ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ಗುರುರಾಯರ ದರ್ಶನ ಪಡೆದರು. ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಮಂತ್ರಾಲಯಕ್ಕೆ (Mantralaya) ಭೇಟಿ ನೀಡಿದ್ದಾರೆ.
ಲೋಕಸಭೆ ಚುನಾವಣಾ (Lok Sabha Election) ತಯಾರಿ ಹಿನ್ನೆಲೆ ಜಿಲ್ಲಾ ಪ್ರವಾಸದಲ್ಲಿರುವ ವಿಜಯೇಂದ್ರ ಗುರುರಾಘವೇಂದ್ರ ಸ್ವಾಮಿ ವೃಂದಾವನ, ಮಂಚಾಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಆಶೀರ್ವಚನ ಪಡೆದರು. ಇದನ್ನೂ ಓದಿ: ಹೃದಯಾಘಾತ – ಮಾಜಿ ಶಾಸಕ ನಾಗನಗೌಡ ಕಂದಕೂರು ನಿಧನ
Advertisement
Advertisement
ಫಲಮಂತ್ರಾಕ್ಷತೆ, ಶೇಷವಸ್ತ್ರ ನೆನಪಿನ ಕಾಣಿಕೆ ನೀಡಿ ಶ್ರೀಗಳು ಆಶಿರ್ವದಿಸಿದರು. ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಬಳಿಕ ವಿಜಯೇಂದ್ರ ರಾಯಚೂರಿನಿಂದ ಜಿಲ್ಲಾ ಪ್ರವಾಸ ಆರಂಭಿಸಲಿದ್ದಾರೆ. ಇಂದಿನಿಂದ ಎರಡು ದಿನ ಕಾಲ ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಿಗೆ ವಿಜಯೇಂದ್ರ ಭೇಟಿ ನೀಡಲಿದ್ದಾರೆ. ಇದನ್ನೂ ಓದಿ: ಪಕ್ಷಕ್ಕೆ ದುಡಿದ ಎಲ್ಲಾ ಶಾಸಕರು, ಕಾರ್ಯಕರ್ತರಿಗೂ ಅಧಿಕಾರ – ಡಿಕೆ ಶಿವಕುಮಾರ್