14 ರಾಜ್ಯಗಳ 48 ಕ್ಷೇತ್ರಗಳಿಗೆ ಉಪಚುನಾವಣೆ – 23 ಕ್ಷೇತ್ರಗಳಲ್ಲಿ ಎನ್‌ಡಿಎ ಕಮಾಲ್

Public TV
2 Min Read
NDA alliance

ನವದೆಹಲಿ: ದೇಶದ 14 ರಾಜ್ಯಗಳಲ್ಲಿ 48 ವಿಧಾನಸಭಾ ಕ್ಷೇತ್ರಗಳು ಹಾಗೂ 2 ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆ ಫಲಿತಾಂಶ (Bypoll Election Results) ಹೊರಬಿದ್ದಿದೆ.

ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಗುಜರಾತ್, ಕರ್ನಾಟಕ (Karnataka), ಕೇರಳ, ಮಧ್ಯಪ್ರದೇಶ, ಮೇಘಾಲಯ, ಪಂಜಾಬ್, ರಾಜಸ್ಥಾನ, ಸಿಕ್ಕಿಂ, ಉತ್ತರಾಖಂಡ, ಉತ್ತರ ಪ್ರದೇಶ (Uttar Pradesh) ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ 48 ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು, ಈ ಪೈಕಿ 23 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಮಿತ್ರ ಪಕ್ಷಗಳು ಗೆದ್ದರೆ, ಉಳಿದ ಸ್ಥಾನಗಳು ವಿಪಕ್ಷಗಳ ಪಾಲಾಗಿವೆ.

NDA

ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೊಮ್ಮೆ ಪಾರಮ್ಯ ಮೆರೆದಿದೆ. 9ರ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿ, ಒಂದು ಕ್ಷೇತ್ರದಲ್ಲಿ ಮಿತ್ರ ಪಕ್ಷ ಆರ್‌ಎಲ್‌ಡಿ ಹಾಗೂ 2 ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷ ಗೆದ್ದಿದೆ. ಇದನ್ನೂ ಓದಿ: ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದಿದೆ: ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಮೋದಿ ಕೃತಜ್ಞತೆ

ರಾಜಸ್ಥಾನದಲ್ಲಿ 7 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ 5ರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮತ್ತು ಭಾರತ್‌ ಆದಿವಾಸಿ ಪಕ್ಷ ತಲಾ ಒಂದೊಂದು ಸ್ಥಾನಗಳಲ್ಲಿ ಗೆಲುವು ಕಂಡಿದೆ. ಬಂಗಾಳದಲ್ಲಿ 6 ಸ್ಥಾನಗಳನ್ನೂ ತೃಣಮೂಲ ಕಾಂಗ್ರೆಸ್ ಕ್ಲೀನ್‌ ಸ್ವೀಪ್ ಮಾಡಿದೆ. ಬಿಹಾರದ 4 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟಕ್ಕೆ ಭರ್ಜರಿ ಗೆಲುವಾಗಿದೆ. 4ಕ್ಕೆ ನಾಲ್ಕೂ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಇಂಡಿಯಾ ಒಕ್ಕೂಟಕ್ಕೆ ಆಘಾತ ನೀಡಿದೆ. ಅಸ್ಸಾಂನ 5 ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಎನ್‌ಡಿಎ ಗೆದ್ದಿದೆ. ಇಲ್ಲಿ ಕಾಂಗ್ರೆಸ್ ಖಾತೆ ತೆರೆದಿಲ್ಲ.

ಛತ್ತೀಸ್‌ಘಡ, ಗುಜರಾತ್‌ನ ತಲಾ 1 ಕ್ಷೇತ್ರ ಬಿಜೆಪಿ ತೆಕ್ಕೆಯಲ್ಲೇ ಉಳಿದಿವೆ. ಕೇರಳದ ವಯನಾಡಿನಲ್ಲಿ ಕಾಂಗ್ರೆಸ್‌ ಗೆಲುವು ಕಂಡಿದೆ. ಮಧ್ಯಪ್ರದೇಶದ 2 ಕ್ಷೇತ್ರಗಳಲ್ಲಿ ಬಿಜೆಪಿ-ಕಾಂಗ್ರೆಸ್ ತಲಾ ಒಂದೊಂದು ಸ್ಥಾನ ತೆಕ್ಕೆಗೆ ತೆಗೆದುಕೊಂಡಿವೆ. ಪಂಜಾಬ್‌ನ 4 ಕ್ಷೇತ್ರಗಳಲ್ಲಿ ಮೂರು ಎಎಪಿ, ಒಂದು ಕಾಂಗ್ರೆಸ್ ಪಾಲಾಗಿದೆ. ಉತ್ತರಾಖಂಡದ ಒಂದು ಕ್ಷೇತ್ರವನ್ನು ಬಿಜೆಪಿ ಗೆದ್ದುಕೊಂಡಿದೆ. ಮೇಘಾಲಯದಲ್ಲಿ ಗ್ಯಾಂಬೆಗ್ರೆ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಎನ್‌ಪಿಪಿ ಗೆಲುವು ಸಾಧಿಸಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದಿದ್ದು ಹೇಗೆ? ಆರ್‌ಎಸ್‌ಎಸ್‌ ಏನೇನು ಕಾರ್ಯತಂತ್ರ ಮಾಡಿತ್ತು?

Share This Article