ಬೆಂಗಳೂರು: ಕರ್ತವ್ಯಲೋಪ ಹಾಗೂ ಮೇಲಾಧಿಕಾರಿಗಳಿಗೆ ಮಾಹಿತಿ ನೀಡದ ಹಿನ್ನಲೆಯಲ್ಲಿ ಬ್ಯಾಟರಾಯನಪುರ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಬ್ ಇನ್ಸ್‌ಪೆಕ್ಟರ್ ಅವರನ್ನು ನಗರ ಪೊಲೀಸ್ ಆಯುಕ್ತ ಸುನಿಲ್ ಕುಮಾರ್ ಅಮಾನತುಗೊಳಿಸಿದ್ದಾರೆ.
ಅಮಾನತು ಆಗಿರುವ ಬ್ಯಾಟರಾಯಣಪುರದ ಇನ್ಸ್‌ಪೆಕ್ಟರ್ ಶಿವಸ್ವಾಮಿ ಹಾಗೂ ಸಬ್ ಇನ್ಸ್‌ಪೆಕ್ಟರ್ ಠಾಣೆಯ ಪ್ರಮುಖ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದರು.
Advertisement
ಅಷ್ಟೇ ಅಲ್ಲದೇ ಮೂರು ದಿನಗಳ ಹಿಂದೆ ಠಾಣೆಯ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ಕಾರುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೆ ತರದೇ ಬೇಜವಾಬ್ದಾರಿ ತೋರಿಸಿದ್ದಕ್ಕೆ ಅಮಾನತು ಮಾಡಲಾಗಿದೆ.
Advertisement
ಉದ್ಯಮಿ ಬನ್ಸಾಲ್ ಅಪಹರಣ ಪ್ರಕರಣದ ಪ್ರಮುಖ ಆರೋಪಿ ವಿನೋದ್ ಬಂಧನವೂ ಆಗಿಲ್ಲ. ಕಲ್ಲು ತೂರಾಟ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ಎಚ್ಚೆತ್ತುಕೊಂಡ ಪಶ್ಚಿಮ ವಲಯದ ಡಿಸಿಪಿ ರವಿ ಚೆನ್ನಣ್ಣವರ್ ಅವರು ಇನ್ಸ್‌ಪೆಕ್ಟರ್ ಶಿವಸ್ವಾಮಿ ಅವರಿಗೆ ಮೊಬೈಲ್ ಕರೆ ಮಾಡಿ ಕ್ಲಾಸ್ ತಗೆದುಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.