– ನಮ್ಮ ಸಂಸ್ಕೃತಿ, ಪರಂಪರೆ, ಆಚಾರ ವಿಚಾರ ಒಪ್ಪಿ ಬರುವುದಾದ್ರೆ ಸ್ವಾಗತ ಎಂದ ಶಾಸಕ
ಬೆಂಗಳೂರು: ಬಾನು ಮುಷ್ತಾಕ್ (Banu Mushtaq) ಅವರು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ. ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳಿಗೆ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಕರೆಯಬೇಕೆಂದು ಅನಿಸುತ್ತದೆ. ಬಾನು ಮುಷ್ತಾಕ್ ಅವರ ಜೊತೆಗೇ ದೀಪಾ ಭಸ್ತಿ ಅವರಿಗೂ ಪ್ರಶಸ್ತಿ ಲಭಿಸಿದೆ. ಅವರನ್ನು ಕರೆಯಬೇಕೆಂದು ಮುಖ್ಯಮಂತ್ರಿಗಳಿಗೆ ಯಾಕೆ ಅನಿಸಿಲ್ಲ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಪ್ರಶ್ನಿಸಿದರು.
ಕಾಂಗ್ರೆಸ್ ಸರ್ಕಾರದ (Congress Government) ಅಜೆಂಡಾ ಏನು? ಎಂದು ಕೇಳಿದರು. ನಿಸಾರ್ ಅಹ್ಮದ್ ಅವರೂ ದಸರಾ ಉದ್ಘಾಟಿಸಿದ್ದರು. ಅದು ಬೇರೆ ಪ್ರಶ್ನೆ. ಬಾನು ಮುಷ್ತಾಕ್ ಅವರು ನಮ್ಮ ಸಂಸ್ಕೃತಿ, ಪರಂಪರೆ, ಎಲ್ಲ ಆಚಾರ ವಿಚಾರಗಳನ್ನು ಒಪ್ಪಿ ಬರುವುದಾದ್ರೆ ಅದನ್ನು ನಾವು ಒಪ್ಪಿಕೊಳ್ಳುವುದಾಗಿ ಹೇಳಿದ್ದೇನೆ. ದಸರಾ ಎಂಬುದು ಕೇವಲ ಒಂದು ಸಾಂಸ್ಕೃತಿಕ ಕಾರ್ಯಕ್ರಮವಲ್ಲ, ಇದು ನಮ್ಮ ಹಿಂದೂ ಸಂಸ್ಕೃತಿ (Hindu Culture), ಹಿಂದೂ ಪರಂಪರೆಯ ಪದ್ಧತಿ. ರಾಜ ಮಹಾರಾಜರ ಕಾಲದಿಂದ ಈ ಪದ್ಧತಿ ಬಂದಿದೆ ಎಂದು ವಿಜಯೇಂದ್ರ ವಿವರಿಸಿದರು. ಇದನ್ನೂ ಓದಿ: ಚಾಮುಂಡೇಶ್ವರಿ ದೇವಸ್ಥಾನ ಹಿಂದೂ ದೇಗುಲವಲ್ಲದೇ ಇದ್ದಿದ್ರೆ ಮುಜರಾಯಿ ವ್ಯಾಪ್ತಿಗೆ ತರುತ್ತಿರಲಿಲ್ಲ – ಪ್ರಮೋದಾ ದೇವಿ ಒಡೆಯರ್
ಹಿಂದೂಗಳ ಭಾವನೆಗೆ ಧಕ್ಕೆ ಬರಬಾರದೆಂಬುದು ನಮ್ಮೆಲ್ಲರ ಉದ್ದೇಶ ಎಂದು ನುಡಿದರು. ಹಿಂದೂ ಸಂಸ್ಕೃತಿ – ಪರಂಪರೆಗೆ ಧಕ್ಕೆ ತರುವ ನಿರ್ಧಾರವನ್ನ ಸರಕಾರ ತೆಗೆದುಕೊಳ್ಳಬಾರದು. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಗೃಹ ಸಚಿವರು ಮಂಗಳೂರಿಗೆ ಹೋಗಿದ್ದರು. ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಲು ಹೊರಟ ಸಂದರ್ಭದಲ್ಲಿ ಯಾವುದೋ ಒಂದು ಕೋಮಿಗೆ ಸೇರಿದ ನಾಯಕರು ಹೋಗಬಾರದೆಂದು ಕಟ್ಟಿ ಹಾಕುವ ಕೆಲಸ ಮಾಡಿದ್ದರು. ಗೃಹ ಸಚಿವರು ಹಾಗೇ ವಾಪಸಾದರು. ಅಂದರೆ, ರಾಜ್ಯ ಸರ್ಕಾರದ ನಡವಳಿಕೆಯನ್ನು ಪ್ರತಿ ಸಂದರ್ಭದಲ್ಲೂ ಗಮನಿಸಿದರೆ, ಪ್ರತಿ ಬಾರಿಯೂ ಹಿಂದೂಗಳಿಗೆ ಅಪಮಾನ ಮಾಡುವ ನಿರ್ಧಾರವನ್ನೇ ಕಾಂಗ್ರೆಸ್ ಸರ್ಕಾರ ತೆಗೆದುಕೊಳ್ಳುತ್ತಿದೆ ಎಂದು ವಿಜಯೇಂದ್ರ ಆಕ್ಷೇಪಿಸಿದರು. ಇದನ್ನೂ ಓದಿ: ಅಲ್ಲಾ ನಿಮ್ಮನ್ನು ಮಸೀದಿಗೆ ಕರೆಸಿಕೊಳ್ಳಲ್ಲ, ನಮ್ಮ ದೇವರು ಹೇಗೆ ಕರೆಸಿಕೊಳ್ಳುತ್ತೆ: ಬಾನು ಮುಷ್ತಾಕ್‌ಗೆ ಪ್ರತಾಪ್ ಸಿಂಹ ಪ್ರಶ್ನೆ
ಅಪಪ್ರಚಾರ ನಡೆಸಿದವರನ್ನು ಬಂಧಿಸಿಲ್ಲವೇಕೆ?
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಹಿಂದೂಗಳ ವಿರುದ್ಧ ಕೇಸ್ ದಾಖಲಿಸಿ, 24 ಗಂಟೆಗಳಲ್ಲಿ ಬಂಧಿಸುತ್ತಾರೆ. ಆದರೆ, ಧರ್ಮಸ್ಥಳದ ವಿಷಯದಲ್ಲಿ ಹಿಂದೂ ಭಾವನೆಗೆ ಧಕ್ಕೆ ತರುವಂತೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆದರೂ ಅವರ ವಿರುದ್ಧ ಕೇಸ್ ಹಾಕಿ ಬಂಧಿಸಬೇಕೆಂದು ಯಾಕೆ ಕಾಂಗ್ರೆಸ್ ಸರ್ಕಾರಕ್ಕೆ ಅನಿಸಿಲ್ಲ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು: ಯದುವೀರ್
ಎಸ್‍ಐಟಿ ತನಿಖೆ ಮಾಡಿಕೊಳ್ಳಲಿ, ದುಷ್ಟ ಶಕ್ತಿಗಳ ಹಿಂದಿರುವ ರಾಷ್ಟ್ರ- ಅಂತರರಾಷ್ಟ್ರೀಯ ಮಟ್ಟದ ದುಷ್ಟ ಶಕ್ತಿಗಳ ಬಗ್ಗೆ ತಿಳಿಯಲು ಮತ್ತು ಅವರನ್ನು ಹೊರಕ್ಕೆ ತರಲು ಎನ್‍ಐಎ, ಸಿಬಿಐ ತನಿಖೆ ಆಗಬೇಕೆಂಬ ಆಗ್ರಹ ಭಕ್ತರದ್ದೂ ಆಗಿದೆ. ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಮುಖ್ಯಮಂತ್ರಿಗಳಿಗೆ ಕಿಂಚಿತ್ತಾದರೂ ಕಾಳಜಿ, ಪ್ರಾಮಾಣಿಕತೆ ಇದ್ದಲ್ಲಿ, ಹಿಂದೂಗಳ ಧಾರ್ಮಿಕ ಶ್ರದ್ಧೆ ಬಗ್ಗೆ ಕಿಂಚಿತ್ತಾದರೂ ನಂಬಿಕೆ ಇದ್ದರೆ, ಎಸ್‍ಐಟಿ ತನಿಖೆ ಆಗಲಿ, ಆದರೆ, ಅದಕ್ಕೊಂದು ಕಾಲಮಿತಿ ಬೇಕಲ್ಲವೇ ಎಂದು ಪ್ರಶ್ನಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಕುರಿತ ಈ ಹುಚ್ಚಾಟ ಇನ್ನೆಷ್ಟು ದಿನ ಮುಂದುವರೆಸುತ್ತೀರಿ? ಅಪಪ್ರಚಾರ ಮಾಡುವವರ ವಿರುದ್ಧ ಒಂದೂ ಎಫ್‍ಐಆರ್ ಮಾಡದ ಕಾಂಗ್ರೆಸ್ ಸರ್ಕಾರದ ಬಗ್ಗೆ ನಮಗೆ ವಿಶ್ವಾಸ ಇಲ್ಲ, ಷಡ್ಯಂತ್ರ ಮಾಡಿದ್ದು ಯಾರು? ಅಪಪ್ರಚಾರ ಮಾಡಿದ್ದು ಯಾರು? ದುಷ್ಟ ಶಕ್ತಿಗಳಿಗೆ ಹಣ ಕೊಟ್ಟವರು ಯಾರು? ಇವೆಲ್ಲವೂ ಸಮಗ್ರ ತನಿಖೆ ಆಗಲಿ ಎಂದು ವಿಜಯೇಂದ್ರ ಒತ್ತಾಯಿಸಿದರು. ಇದನ್ನೂ ಓದಿ: ಸರ್ಕಾರಿ ಸೌಲಭ್ಯಗಳ ದುರ್ಬಳಕೆ ಆರೋಪ – ಕರ್ನಾಟಕ ಭವನದ ಹೆಚ್ಚುವರಿ ಆಯುಕ್ತೆ ವಿರುದ್ಧ ಸಿಎಸ್‌ಗೆ ದೂರು