ನವದೆಹಲಿ: ದಾವಣಗೆರೆ ದಕ್ಷಿಣ (Davanagere South) ಮತ್ತು ಬಾಗಲಕೋಟೆ (Bagalkote) ವಿಧಾನಸಭೆಯ ಉಪಚುನಾವಣೆ ದಿನಾಂಕ ಪ್ರಕಟವಾಗಿದೆ. ಎರಡೂ ಕ್ಷೇತ್ರಗಳಿಗೆ ಏಪ್ರಿಲ್ 9 ರಂದು ಚುನಾವಣೆ ನಡೆದರೆ ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ.
ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಇಂದು ದೆಹಲಿಯಲ್ಲಿ ತಮಿಳುನಾಡು, ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ, ಪುದುಚ್ಚೇರಿ ವಿಧಾನಸಭಾ ಚುನಾವಣಾ ದಿನಾಂಕದ ಜೊತೆ ಗೋವಾ, ಗುಜರಾತ್, ಮಹಾರಾಷ್ಟ್ರ, ನಾಗಾಲ್ಯಾಂಡ್, ತ್ರಿಪುರ ಉಪಚುನಾವಣಾ ದಿನಾಂಕವನ್ನು ಪ್ರಕಟಿಸಿದರು. ಇದನ್ನೂ ಓದಿ: ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

