ಬಿಡಿಎ ಭರ್ಜರಿ ಕಾರ್ಯಾಚರಣೆ – 35 ಕೋಟಿ ಮೌಲ್ಯದ ಸಿಎ ಸೈಟ್‌ ವಶಕ್ಕೆ

Public TV
1 Min Read
BDA 2

ಬೆಂಗಳೂರು: ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರಿಸಿದೆ. ಗುರುವಾರ (ಜ.30) ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಬನಶಂಕರಿ 2ನೇ ಹಂತ ಬಡಾವಣೆಯಲ್ಲಿ ನಾಗರಿಕ ಸೌಲಭ್ಯ ನಿವೇಶನವನ್ನು (CA Site) ವಶಪಡಿಸಿಕೊಂಡಿದೆ.

BDA

ಬೆಂಗಳೂರು ದಕ್ಷಿಣ ತಾಲ್ಲೂಕು, ಉತ್ತರಹಳ್ಳಿ ಹೋಬಳಿ, ಕತ್ರಿಗುಪ್ಪೆ ಗ್ರಾಮದ (ಬನಶಂಕರಿ 2ನೇ ಹಂತ) ಸರ್ವೆ ನಂ. 15/1ರಲ್ಲಿನ 18513 ಚದರ ಅಡಿಯ ಪ್ರದೇಶದಲ್ಲಿ ಅನಧಿಕೃವಾಗಿ ನಿರ್ಮಾಣವಾಗಿದ್ದ ಶೆಡ್, ಹಳೇ ಗುಜರಿ ವಾಹನಗಳನ್ನು ತೆರವುಗೊಳಿಸಿ, ಸುಮಾರು 35 ಕೋಟಿ ರೂ. ಮೌಲ್ಯದ ಸಿಎ ನಿವೇಶನಗಳನ್ನು ಪ್ರಾಧಿಕಾರವು ವಶಪಡಿಸಿಕೊಂಡಿದೆ. ಇದನ್ನೂ ಓದಿ: 1 ಲಕ್ಷ ಸಾಲಕ್ಕೆ ತಿಂಗಳಿಗೆ 30 ಸಾವಿರ ಬಡ್ಡಿ – ಹಣ ಕಟ್ಟಲಾಗದೇ ಫೈನಾನ್ಸರ್‌ನನ್ನೇ ಕಿಡ್ನ್ಯಾಪ್ ಮಾಡಿದ್ರು!

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ದಕ್ಷಿಣ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ಇದನ್ನೂ ಓದಿ: ರಣಜಿ ಟ್ರೋಫಿಯಲ್ಲೂ ಕೊಹ್ಲಿಯದ್ದು ಅದೇ ಕಥೆ – 6 ರನ್‌ಗೆ ಔಟಾಗ್ತಿದ್ದಂತೆ ಮೈದಾನದಿಂದ ಹೊರಟ ಫ್ಯಾನ್ಸ್‌

Share This Article