ತುಮಕೂರು: ಶ್ರೀ ಶಿವಕುಮಾರ ಶ್ರೀಗಳ 115ನೇ ಜನ್ಮದಿನ ಐತಿಹಾಸಿಕ ಕಾರ್ಯಕ್ರಮ ಅಂದ್ರೆ ತಪ್ಪಾಗಲಾರದು ಎಂದು ಸಿದ್ದಗಂಗಾ ಮಠದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ಕೊಟ್ಟರು.
Advertisement
ಶ್ರೀ ಶಿವಕುಮಾರ ಶ್ರೀಗಳ 115ನೇ ಜನ್ಮದಿನ ಉತ್ಸವದ ಹಿನ್ನೆಲೆ ಬಿ.ವೈ.ವಿಜಯೇಂದ್ರ ಅವರು ಸಕಲ ಸಿದ್ದತೆಗಳನ್ನು ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ಅವರು, ಶ್ರೀಗಳ ಜನ್ಮದಿನದಂದು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಸುತ್ತೂರು ದೇಶಿಕೇಂದ್ರ ಸ್ವಾಮೀಜಿಗಳ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಶ್ರೀ ಮಠದ ಸಿದ್ದಗಂಗಾ ಶ್ರೀಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಗುರುವಂದನಾ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್‍ಯಡಿಯೂರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿವರಿಸಿದರು. ಇದನ್ನೂ ಓದಿ: ರಾಷ್ಟ್ರಮಟ್ಟದ ಜಂಪ್ ರೋಪ್ ಸ್ಪರ್ಧೆಯಲ್ಲಿ ರಾಜ್ಯಕ್ಕೆ 5 ಚಿನ್ನ, 7 ಬೆಳ್ಳಿ ಪದಕ – ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ
Advertisement
Advertisement
ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಹ್ಲಾದ್ ಜೋಶಿ, ಭಗವಂತ ಖೂಬಾ ಸೇರಿದಂತೆ ಹಲವು ಕೇಂದ್ರ ನಾಯಕರು ಆಗಮಿಸಲಿದ್ದಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮ ಅಂದ್ರೆ ತಪ್ಪಾಗಲಾರದು. ಸಿಎಂ ಬೊಮ್ಮಾಯಿ ಸೇರಿದಂತೆ ರಾಜ್ಯದ ಹಲವು ಸಚಿವರುಗಳು ಆಗಮಿಸಲಿದ್ದಾರೆ. ಮಾಧುಸ್ವಾಮಿ, ಬಿ.ಸಿ.ನಾಗೇಶ್, ಡಾ.ಜಿ.ಪರಮೇಶ್ವರ್ ಸೇರಿದಂತೆ ಎಲ್ಲ ಪಕ್ಷದ ನಾಯಕರು ಪಕ್ಷಾತೀತವಾಗಿ ಆಗಮಿಸಲಿದ್ದಾರೆ. ನೂರಾರು ಸಂಖ್ಯೆಯಲ್ಲಿ ಎಲ್ಲ ಮಠಾಧಿಶರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸುಮಾರು ಎರಡು ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.
Advertisement
ಎಲ್ಲರಿಗೂ ದಾಸೋಹದ ವ್ಯವಸ್ಥೆ ಮಾಡಲಾಗಿದೆ. ಜನರಿಗೆ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅಮಿತ್ ಶಾ ಮೊದಲಿಗೆ ತುಮಕೂರು ಯೂನಿವರ್ಸಿಟಿ ಕ್ಯಾಂಪಸ್‍ಗೆ ಬರ್ತಾರೆ. ಬೆಳಗ್ಗೆ 10.45 ಯುನಿವರ್ಸಿಟಿ ಹೆಲಿಪ್ಯಾಡ್‍ಗೆ ಬರಲಿದ್ದಾರೆ. ನಂತರ ಶ್ರೀ ಶಿವಕುಮಾರ್ ಶ್ರೀಗಳ ಗದ್ದುಗೆ ದರ್ಶನ ಮಾಡಲಿದ್ದಾರೆ. ಆದಾದ ಬಳಿಕ ನೇರವಾಗಿ 11 ಗಂಟೆಗೆ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಎರಡು ಗಂಟೆಗಳ ಕಾಲ ಕಾರ್ಯಕ್ರಮದಲ್ಲಿ ಅಮಿತ್ ಶಾ ಇರಲಿದ್ದಾರೆ ಎಂದರು. ಇದನ್ನೂ ಓದಿ: ಬ್ರಾಂಡ್ ವ್ಯಾಲ್ಯೂ ಕಡಿಮೆಯಾದರೂ ಕೊಹ್ಲಿ ನಂ.1 – ಯಾರ ಮೌಲ್ಯ ಎಷ್ಟು
ಮಠದಲ್ಲಿ ಪ್ರಸಾದ ಸೇವಿಸಿದ ನಂತರ ಅಮಿತ್ ಶಾ ಬೆಂಗಳೂರು ಕಡೆ ಪ್ರಯಾಣ ಬೆಳಸಲಿದ್ದಾರೆ. ಅಮಿತ್ ಶಾ ಅವರನ್ನು ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ನಗರದಲ್ಲಿ ಬರಮಾಡಿಕೊಳ್ತಾರೆ ಎಂದು ಕಾರ್ಯಕ್ರಮದ ಪೂರ್ಣ ವಿವರವನ್ನು ಕೊಟ್ಟರು.