ನವದೆಹಲಿ: 4 ರಾಜ್ಯಗಳಲ್ಲಿ ನಡೆದ 4 ವಿಧಾನಸಭಾ ಕ್ಷೇತ್ರ, 1 ಲೋಕಸಭಾ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿಗೆ ಮುಖಭಂಗವಾಗಿದೆ. 5 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲೂ ಬಿಜೆಪಿಗೆ ಗೆಲುವು ಲಭಿಸಿಲ್ಲ.
ಪಶ್ಚಿಮ ಬಂಗಾಳದ ಅಸನ್ಸೋಲ್‌ನಲ್ಲಿ ಲೋಕಸಭಾ ಕ್ಷೇತ್ರದಲ್ಲಿ ಟಿಎಂಸಿಯ ಶತ್ರುಘ್ನ ಸಿನ್ಹಾ ವಿಜಯ ಸಾಧಿಸಿದ್ದಾರೆ. ಬ್ಯಾಲಿಗುಂಗೆ ಎಂಎಲ್‌ಎ ಕ್ಷೇತ್ರದಲ್ಲಿ ಟಿಎಂಸಿಯ ಬಬುಲ್ ಸುಪ್ರಿಯೋ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಹಾರದ ಬೋಚಹಾನ್‌ನಲ್ಲಿ ಆರ್‌ಜೆಡಿ ಗೆದ್ದಿದ್ದು, ಛತ್ತೀಸ್‌ಗಢದ ಖೈರಾಘಡ ಹಾಗೂ ಮಹಾರಾಷ್ಟ್ರದ ಕೊಲ್ಹಾಪುರ ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ. ಇದನ್ನೂ ಓದಿ: ದೆಹಲಿಯಲ್ಲಿ ಹನುಮಜಯಂತಿ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ, ಹಿಂಸಾಚಾರ
ಈ ಬಾರಿಯ ಉಪಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ನೆಲಕಚ್ಚಿದ್ದು, ಕಾಂಗ್ರೆಸ್ ಗೆಲುವಿನ ಸಂಭ್ರಮಾಚರಣೆ ನಡೆಸಿದೆ. ಫಲಿತಾಂಶದ ಮಧ್ಯೆ ಸೋನಿಯಾ ಗಾಂಧಿಯನ್ನು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಭೇಟಿ ಮಾಡಿದ್ದು, 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಹೇಗೆ ಎದುರಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆದಿದೆ. ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 4ನೇ ದಿನವೂ ಭಾರೀ ಮಳೆ