ಸಿದ್ದರಾಮಯ್ಯ, ಡಿಕೆಶಿ ವಿಸ್ಕಿ ಪ್ರಚಾರ ಮಾಡೋದಕ್ಕೆ RCB ಸಂಭ್ರಮ ಕಾರ್ಯಕ್ರಮ ಮಾಡಿದ್ರಾ?: ಸಿ.ಟಿ.ರವಿ ವಾಗ್ದಾಳಿ

Public TV
1 Min Read
ct ravi 3

ಬೆಂಗಳೂರು: ಸರ್ಕಾರಕ್ಕೂ ಆರ್‌ಸಿಬಿಗೂ (RCB) ಏನ್ ಸಂಬಂಧ! ಅದು ಹೇಗೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ಮಾಡಿದ್ರು? ರಾಯಲ್ ಚಾಲೆಂಜರ್ಸ್ ಅಂದ್ರೆ ಏನು..!? ವಿಸ್ಕಿ ಪ್ರಚಾರಕ್ಕೆ ಅಂತಾ ಮಲ್ಯ ಹೇಳಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ ವಿಸ್ಕಿ ಪ್ರಚಾರ ಮಾಡೋದಕ್ಕೆ ಕಾರ್ಯಕ್ರಮ ಮಾಡಿದ್ರಾ ಎಂದು ಪರಿಷತ್ ಸದಸ್ಯ ಸಿ.ಟಿ.ರವಿ (C.T.Ravi) ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯಗೆ (Siddaramaiah) ತಿರುಗೇಟು ನೀಡಿದ ರವಿ, ಆರ್‌ಸಿಬಿ ನಮ್ಮ ರಾಜ್ಯವನ್ನ ಪ್ರತಿನಿಧಿಸಿತ್ತಾ? ರಾಜ್ಯದ ಆಟಗಾರರು ಯಾರು ಇದ್ರು? ಮಾಲೀಕರು ಕರ್ನಾಟಕದವರು ಇದ್ರಾ? ಸರ್ಕಾರಕ್ಕೆ ಮಾಡೋದಕ್ಕೆ ಬೇರೆ ಏನೂ ಕೆಲಸ ಇರಲಿಲ್ಲವಾ? ರಾಜ್ಯದ ಮರ್ಯಾದೆ ಹರಾಜು ಹಾಕಿದ್ದಾರೆ. ಸರ್ಕಾರ ಅನುಮತಿ ‌ಕೊಡದಿದ್ದರೆ ಅಭಿಮಾನಿಗಳು ಸ್ಟೇಡಿಯಂಗೆ ಬರ್ತಾ ಇರಲಿಲ್ಲ. ಇದು ಸರ್ಕಾರದ ಉದ್ದೇಶಪೂರ್ವಕ ನಿರ್ಲಕ್ಷ್ಯ. ಅದಕ್ಕೆ ರಾಜೀನಾಮೆ ಕೇಳ್ತಿರೋದು ಅಂತಾ ವಾಗ್ದಾಳಿ ‌ನಡೆಸಿದರು. ಇದನ್ನೂ ಓದಿ: EXCLUSIVE | ಲೋಕಾಯುಕ್ತ ಲಂಚ ಪ್ರಕರಣಕ್ಕೆ ಡೈರಿ ಮಿಸ್ಟರಿ – ನಿಂಗಪ್ಪ ಮನೆಯಲ್ಲಿದ್ದ 2 ಡೈರಿ ರಿಕವರಿ

DK SHIVAKUMAR SIDDARAMAIAH 1

ಆರ್ಗನೈಸೈಡ್ ಕ್ರೈಂ ಬೇರೆ, ಆಕಸ್ಮಿಕ ಘಟನೆ ಬೇರೆ. ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡಿದ್ದು ಆರ್ಗನೈಸೈಡ್ ಕ್ರೈಂ‌. ಅಹಮದಾಬಾದ್‌ನಲ್ಲಿ ನಡೆದಿರುವುದು ಆಕಸ್ಮಿಕ ಘಟನೆ. ಬೇರೆ ರಾಜ್ಯಗಳಲ್ಲಿ ಆರ್ಗನೈಸೈಡ್ ಕ್ರೈಂ ನಡೆದಿದ್ರೆ, ಅಲ್ಲಿ ಹೋಗಿ ರಾಜೀನಾಮೆ ಕೇಳಲಿ ಎಂದು ಟಾಂಗ್ ಕೊಟ್ಟರು.

ಇದೇ ವೇಳೆ ರಾಮಲಿಂಗಾರೆಡ್ಡಿಗೆ ತಿರುಗೇಟು ನೀಡಿದ ಸಿ.ಟಿ.ರವಿ, ರಾಮಲಿಂಗಾರೆಡ್ಡಿಗೆ ಮನುಷ್ಯತ್ವ ಇದ್ರೆ 11 ಜನರ ಸಾವಿನ ಸಂಕಟ ಕೇಳಲಿ. ಅವರ ಮನೆಗೆ ಹೋಗಿ ನೋಡಲಿ. ಇವರು ಏಕೆ ಅನುಮತಿ ಕೊಟ್ರು? ಇವರು ಅನುಮತಿ ಕೊಟ್ಟಿದ್ದಕ್ಕೆ ಸ್ಟೇಡಿಯಂಗೆ ಬಂದಿದ್ದು. ಸಿಎಂ, ಡಿಸಿಎಂಗೂ‌ ಮನುಷ್ಯತ್ವ ಇಲ್ಲ. ಒಬ್ಬರು ದೋಸೆ ತಿನ್ನಲು ಹೋಗ್ತಾರೆ, ಇನ್ನೊಬ್ಬರು ಕಪ್‌ಗೆ ಮುತ್ತಿಡ್ತಾರೆ ಎಂದು ಸಿಎಂ, ಡಿಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಏನೇ ಆದ್ರೂ ನಾವು 2028ಕ್ಕೆ ಮತ್ತೆ ಪ್ರಮಾಣವಚನ ಸ್ವೀಕಾರ ಮಾಡ್ತೇವೆ: ಡಿಕೆಶಿ

Share This Article