ಚಾಮರಾಜನಗರ: ಹಾಸ್ಟೆಲ್‍ಗಳನ್ನು ಸರಿಯಾಗಿ ನಿರ್ವಹಣೆ ಮಾಡದ ಅಧಿಕಾರಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಚಳಿ ಬಿಡಿಸಿದ್ದಾರೆ.
ನಗರದ ಪಾಲಿಟೆಕ್ನಿಕ್ ಕಾಲೇಜು ಹಾಸ್ಟೆಲ್‍ಗೆ ಸಚಿವ ಪುಟ್ಟರಂಗಶೆಟ್ಟಿ ಇಂದು ದಿಢೀರನೆ ಭೇಟಿ ನೀಡಿದ್ದಾರೆ. ಅಲ್ಲಿನ ಅವ್ಯವಸ್ಥೆ ಕಣ್ಣಾರೆ ಕಂಡ ಅವರು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸುವಂತೆ ಸೂಚನೆ ನೀಡಿದರು.
Advertisement
ಅಧಿಕಾರಿಗಳ ಸಭೆಗೆ ಹಾಜರಾಗುತ್ತಿದ್ದಂತೆ ಒಬ್ಬೊರನ್ನೇ ಕರೆದು ಫುಲ್ ಕ್ಲಾಸ್ ತೆಗೆದುಕೊಂಡರು. ಹಾಸ್ಟೆಲ್‍ಗಳನ್ನು ಸರಿಯಾಗಿ ಯಾಕೆ ನಿರ್ವಹಿಸುತ್ತಿಲ್ಲ? ಸರ್ಕಾರದಿಂದ ಲಕ್ಷಾಂತರ ರೂಪಾಯಿ ಅನುದಾನ ಬಂದಿರುತ್ತಿದೆ ಅಲ್ಲವೇ? ನೀವು ಹೀಗೆ ಮಾಡುವುದರಿಂದ ಜನ ನಮಗೆ ಬೈತಾರೆ. ನಿಮ್ಮ ಒಳ ಜಗಳದಿಂದ ವಿದ್ಯಾರ್ಥಿಗಳು ಎಲ್ಲಿಗೆ ಹೋಗಬೇಕು? ಕೂಡಲೇ ಸಮಸ್ಯೆಗಳನ್ನು ಸರಿಪಡಿಸಿ ಹಾಸ್ಟೆಲ್‍ಗಳಿಗೆ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
Advertisement
Advertisement
ನಿಮಗೆ ಕೆಲಸ ನಿರ್ವಹಿಸಲು ಅಸಾಧ್ಯ ಎನ್ನುವುದಾದರೆ ನನಗೆ ಹೇಳಿ. ನಾವೇ ಜವಾಬ್ದಾರಿ ಹೊತ್ತುಕೊಳ್ಳುತ್ತೇವೆ. ಒಂದು ವೇಳೆ ಈ ಸಮಸ್ಯೆ ಹೀಗೆ ಮುಂದುವರಿದರೆ ನಿಮ್ಮ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
Advertisement
ವಿವಿಧ ಹಾಸ್ಟೆಲ್‍ಗಳ ವಾರ್ಡನ್ ಗಳನ್ನು ಒಬ್ಬೊರನ್ನಾಗಿ ಕರೆದು ವಿಚಾರಿಸಿ ಕುಂದುಕೊರತೆ ಆಲಿಸಿದರು. ಇದೇ ವೇಳೆ ಅಧಿಕಾರಿಯೊಬ್ಬರಿಗೆ ತರಾಟೆ ತೆಗೆದುಕೊಂಡ ಸಚಿವರು, ನಿಮ್ಮಲ್ಲಿ ಇಂದಿಗೂ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಂಡಿಲ್ಲ. ನೈಜ ಸಮಸ್ಯೆ ಏನು ಅಂತಾ ಪ್ರಶ್ನಿಸಿದರು. ಇದರಿಂದ ಎಚ್ಚೆತ್ತುಕೊಂಡ ಮಹಿಳೆ ಅಧಿಕಾರಿ, ವಿದ್ಯಾರ್ಥಿಗಳ ದಾಖಲಾತಿ ಪ್ರಾರಂಭಿಸುವುದಾಗಿ ತಿಳಿಸಿದರು. ಇದಕ್ಕೆ ಗುಡುಗಿದ ಪುಟ್ಟರಂಗಣಶೆಟ್ಟಿ ಅವರು, ಇನ್ನುಮುಂದೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews