ನವದೆಹಲಿ: ಎಜ್ಯುಟೆಕ್ ಪ್ರಮುಖ ಕಂಪನಿ ಬೈಜೂಸ್(BYJU’) ತನ್ನ ಜಾಗತಿಕ ರಾಯಭಾರಿಯಾಗಿ ಫುಟ್‌ಬಾಲ್(Football) ತಾರೆ ಲಿನೋನೆಲ್ ಮೆಸ್ಸಿ(Lionel Messi) ಅವರನ್ನು ನೇಮಕ ಮಾಡಿದೆ.
ಅರ್ಜೆಂಟೀನಾ ಫುಟ್‌ಬಾಲ್ ತಂಡದ ನಾಯಕರಾಗಿರುವ ಮೆಸ್ಸಿ, ಸಮಾನ ಶಿಕ್ಷಣವನ್ನು ಉತ್ತೇಜಿಸಲು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು ಬೈಜೂಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
Advertisement
Advertisement
ನಮ್ಮ ಜಾಗತಿಕ ರಾಯಭಾರಿಯಾಗಿರುವ ಲಿಯೋನೆಲ್ ಮೆಸ್ಸಿ ಅವರೊಂದಿಗೆ ಕೆಲಸ ಮಾಡಲು ನಾವು ಉತ್ಸುಕರಾಗಿದ್ದೇವೆ. ಅವರು ತಳಮಟ್ಟದಿಂದ ಬೆಳೆದು ಅತ್ಯಂತ ಯಶಸ್ವಿ ಕ್ರೀಡಾ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಈ ರೀತಿಯ ಅವಕಾಶವನ್ನು BYJU’s ಎಜ್ಯುಕೇಶನ್ ಫಾರ್ ಆಲ್(EFA) ಸೃಷ್ಟಿಸಲು ಬಯಸುತ್ತದೆ ಎಂದು ಬೈಜೂಸ್ ಸಹ-ಸಂಸ್ಥಾಪಕಿ ದಿವ್ಯಾ ಗೋಕುಲನಾಥ್ ಹೇಳಿದ್ದಾರೆ. ಇದನ್ನೂ ಓದಿ: ಬಾಗ್ಲಾ ಸೋತ ಬಳಿಕ ಕೊಹ್ಲಿ ವಿರುದ್ಧ ಫೇಕ್ ಫೀಲ್ಡಿಂಗ್ ಆರೋಪ
Advertisement
ಫುಟ್‌ಬಾಲ್ ಪ್ರಪಂಚದಾದ್ಯಂತ ಸುಮಾರು 3.5 ಶತಕೋಟಿ ಅಭಿಮಾನಿಗಳನ್ನು ಹೊಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಲಿಯೋನೆಲ್ ಮೆಸ್ಸಿ ಸುಮಾರು 45 ಕೋಟಿ ರೂ. ಅಭಿಮಾನಿಗಳನ್ನು ಹೊಂದಿದ್ದಾರೆ. ಬೈಜೂಸ್ ಈ ತಿಂಗಳಿನಿಂದ ಕತಾರ್‌ನಲ್ಲಿ ಆರಂಭವಾಗಲಿರುವ ಫಿಫಾ ವಿಶ್ವಕಪ್‌ನ ಅಧಿಕೃತ ಪ್ರಯೋಜಕತ್ವವನ್ನು ಪಡೆದಿದೆ.