ತಿರುವನಂತಪುರಂ: ಲೋಕಸಭಾ ಪ್ರಣಾಳಿಕೆಯಲ್ಲಿ (Lok Sabha Election) ಪೌರತ್ವ ತಿದ್ದುಪಡಿ ಕಾಯ್ದೆಯ (CAA) ಬಗ್ಗೆ ಯಾವುದೇ ಉಲ್ಲೇಖ ಮಾಡದ್ದಕ್ಕೆ ಕಾಂಗ್ರೆಸ್ (Congress) ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ವಾಗ್ದಾಳಿ ನಡೆಸಿದ್ದಾರೆ.
ಕೊಲ್ಲಂನಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದರೆ ಜಿಎಸ್ಟಿ (GST) ಸೇರಿ, ಸಂವಿಧಾನವನ್ನು ಉಲ್ಲಂಘಿಸಿ ಜಾರಿಗೆ ತರಲಾದ ಹಲವು ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ಕಾಂಗ್ರೆಸ್ ಹೇಳಿದೆ. ಆದರೆ ಸಿಎಎ ಬಗ್ಗೆ ಒಂದು ಶಬ್ದವನ್ನೂ ಉಲ್ಲೇಖಿಸಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಏ.16ಕ್ಕೆ ವಿವಿಪ್ಯಾಟ್ ತಾಳೆಗೆ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ: ಸುಪ್ರೀಂ
Advertisement
Advertisement
ಉದ್ದೇಶಪೂರ್ವಕವಾಗಿಯೇ ಸಿಎಎಯನ್ನು ಹೊರಗಿಡಲಾಗಿದೆ. ವಿವಾದಾತ್ಮಕ ವಿಷಯಗಳ ಬಗ್ಗೆ ಪ್ರಸ್ತಾಪಿಸಲು ಕಾಂಗ್ರೆಸ್ಗೆ ಇರುವ ಭಯವನ್ನು ಇದು ತೋರಿಸುತ್ತದೆ ಎಂದು ದೂರಿದರು.
Advertisement
ಕಾಂಗ್ರೆಸ್ ವಿರುದ್ಧ ವಿಜಯನ್ ಕಿಡಿ ಕಾರುತ್ತಿರುವುದು ಇದು ಮೊದಲೆನಲ್ಲ. ರಾಹುಲ್ ಗಾಂಧಿ (Rahul Gandhi) ವಯನಾಡ್ನಲ್ಲಿ ಸ್ಪರ್ಧಿಸುತ್ತಿರುವುದಕ್ಕೆ ಅವರು ವಿರೋಧ ವ್ಯಕ್ತಪಡಿಸಿದ್ದರು. ಕೇರಳಲ್ಲಿ ಬಿಜೆಪಿ ಖಾತೆ ತೆರೆಯುವುದಿಲ್ಲ ಎನ್ನುವುದು ಎಲ್ಲರಿಗೂ ಗೊತ್ತಿರುವ ಸತ್ಯ ಹೀಗಿರುವಾಗ ಕೇರಳದಲ್ಲಿ ರಾಹುಲ್ ಗಾಂಧಿ ಸ್ಪರ್ಧೆ ಮಾಡುವುದು ಎಷ್ಟು ಸರಿ? ಬಿಜೆಪಿ (BJP) ಪ್ರಬಲವಿರುವ ರಾಜ್ಯಗಳಲ್ಲಿ ರಾಹುಲ್ ಸ್ಪರ್ಧಿಸಬೇಕು ಎಂದು ಎಂದು ಹೇಳಿದ್ದರು. ಇದನ್ನೂ ಓದಿ: ಕೇಜ್ರಿವಾಲ್ ಇತರರೊಂದಿಗೆ ಸೇರಿ ಪಿತೂರಿ ನಡೆಸಿದ್ದಾರೆ – ಜಾಮೀನು ಅರ್ಜಿ ವಜಾ
Advertisement
INDIA ಒಕ್ಕೂಟದಲ್ಲಿ ಸಿಪಿಎಂ ಪಕ್ಷವೂ ಭಾಗವಾಗಿದೆ. ಆದರೆ ಕೇರಳದಲ್ಲಿ ಕಾಂಗ್ರೆಸ್ ವಿರುದ್ಧ ಸಿಪಿಎಂ ಈ ಬಾರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ.