ಬೆಂಗಳೂರು: ಬಿಜೆಪಿ ಟಿಕೆಟ್ ನೀಡುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ರೂ. ವಂಚನೆ ಎಸಗಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ (Chaitra Kundapura) ಗೆಳೆಯ ಶ್ರೀಕಾಂತ್ ವಿರುದ್ಧ ಮತ್ತೊಂದು ಸೆಕ್ಷನ್ ದಾಖಲು ಮಾಡಲಾಗಿದೆ.
ಬಂಡೆಪಾಳ್ಯ ಠಾಣೆಯಲ್ಲಿ ಸಿಸಿಬಿ ಪೊಲೀಸರು ಐಪಿಸಿ ಸೆಕ್ಷನ್ 201 ಹೊಸದಾಗಿ ಸೇರ್ಪಡೆ ಮಾಡಿದ್ದಾರೆ. ಸಿಸಿಬಿ ತನಿಖೆ ವೇಳೆ ಚೈತ್ರಾ ಹಾಗೂ ಗೆಳೆಯ ಆರೋಪಿ ಶ್ರೀಕಾಂತ್ (Shrikanth) ಕಳ್ಳಾಟ ಬಯಲಾಗಿದ್ದು, ಶ್ರೀಕಾಂತ್ ಮೊಬೈಲ್ ಸಂಪೂರ್ಣ ನಾಶ ಮಾಡಲಾಗಿದೆ. ಇದನ್ನೂ ಓದಿ: ಹಬ್ಬಕ್ಕೆ ಊರಿಗೆ ಹೊರಟ ಜನ- ಮೆಜೆಸ್ಟಿಕ್ ಸುತ್ತಮುತ್ತ ಭಾರೀ ಟ್ರಾಫಿಕ್ ಜಾಮ್
ಆರೋಪಿಗಳ ಇಬ್ಬರ ಮೊಬೈಲ್ ಪೋನ್ ತಡಕಾಡಿದ ಸಿಸಿಬಿಗೆ ಮೊಬೈಲ್‌ನಲ್ಲಿರುವ ದತ್ತಾಂಶ ನಾಶವಾಗಿರುವ ವಿಚಾರ ಬೆಳಕಿಗೆ ಬಂದಿದೆ. ಹಾಗಾಗಿ ಆರೋಪಿಗಳ ವಿರುದ್ಧ ಸಾಕ್ಷಿ ನಾಶ ಆರೋಪದ ಮೇಲೆ ಮತ್ತೊಂದು ಸೆಕ್ಷನ್ ಸೇರಿಸಲಾಗಿದೆ.
ವಂಚನೆ ಪ್ರಕರಣ ಸಂಬಂಧ ಎಫ್‌ಐಆರ್ ಆಗುತ್ತಿದ್ದಂತೆ ಶ್ರೀಕಾಂತ್ ಹಾಗೂ ಚೈತ್ರಾ ನಡುವೆ ನಡೆದಿರುವ ಸಂಭಾಷಣೆಗಳನ್ನು ನಾಶ ಮಾಡಲಾಗಿದೆ.
Web Stories