆರೆಯಲ್ಲಿ ಗುತ್ತಿಗೆದಾರರೊಬ್ಬರು ಬಾಕಿ ಹಣ ಸಿಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಗಡಿಯಲ್ಲಿ ಕ್ರಷರ್ ಲಾರಿ ಮಾಲೀಕರೊಬ್ಬರು ಲಂಚ ಕೊಡಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾದಗಿರಿ ಪಿಎಸ್‍ಐ ಪರಶುರಾಮ, ಸ್ಥಳೀಯ ಶಾಸಕರ ಪುತ್ರನ ಒತ್ತಡ ತಡೆಯಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿವರಿಸಿದರು.
ಟೆಂಡರ್ ಮಾಡಿಕೊಡಲು ಶೇ.5 ದುಡ್ಡಿನ ಬೇಡಿಕೆ ಇಟ್ಟಿರುತ್ತಾನೆ. ಪ್ರಿಯಾಂಕ್ ಖರ್ಗೆ ನಾನು ಹೇಳಿದ ಮಾತನ್ನು ಮೀರುವುದಿಲ್ಲ, ಮಾನ್ಯ ಸಚಿವರ ಬೆಂಬಲ ಇದೆ ಎಂದು ರಾಜು ಕಪನೂರ್ ಹೇಳಿದ್ದಾಗಿ ಸಚಿನ್ ತನ್ನ ಡೆತ್ ನೋಟಿನಲ್ಲಿ ತಿಳಿಸಿದ್ದಾಗಿ ಮಾಹಿತಿ ಕೊಟ್ಟರು. ಪೊಲೀಸ್ ಠಾಣೆಗೆ ಹೋಗಿದ್ದ ಹೆಣ್ಮಕ್ಕಳ ಜೊತೆ ಕೆಟ್ಟದಾಗಿ ನಡೆದುಕೊಳ್ಳಲಾಯಿತು. ಅವರ ಮನವಿಗೆ ಸ್ಪಂದಿಸಲಿಲ್ಲ. ಪೊಲೀಸ್ ಅಧಿಕಾರಿಗಳ ಬೇಜವಾಬ್ದಾರಿ ನಡವಳಿಕೆ ಅಕ್ಷಮ್ಯ ಅಪರಾಧ ಎಂದು ಖಂಡಿಸಿದರು. ದೂರು ದಾಖಲಿಸಿ, ಮೊಬೈಲ್ ಟ್ರ್ಯಾಕ್ ಮಾಡಿದ್ದರೆ ನನ್ನ ತಮ್ಮ ಉಳಿಯುತ್ತಿದ್ದ ಎಂದು ಆ ಸೋದರಿಯರು ತಿಳಿಸಿದ್ದಾರೆ ಎಂದು ವಿವರಿಸಿದರು.
ಹೆಣ್ಮಕ್ಕಳಿಗೆ ಹೀಯಾಳಿಸಿ, ಅಪಮಾನ ಮಾಡಿ ನಿಂದಿಸಿದ್ದು ಅಕ್ಷಮ್ಯ ಅಪರಾಧ ಎಂದು ತಿಳಿಸಿದರು. ಇವರ ಕಾಲಹಣದಿಂದ ಹೀಗಾಗಿದೆ. ಅಲ್ಲಿನ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿ ಥರ ಇವತ್ತು ದುರುಪಯೋಗ ಆಗುತ್ತಿವೆ. ರಿಪಬ್ಲಿಕ್ ಆಫ್ ಗುಲ್ಬರ್ಗದಲ್ಲಿ ಜಿಲ್ಲೆ ಯಾರ ಕಪಿಮುಷ್ಟಿಯಲ್ಲಿದೆ ಎಂದು ಬಸ್ ನಿಲ್ದಾಣದಲ್ಲಿ ಯಾರಿಗೆ ಕೇಳಿದರೂ ಹೇಳುತ್ತಾರೆ ಎಂದರು.
ಕಲಬುರಗಿ ಜಿಲ್ಲೆಯಲ್ಲಿ ಅನೇಕ ಆತ್ಮಹತ್ಯೆ, ಕೊಲೆ ಪ್ರಕರಣಗಳು ನಡೆದಿವೆ. ಅವನ್ನು ಮುಚ್ಚಿ ಹಾಕಿದ ಷಡ್ಯಂತ್ರ ಹಿಂದೆ ಆಗಿದೆ. ಕಾಂಗ್ರೆಸ್ಸಿನವರು ಹಗಲು ಅಂಥ ಕುಟುಂಬದವರನ್ನು ಭೇಟಿ ಮಾಡಿಲ್ಲ. ಬೆಳಗ್ಗಿನ ಜಾವ 3 ಗಂಟೆಗೆ ಭೇಟಿ ಕೊಟ್ಟಿದ್ದಾರೆ. ಕುಟುಂಬಕ್ಕೆ ಸಮಾಧಾನ ಹೇಳಿ, ಸಮಾಧಾನಿತರಾಗದೆ ಇದ್ದರೆ ಬೆದರಿಕೆ ಹಾಕುತ್ತಾರೆ ಎಂದು ಆಕ್ಷೇಪಿಸಿದರು. ಗುಲ್ಬರ್ಗದ ಪೊಲೀಸ್ ಇಲಾಖೆ ಖರ್ಗೆ ಮತ್ತು ಕುಟುಂಬದ ಮುಷ್ಟಿಯೊಳಗಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಸಿಬಿಐಗೆ ನೀಡದಿದ್ದರೆ ಕಲಬುರಗಿಯಲ್ಲಿ ಬೃಹತ್ ಹೋರಾಟ – ಪ್ರಿಯಾಂಕ್ ವಿರುದ್ಧ ವಿಜಯೇಂದ್ರ ಆಕ್ರೋಶ