– ಬಿಜೆಪಿ ಸೋತ 8 ಕ್ಷೇತ್ರಗಳ ಆತ್ಮಾವಲೋಕನ
– ಸೋಲನ್ನೇ ಗೆಲುವಿನ ಮೆಟ್ಟಿಲು ಮಾಡಿಕೊಳ್ಳಲು ಪಣ
ಬೆಂಗಳೂರು: ಲೋಕಸಭೆ ಫಲಿತಾಂಶ (Lok Sabha Result) ಕುರಿತು ಬಿಜೆಪಿ ನಾಯಕರು ಇಂದಿನಿಂದ ಆತ್ಮಾವಲೋಕನ ಸಭೆ ಆರಂಭಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳು ಸೋತಿರುವ 8 ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳ ಸೋಲಿನ ಬಗ್ಗೆ ಶುಕ್ರವಾರ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ನೇತೃತ್ವದಲ್ಲಿ ಹಾಗೂ ಬಿಜೆಪಿಯ ನೂತನ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್‌ವಾಲ್ ಉಪಸ್ಥಿತಿಯಲ್ಲಿ ಆತ್ಮಾವಲೋಕನ ಸಭೆ ನಡೆಸಲಾಯಿತು.
Advertisement
ಬೆಂಗಳೂರಿನ (Bengaluru) ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ನಡೆದ ಸಭೆಯಲ್ಲಿ ರಾಯಚೂರು, ಕೊಪ್ಪಳ, ಬಳ್ಳಾರಿ, ಕಲಬುರಗಿ ಲೋಕಸಭಾ ಕ್ಷೇತ್ರಗಳ ಪಕ್ಷದ ಪ್ರಮುಖರೊಂದಿಗೆ ಲೋಕಸಭಾ ಚುನಾವಣೆಯ ಫಲಿತಾಂಶದ ಅವಲೋಕನ ಸಭೆ ನಡೆಸಲಾಯಿತು. ಇದನ್ನೂ ಓದಿ: ದರ್ಶನ್ ಗ್ಯಾಂಗ್ ಕ್ರೌರ್ಯ ಮತ್ತಷ್ಟು ಬಯಲು- ಸ್ವಾಮಿಗೆ ಶೆಡ್‍ನಲ್ಲಿ ಊಟ ಕೊಟ್ಟು ಹಲ್ಲೆ
Advertisement
ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ (Lok Sabha BJP Candidates) ಸೋಲಿನ ಕಾರಣಗಳನ್ನು ಅವಲೋಕಿಸಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಿರುವ ಸಂಘಟನಾತ್ಮಕ ಕಾರ್ಯಕ್ರಮಗಳು ಹಾಗೂ ಹೋರಾಟಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಪ್ರತೀ ಕ್ಷೇತ್ರದಿಂದ ಜಿಲ್ಲಾಧ್ಯಕ್ಷರಿಂದ ವರದಿ ಪಡೆದು ಚರ್ಚೆ ಮಾಡಲಾಯ್ತು.
Advertisement
Advertisement
ಮುಖ್ಯವಾಗಿ ಕಾಂಗ್ರೆಸ್‌ನ ಪಂಚ ಗ್ಯಾರಂಟಿಗಳ (Congress Guarantee) ಪರಿಣಾಮ ಎಸ್ಸಿ, ಎಸ್ಟಿ, ಬಡ ವರ್ಗದ ಜನ ಕಾಂಗ್ರೆಸ್ ಕೈಹಿಡಿದಿದ್ದಾರೆ. ಇದೇ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಭಾರೀ ಹಿನ್ನಡೆ ಆಗಲು ಪ್ರಮುಖ ಕಾರಣ ಅನ್ನೋದು ಬಹುತೇಕರು ಅಭಿಪ್ರಾಯ ತಿಳಿಸಿದರು. ಇನ್ನು ಸಂಸದರಾಗಿದ್ದವರಿಗೇ ಟಿಕೆಟ್ ಕೊಟ್ಟಿದ್ದು ಸೋಲಿಗೆ ಪ್ರಮುಖ ಕಾರಣ ಎಂದು ಕ್ಷೇತ್ರದ ಪ್ರಮುಖರು ಅಭಿಪ್ರಾಯ ತಿಳಿಸಿದರು.
ಅಲ್ಲದೇ ಅಭ್ಯರ್ಥಿಗಳ ವಿರುದ್ಧ ವಿರೋಧಿ ಅಲೆ, ಸ್ಥಳೀಯ ಮುಖಂಡರು, ಕಾರ್ಯಕರ್ತರ ವಿರೋಧ ಇದ್ದರೂ ಟಿಕೆಟ್ ಕೊಟ್ಟಿದ್ದೂ ಸೋಲಿಗೆ ಕಾರಣ. ಇದರ ಜೊತೆಗೆ ಸ್ಥಳೀಯ ಬಿಜೆಪಿ ಮುಖಂಡರೇ ಪಕ್ಷ ವಿರೋಧಿ ಕೆಲಸ ಮಾಡಿದ್ದರಿಂದ ನಮ್ಮ ಅಭ್ಯರ್ಥಿಗಳಿಗೆ ಸೋಲಾಯಿತು ಅನ್ನುವ ಅಭಿಪ್ರಾಯ ಹಂಚಿಕೊಳ್ಳಲಾಯ್ತು. ಇದನ್ನೂ ಓದಿ: 15 ದಿನಗಳಲ್ಲಿ 10 ಸೇತುವೆ ಕುಸಿತ – ಜಲಸಂಪನ್ಮೂಲ ಇಲಾಖೆಯ 11 ಎಂಜಿನಿಯರ್ ಅಮಾನತು
ಎಲ್ಲರ ಅಭಿಪ್ರಾಯ ಕೇಳಿದ ಬಳಿಕ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್‌ವಾಲ್, ಸೋಲನ್ನೇ ಮೆಟ್ಟಿಲು ಮಾಡಿಕೊಳ್ಳುವಂತೆಯೂ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಗೆ ಇನ್ನಷ್ಟು ಚುರುಕು ಕೊಡುವಂತೆಯೂ ಸೂಚಿಸಿದರು. ಪರಸ್ಪರ ಒಗ್ಗಟ್ಟು ಕಾಯ್ದುಕೊಂಡು ಸರ್ಕಾರದ ಲೋಪದೋಷಗಳನ್ನು ಹೋರಾಟದ ಮೂಲಕ ಜನತೆಗೆ ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡುವಂತೆ ತಾಕೀತು ಮಾಡಿದರು. ಇದನ್ನೂ ಓದಿ: ಮಲೆನಾಡಿನಲ್ಲಿ ಅಧಿಕ ಮಳೆ – ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು