ಬೆಂಗಳೂರು: ಮೇಕೆದಾಟು ಯೋಜನೆ ವಿವಾದವನ್ನು ಸೂಕ್ಷ್ಮವಾಗಿ ಬಗೆ ಹರಿಸಬೇಕಿದೆ. ದ್ವಂದ್ವ ನಿಲುವಿನ ಕಾಂಗ್ರೆಸ್ ಪಾದಯಾತ್ರೆ ಮಾಡಲು ಬೀದಿಗಿಳಿದಿರುವುದರಿಂದ ಇನ್ನಷ್ಟು ಕ್ಲಿಷ್ಟಕರವಾಗಲಿದೆ. ಮೇಕೆದಾಟು ಯೋಜನೆ ಸ್ಥಗಿತವಾದರೆ ಅದಕ್ಕೆ ನೇರ ಹೊಣೆ ಕಾಂಗ್ರೆಸ್ ಪಕ್ಷವೆಂದು ಸಚಿವ ಭೈರತಿ ಬಸವರಾಜ್ ನೇರ ಆರೋಪ ಮಾಡಿದರು.
ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಗಂಭೀರವಾದ ವಿಷಯ. ಇದನ್ನು ಕಾನೂನಿನ ಮೂಲಕ ಗುಪ್ತವಾಗಿ ಪರಿಹರಿಸಬೇಕಿತ್ತು. ಆದರೆ ಇದೀಗ ರಾಜಕಾರಣಕ್ಕೋಸ್ಕರ ಇದನ್ನ ಜಟಿಲಗೊಳಿಸಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ಬಿಹಾರ ಸಿಎಂ ನಿತೀಶ್ ಕುಮಾರ್‌ಗೆ ಕೊರೊನಾ ಪಾಸಿಟಿವ್
ಹಲವು ರೀತಿಯ ಕಾನೂನು ತೊಡಕುಗಳನ್ನ ನಿವಾರಿಸಬೇಕಿದೆ. ಈ ಪ್ರಕರಣ ಗಂಭೀರವಾಗಿ ತೆಗೆದುಕೊಂಡು ಗುಪ್ತವಾಗಿ ಸಮಾಲೋಚನೆ ಮಾಡುವ ವಿಷಯವನ್ನ ಬೀದಿಗೆ ತಂದಿದ್ದಾರೆ. ಈ ಯೋಜನೆಗೆ ತೊಂದರೆಯಾದರೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಮತ್ತು ಪ್ರತಿಪಕ್ಷ ನಾಯಕರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕಾರಣ ಆಗಿರುತ್ತಾರೆ ಎಂದು ಹೇಳಿದರು.
ಈ ಮೊದಲು ನೀರಾವರಿ ಸಚಿವರಾಗಿ ಮತ್ತು ಮುಖ್ಯಮಂತ್ರಿಯಾಗಿ ಕೆಲಸ ಮಾಡಿ ಎಲ್ಲ ಗೊತ್ತಿದ್ದರು ಈ ರೀತಿಯ ಕೆಲಸ ಮಾಡುವುದು ಸರಿಯಲ್ಲ. ಮೇಕೆದಾಟು ಯೋಜನೆಗೆ ತೊಂದರೆಯಾದರೆ ಕಾಂಗ್ರೆಸ್ ಹೊಣೆಯೆನ್ನುವ ಮೂಲಕ ಪುನರುಚ್ಚಿಸಿದರು.
ಬೆಂಗಳೂರಿನ ಅಭಿವೃದ್ಧಿಗೆ ಹಿಂದೆಂದು ಯಾರು 6 ಸಾವಿರ ಕೋಟಿ ರೂ. ಕೊಟ್ಟಿರಲಿಲ್ಲ. ಸಿಎಂ ಬೊಮ್ಮಾಯಿ ನೀರುಗಾಲುವೆ ಸ್ಟಾಮ್ ವಾಟರ್ ಮೊಟರ್ಸ್‍ಗಳಿಗೆ ಕೊಟ್ಟಿದ್ದಾರೆ. ಈ ಮೂಲಕ ಬೆಂಗಳೂರು ಅಭಿವೃದ್ಧಿಯಾಗುತ್ತೆ ಎಂದು ತಿಳಿಸಿದರು. ಇದನ್ನೂ ಓದಿ: ಹಿರಿಯ ಸಾಹಿತಿ, ರಾಷ್ಟ್ರಪ್ರಶಸ್ತಿ ವಿಜೇತ ಎನ್.ಎಸ್.ದೇವಿಪ್ರಸಾದ್ ನಿಧನ
ಈಗಾಗಲೇ ಪಾಸಿಟಿವ್ ಪ್ರಕರಣಗಳು 9 ಸಾವಿರ ದಾಟುತ್ತಿದೆ. ಇನ್ನೂ ಯಾವ ಪ್ರಮಾಣದಲ್ಲಿ ಏರಿಕೆ ಆಗುತ್ತದೆ ಗೊತ್ತಿಲ್ಲ. ಒಂದು ವೇಳೆ ಕೊರೊನಾ ಜಾಸ್ತಿ ಆದರೆ ಇವರೆ ಹೊಣೆ. ಇದರ ನಡುವೆಯೂ ಬೀದಿಗಿಳಿದು ಹೋರಾಟ ಮಾಡುತ್ತಿರುವುದು ಸಂಪೂರ್ಣ ರಾಜಕೀಯವಾಗಿದೆ. ಕೊರೊನಾ 3ನೇ ಅಲೆ ಸೋಂಕು ತೀವ್ರವಾಗಿ ಹರಡುತ್ತಿರುವ ವೇಳೆ ವಾರಾಂತ್ಯ ಕಫ್ರ್ಯೂ ಅವಧಿಯಲ್ಲೂ ಅವರು ನಿಯಮಾವಳಿ ಉಲ್ಲಂಘಿಸಿ ಭಂಡತನ ಪ್ರದರ್ಶಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಜನತೆಯ ಆರೋಗ್ಯಕ್ಕಿಂತ ರಾಜಕಾರಣವೇ ಅವರಿಗೆ ಮುಖ್ಯವಾಗಿದೆ. ಇದೊಂದು ರಾಜಕೀಯ ಪ್ರಹಸನವಾಗಿದ್ದು, ಜನರೇ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.