ಬೆಂಗಳೂರು: ವಿಧಾನ ಪರಿಷತ್‍ನ ವಿಪಕ್ಷ ನಾಯಕ ಸ್ಥಾನ ಕೈತಪ್ಪಿದ ಹಿನ್ನೆಲೆ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ನಿರ್ಧಾರ ನೋಡಿ ನನಗೆ ಸಂತೋಷ ಆಯಿತು. ಇದರಿಂದ ಶಿವಕುಮಾರ್ ಹಾಗೂ ಬಿ.ಕೆ. ಹರಿಪ್ರಸಾದ್ ಅವರಿಗೆ ಕೆಲಸ ಮಾಡಲು ಅನುಕೂಲವಾಗುತ್ತದೆ. ಅವರಿಬ್ಬರ ವಿಚಾರಧಾರೆ ಒಂದೇ ಆಗಿರುವುದರಿಂದ ಕೆಲಸ ಮಾಡಲು ಅನುಕೂಲವಾಗುತ್ತದೆ ಎಂದು ವ್ಯಂಗ್ಯವಾಡಿದರು.
Advertisement
Advertisement
ಆದಷ್ಟು ಶೀಘ್ರವೇ ಎಂಎಲ್‍ಸಿಗೆ ರಾಜೀನಾಮೆ ಕೊಡುತ್ತೇನೆ. ಈ ಬಗ್ಗೆ ಜೆಡಿಎಸ್ ವರಿಷ್ಠ ದೇವೇಗೌಡರ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು.
Advertisement
ಶಿವಕುಮಾರ್‌ಗೂ ನಮಗೂ ಯಾವತ್ತು ಹೊಂದಾಣಿಕೆ ಆಗಲ್ಲ. ಅವರ ವಿಚಾರಧಾರೆಗಳು ನಮಗೆ ಆಗಲ್ಲ. ನಮಗೆ ಸಿದ್ದರಾಮಯ್ಯ ಜೊತೆ ಹೊಂದಾಣಿಕೆ ಇತ್ತು. ಆದರೆ ಕಾಂಗ್ರೆಸ್‍ಗೂ ನನಗೂ ಮುಗಿದ ಅಧ್ಯಾಯವಾಗಿದೆ. ಸಿದ್ದರಾಮಯ್ಯ ಅವರಿಂದ ನಾನು ಕಾಂಗ್ರೆಸ್‍ಗೆ ಹೋಗಿದ್ದೆ. ಸೋನಿಯಾ ಗಾಂಧಿ ಅವರು ನನ್ನ ಭಾರ ಇಳಿಸಿದ್ದಾರೆ. ನನ್ನ ಹಿತೈಷಿಗಳ ಜೊತೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯಗೆ ಮೂಲ ಕಾಂಗ್ರೆಸ್ಸಿಗರ ಟಕ್ಕರ್
Advertisement
ಸಿದ್ದರಾಮಯ್ಯಗಾಗಿ ಜೈಲಿಗೆ ಹೋಗಿ ಕಟ್ಟಿದ ಪಕ್ಷ ದಳ ಹಾಗೂ ದೇವೇಗೌಡರನ್ನು ಬಿಟ್ಟೆ. ನನ್ನ ನಿರ್ಣಯವನ್ನು ಶೀಘ್ರವಾಗಿ ನಿರ್ಧರಿಸುತ್ತೇನೆ. ಈ ಬಗ್ಗೆ ಕಾಂಗ್ರೆಸ್‍ಗೆ ಉತ್ತರ ಕೊಡಬೇಕು. ಸಿದ್ದರಾಮಯ್ಯ ಅವರನ್ನು ಬಾದಾಮಿಗೆ ಕರೆದೊಯ್ದಿದ್ದೆ. ಅವರಿಗೆ ರಾಜಕೀಯ ಜೀವನ ಕೊಡಲು ಅವರ ಕಾಲಿಗೆ ಬೀಳುತ್ತೇನೆ ಎಂದರು. ಇದನ್ನೂ ಓದಿ: ಕೈನಿಂದಲೇ ಉತ್ತರಾಖಂಡ್ ಮಾಜಿ ಕಾಂಗ್ರೆಸ್ ಮುಖ್ಯಸ್ಥನ ಉಚ್ಛಾಟನೆ
ಚಾಮುಂಡೇಶ್ವರಿ ಸೋಲುತ್ತಾರೆ ಎಂದು ಬಾದಾಮಿಗೆ ಕರೆದೊಯ್ದಿದ್ದೇನೆ. ಅದಕ್ಕೆ ಅವರು ಒಳ್ಳೆ ಉಡುಗೊರೆ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರು ನಾಮಿನೇಷನ್ ಮಾಡಿದ ಫೋಟೋ ತೋರಿಸಿದ ಇಬ್ರಾಹಿಂ ಪಾದಯಾತ್ರೆಯಲ್ಲಿ ಕಾಂಗ್ರೆಸ್‍ಗೆ ಬಂದ ಕೋವಿಡ್‍ಗೆ ಯಾವ ಡೋಸ್‍ನಿಂದಲೂ ಸೋಂಕು ಇಳಿತಿಲ್ಲ. ನಾನು ಕೊಡುವ ಡೋಸ್‍ನಿಂದ ಸೋಂಕು ಇಳಿಯುತ್ತಾ ನೋಡೋಣ ಎಂದು ಕಿಡಿಕಾರಿದರು. ಇದನ್ನೂ ಓದಿ: ಅಶ್ಲೀಲ ಫೋಟೋ ವಾಟ್ಸಪ್ ಗ್ರೂಪ್‍ಗೆ ಹಾಕಿ ಪೇಚೆಗೆ ಸಿಲುಕಿದ ಬಿಜೆಪಿ ಮುಖಂಡ