– ಶಿಗ್ಗಾಂವಿ ಕ್ಷೇತ್ರ ಬಾಕಿ ಉಳಿಸಿಕೊಂಡ ಕಾಂಗ್ರೆಸ್ ಹೈಕಮಾಂಡ್
ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣಾ ಕಣ ರಂಗೇರಿದ್ದು, ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ (Congress) ಅಭ್ಯರ್ಥಿಗಳನ್ನು ಘೋಷಿಸಿದೆ.
ಚನ್ನಪಟ್ಟಣಕ್ಕೆ (Channapatna Bypoll) ಸಿ.ಪಿ.ಯೋಗೇಶ್ವರ್ (C.P.Yogeshwar) ಹಾಗೂ ಸಂಡೂರಿಗೆ ಈ.ಅನ್ನಪೂರ್ಣ ಅವರನ್ನು ಹುರಿಯಾಳುಗಳಾಗಿ ಕಾಂಗ್ರೆಸ್ ಅಖೈರುಗೊಳಿಸಿದೆ. ಆದರೆ, ಹೈಕಮಾಂಡ್ ಶಿಗ್ಗಾಂವಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸದೇ ಬಾಕಿ ಉಳಿಸಿಕೊಂಡಿದೆ. ಇದನ್ನೂ ಓದಿ: ಯೋಗೇಶ್ವರ್‌ರನ್ನ ಸೇರಿಸಿಕೊಂಡು ಚನ್ನಪಟ್ಟಣದಲ್ಲಿ ದೌರ್ಬಲ್ಯ ಒಪ್ಪಿಕೊಂಡ ಡಿಕೆಶಿ: ಸಿ.ಟಿ ರವಿ ಟಾಂಗ್
ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಟಿಕೆಟ್‌ಗಾಗಿ ಕಸರತ್ತು ನಡೆಸಿದ್ದ ಸಿ.ಪಿ.ಯೋಗೇಶ್ವರ್‌ಗೆ ನಿರಾಸೆಯಾಯಿತು. ಈ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಅವರು ಕಾಂಗ್ರೆಸ್ ಸೇರ್ಪಡೆಯಾದರು.
ಕಾಂಗ್ರೆಸ್ ಸೇರ್ಪಡೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಿಪಿವೈ ಆಶೀರ್ವಾದ ಪಡೆದುಕೊಂಡರು. ಬಳಿಕ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷ ಸೇರಿದರು. ಸಿಪಿವೈಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ ಬರಮಾಡಿಕೊಂಡರು. ಇದನ್ನೂ ಓದಿ: ಡಿಕೆಶಿ ನೇತೃತ್ವದಲ್ಲಿ ರಾಜಕೀಯ ಜೀವನ ಆರಂಭಿಸಿದ್ದೆ, ಮರಳಿ ಮನೆಗೆ ಬಂದಿದ್ದೇನೆ: ಸಿಪಿ ಯೋಗೇಶ್ವರ್