ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟ ಪುನಾರಚನೆ ಮಾತುಗಳು ಕೇಳಿಬರುತ್ತಿವೆ. ಈ ನಡುವೆಯೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಬ್ಬಳ್ಳಿ ನಿವಾಸಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿರುವುದು ತೀವ್ರ ಕುತೂಹಲ ಕೆರಳಿಸಿದೆ.
Advertisement
ಹುಬ್ಬಳ್ಳಿಯ ಕೇಶವಾಪುರದ ಮಧುರಾ ಎಸ್ಟೇಟ್‍ನಲ್ಲಿರೋ ಶೆಟ್ಟರ್ ನಿವಾಸಕ್ಕೆ ರವಿವಾರ ಸಂಜೆ ವಿಜಯೇಂದ್ರ ಭೇಟಿ ನೀಡಿ, ರಾಜ್ಯ ರಾಜಕೀಯದ ಮುಂದಿನ ಬೆಳವಣಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಒಂದು ಗಂಟೆಗೂ ಹೆಚ್ಚು ಕಾಲ ಈ ಚರ್ಚೆ ನಡೆದಿದೆ. ಒಂದು ಕಡೆ ಸಚಿವ ಸಂಪುಟ ಸೇರ್ಪಡೆಯಾಗುವುದಿಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ. ಮತ್ತೊಂದು ಕಡೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿರುವ ವಿಜಯೇಂದ್ರ ಮಹತ್ವ ಹೆಜ್ಜೆಯಿಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ನಾನು ಸಂಪುಟ ಸೇರ್ಪಡೆಯಾಗುವುದು ಕೇವಲ ಉಹಾಪೋಹ, ನನಗೆ ಯಾವುದೇ ಆಸೆಯಿಲ್ಲ: ಬಿ.ವೈ.ವಿಜಯೇಂದ್ರ
Advertisement
Advertisement
ಇದಕ್ಕೆ ಆರಂಭ ಎನ್ನುವಂತೆ ಬಸವರಾಜ ಬೊಮ್ಮಾಯಿ ಸಿಎಂ ಆದಾಗಿನಿಂದಲೂ ಬುಸುಗುಡುತ್ತಿರೋ ಶೆಟ್ಟರ್ ಅವರನ್ನು ಸಮಾಧಾನ ಮಾಡಲು ವಿಜಯೇಂದ್ರ ಮುಂದಾಗಿದ್ದಾರೆ. ರವಿವಾರ ಬೆಳಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ, ಮಣಕವಾಡದಲ್ಲಿ ನಡೆಯಲಿರೋ ಅಜ್ಜನ ಜಾತ್ರೆಯಲ್ಲಿ ಪಾಲ್ಗೊಳ್ಳಲು ಬಂದಿರೋದಾಗಿ ವಿಜಯೇಂದ್ರ ಮಾಧ್ಯಮಗಳಿಗೆ ತಿಳಿಸಿದರು. ಆದರೆ ಸಂಜೆ ದಿಢೀರ್ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿ ತೀವ್ರ ಕುತೂಹಲ ಕೆರಳಿಸಿದ್ದಾರೆ.