ರಾಮನಗರ: ಚನ್ನಪಟ್ಟಣ ಉಪಚುನಾವಣೆ ಕಣ ರಂಗೇರಿದ್ದು, ಟಿಕೆಟ್‌ಗಾಗಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (C.P.Yogeshwar) ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ.
ಎರಡನೇ ದಿನವೂ ಹೈಕಮಾಂಡ್ ನಾಯಕರ ಭೇಟಿಯಾಗಿ ಟಿಕೆಟ್ ಗಿಟ್ಟಿಸಲು ಕಸರತ್ತು ನಡೆಸುತ್ತಿರುವ ಸಿ.ಪಿ.ಯೋಗೇಶ್ವರ್, ಟಿಕೆಟ್ ನೀಡಲು ಹೆಚ್ಡಿಕೆ ಹಿಂದೇಟು ಹಾಕುತ್ತಿರುವ ಬಗ್ಗೆಯೂ ಹೈಕಮಾಂಡ್‌ಗೆ ಮನವರಿಕೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಅಧಿಕಾರದ ಭರವಸೆಯಿತ್ತು, 3ನೇ ಬಾರಿಗೆ ಬಿಜೆಪಿಗೆ ಅಧಿಕಾರ ಸಿಗುತ್ತಿದೆ: ರಾಮಲಿಂಗಾ ರೆಡ್ಡಿ
ಈ ಬಾರಿಯ ಸ್ಪರ್ಧೆಯ ಅನಿವಾರ್ಯತೆ ಹಾಗೂ ತಮ್ಮ ಮುಂದಿನ ನಿಲುವುಗಳ ಬಗ್ಗೆ ಹಿರಿಯ ನಾಯಕರಿಗೆ ಸ್ಪಷ್ಟಪಡಿಸಿ ಇಂದು ವಾಪಸ್ಸಾಗುವ ಸಾಧ್ಯತೆ ಇದೆ. ಇತ್ತ ಸಿಪಿವೈ ಪಕ್ಷೇತರರಾಗಿ ಸ್ಪರ್ಧೆ ಮಾಡುವಂತೆ ಬೆಂಬಲಿಗರು ಒತ್ತಾಯ ಮಾಡುತ್ತಿದ್ದಾರೆ.
ಬಿಜೆಪಿ ನಾಯಕರನ್ನ ನಂಬಿ ಕೂತರೆ ನಿಮಗೆ ಉಳಿಗಾಲ ಇಲ್ಲ. ಪಕ್ಷೇತರರಾಗಿ ಸ್ಪರ್ಧೆ ಮಾಡಿ ಎಂದು ಅಭಿಯಾನ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಮಾಡಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವಂತೆ ಆಗ್ರಹಿಸಿದ್ದಾರೆ. ಈ ಮೂಲಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಸೆಡ್ಡು ಹೊಡೆದು ಸಿಪಿವೈ ಪಕ್ಷೇತರ ಸ್ಪರ್ಧೆ ಮಾಡ್ತಾರಾ ಎಂಬ ಕುತೂಹಲ ಹೆಚ್ಚಾಗಿದ್ದು, ಸಿಪಿವೈ ನಡೆ ನಿಗೂಢವಾಗಿದೆ. ಇದನ್ನೂ ಓದಿ: ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯೇ ನಡೆದಿಲ್ಲ: ಸಚಿವ ಕೃಷ್ಣಭೈರೇಗೌಡ