ಮೈಸೂರು: ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾದ ಬಳಿಕ ಚುನಾವಣಾ ಪ್ರಚಾರವು ಗರಿಗೆದರಿದೆ. ಶನಿವಾರ ಸೀರೆ ವಶಕ್ಕೆ ವಶಕ್ಕೆ ಪಡೆದುಕೊಂಡ ಬೆನ್ನಲ್ಲೇ ಇದೀಗ ಹಣ ಹಂಚುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.
ನಾಮಪತ್ರ ಸಲ್ಲಿಕೆ ದಿನವೇ ಹುಣಸೂರಲ್ಲಿ ಜೆಡಿಎಸ್ ಪಕ್ಷದವರು ಹಣ ಹಂಚಿದ್ದಾರೆ. ಈ ವೇಳೆ ಕಾರ್ಯಕರ್ತರ ಕಿತ್ತಾಟವೂ ನಡೆದಿದೆ. ಜೆಡಿಎಸ್ ಅಭ್ಯರ್ಥಿ ಸೋಮಶೇಖರ್ ನಿನ್ನೆ ನಾಮಪತ್ರ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿದವರಿಗೆ ಹಣ ಹಂಚಿದ್ದಾರೆ. ಅಲ್ಲದೆ ಜನರು ಹಣ ಪಡೆಯಲು ಮುಗಿ ಬಿದ್ದಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ.
Advertisement
Advertisement
ಸೀರೆ ವಶ:
ನಿನ್ನೆ ಬೆಳಗ್ಗೆ ಮೈಸೂರಿನಲ್ಲಿ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಅಕ್ರಮವಾಗಿ ಸಂಗ್ರಹಿಸಿದ್ದ 30 ಸಾವಿರ ಸೀರೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಮೈಸೂರಿನ ವಿಜಯನಗರ ಬಡಾವಣೆಯ ಮನೆಯಲ್ಲಿ ಈ ಸೀರೆಗಳನ್ನು ಸಂಗ್ರಹಿಸಲಾಗಿತ್ತು. ಬರೋಬ್ಬರಿ 30 ಸಾವಿರ ಸೀರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪ್ರತಿ ಸೀರೆಯ ಜೊತೆ ಸಿ.ಪಿ ಯೋಗೇಶ್ವರ್‍ಗೆ ಮತ ನೀಡಿ ಎನ್ನುವ ಕರಪತ್ರಗಳಿದ್ದವು. ಚೀಲಗಳಲ್ಲಿ ತುಂಬಿಸಿಡಲಾಗಿದ್ದ ಸೀರೆಗಳ ಜೊತೆಗೆ ಅಪಾರ ಪ್ರಮಾಣದ ಕರಪತ್ರಗಳನ್ನು ವಶಪಡಿಸಿಕೊಳ್ಳಲಾದ್ದು, ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Advertisement
ಹಣ ವಶ:
ಇತ್ತ ಚಿಕ್ಕಬಳ್ಳಾಪುರದಲ್ಲಿ ದಾಖಲೆಗಳಿಲ್ಲದ 8.50 ಲಕ್ಷ ರೂ. ನಗದನ್ನು ಚುನಾವಣಾಧಿಕಾರಿಗಳು ಶನಿವಾರ ವಶ ಪಡಿಸಿಕೊಂಡಿದ್ದರು. ನಿನ್ನೆ 2 ಕಡೆ ವಾಹನ ತಪಾಸಣೆ ಮಾಡುತ್ತಿದ್ದ ಚುನಾವಣಾಧಿಕಾರಿಗಳಿಗೆ, ಬಾಗೇಪಲ್ಲಿ ಟೋಲ್ ಗೇಟ್ ಬಳಿ 5 ಲಕ್ಷ ರೂ. ಮತ್ತು ನಂದಿ ಚೆಕ್ ಪೋಸ್ಟ್ ಬಳಿ 3.50 ಲಕ್ಷ ರೂ. ದಾಖಲೆಯಿಲ್ಲದ ಹಣ ಸಿಕ್ಕಿದ್ದು, ಅದನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು.