Advertisements

ಊರು ಹಾಳಾದ್ಮೇಲೆ ಕೋಟೆ ಬಾಗಿಲು ಹಾಕಿದ್ರು: ಮೋದಿಗೆ ಸಿಎಂ ಇಬ್ರಾಹಿಂ ಟಾಂಗ್

ಬೆಳಗಾವಿ: ಊರು ಹಾಳಾದ್ಮೇಲೆ ಕೋಟೆ ಬಾಗಿಲು ಹಾಕಿದರು ಎನ್ನುವಂತಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಸಾಲಮನ್ನಾ ನಡೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ.

Advertisements

ರೈತರ ಸಾಲ ಮನ್ನಾ ಮಾಡಲು ಕೇಂದ್ರ ಚಿಂತನೆ ವಿಚಾರ ಪ್ರತಿಕ್ರಿಯೆ ನೀಡಿದ ಅವರು, ಕಳೆದ ನಾಲ್ಕೂವರೆ ವರ್ಷದಿಂದ ಸುಮ್ಮನಿದ್ದ ಪ್ರಧಾನಿ ಮೋದಿ ಅವರು ಈಗ ರೈತರ ಸಾಲಮನ್ನಾ ಮಾಡುವುದಕ್ಕೆ ಮುಂದಾಗಿದ್ದಾರೆ. ನಾಲ್ಕುವರೆ ವರ್ಷದಿಂದ ಯಾಕೆ ಸುಮ್ಮನಿದ್ದರು ಎಂದು ಪ್ರಶ್ನಿಸಿ ಕುಟುಕಿದರು.

Advertisements

ಇದು ಲೋಕಸಭಾ ಚುನಾವಣೆಯ ಉದ್ದೇಶದಿಂದ ಹೀಗೆ ಮಾಡುತ್ತಿದ್ದಾರೆ. ಪಂಚರಾಜ್ಯ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಪ್ರಧಾನಿ ಮೋದಿ ಅವರಿಗೆ ರೈತರು ನೆನಪಿಗೆ ಬಂದರೇ? ಇದು ಕೇವಲ ನಾಟಕ, ಇದನ್ನ ದೇಶದ ಜನರು ಒಪ್ಪುವುದಿಲ್ಲ ಎಂದು ಕಿಡಿಕಾರಿದರು. ಇದನ್ನು ಓದಿ: ಕೇಂದ್ರ ಸರ್ಕಾರದಿಂದ ರೈತರ 4.5 ಲಕ್ಷ ಕೋಟಿ ರೂ. ಸಾಲಮನ್ನಾ?

2008ರಲ್ಲಿ ಯುಪಿಎ ಸರ್ಕಾರ ರೈತರ 72 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿ ಮತ್ತೊಮ್ಮೆ ಅಧಿಕಾರಕ್ಕೆ ಏರಿತ್ತು. ಈ ನಿಟ್ಟಿಯಲ್ಲಿಯೇ ಎನ್‍ಡಿಎ ಸರ್ಕಾರವು 26 ಕೋಟಿ ರೈತರ ಸುಮಾರು 4.5 ಲಕ್ಷ ಕೋಟಿ ರೂ. ಸಾಲಮನ್ನಾ ಮಾಡಲಿದೆ ಎನ್ನಲಾಗಿತ್ತು. ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಪುರುಷೋತ್ತಮ್ ರೂಪಾಲಾ ಅವರು, ಯಾವುದೇ ಕಾರಣಕ್ಕೂ ರೈತರ ಸಾಲಮನ್ನಾ ಮಾಡುವುದಿಲ್ಲ ಎಂದು ಬಿಗ್ ಶಾಕ್ ಕೊಟ್ಟಿದ್ದಾರೆ. ಇದನ್ನು ಓದಿ: ಸಾಲಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಕೇಂದ್ರದಿಂದ ಬಿಗ್ ಶಾಕ್

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Advertisements
Advertisements
Exit mobile version