– 40 ವರ್ಷಗಳ ಹೋರಾಟಕ್ಕೆ ಸಿಕ್ಕ ಫಲ
ರಾಯಚೂರು: ಪೌರತ್ವ ತಿದ್ದುಪಡಿ ಕಾಯ್ದೆ (CAA) ಅಡಿಯಲ್ಲಿ ರಾಜ್ಯದಲ್ಲಿ ವಾಸಿಸುತ್ತಿರುವ ಐವರು ಬಾಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ (Indian Citizenship) ಸಿಕ್ಕಿದೆ.
Advertisement
ರಾಯಚೂರು (Raichur) ಜಿಲ್ಲೆ ಸಿಂಧನೂರು ತಾಲೂಕಿನ ಆರ್.ಎಚ್ ಕ್ಯಾಂಪ್‌ಗಳಲ್ಲಿ ವಾಸವಿರುವ ಐವರಿಗೆ ಭಾರತೀಯ ಪೌರತ್ವ ಸಿಕ್ಕಿದೆ. ಆರ್.ಎಚ್‌ಕ್ಯಾಂಪ್‌ಗಳಲ್ಲಿರುವ ರಾಮಕೃಷ್ಣನ್ ಅಭಿಕರಿ, ಸುಕುಮಾರ ಮೊಂಡಲ್, ಬಿ. ಪ್ರದಾಸ ಗೋಲ್ದರ್, ಜಯಂತ ಮೊಂಡಲ್, ಅದ್ವಿತ ಕೇಂದ್ರ ಗೃಹ ಇಲಾಖೆಯಿಂದ ಪೌರತ್ವ ಪಡೆದ ಬಾಂಗ್ಲಾ ವಲಸಿಗರಾಗಿದ್ದಾರೆ. ಜನಗಣತಿ ಕಾರ್ಯಾಚರಣೆ ಹಾಗೂ ನಾಗರಿಕ ನೋಂದಣಿ ನಿರ್ದೇಶನಾಲಯದಿಂದ ಅಧಿಕೃತವಾಗಿ ಪೌರತ್ವ ಪತ್ರ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ – ಕೇಂದ್ರದಿಂದ ಅಧಿಸೂಚನೆ ಪ್ರಕಟ
Advertisement
Advertisement
ಬಾಂಗ್ಲಾ ವಲಸಿಗರು ಇಲ್ಲಿ ಆಶ್ರಯ ಪಡೆದಿದ್ದೇಗೆ?
1971ರ ಬಾಂಗ್ಲಾದೇಶ ವಿಮೋಚನಾ ವೇಳೆ ಬಾಂಗ್ಲಾ ಹಾಗೂ ಬರ್ಮಾ ವಲಸಿಗರಿಗೆ ಭಾರತದಲ್ಲಿ ಆಶ್ರಯ ನೀಡಲಾಗಿತ್ತು. ಈ ವೇಳೆ ಸಿಂಧನೂರು ತಾಲೂಕಿನಲ್ಲಿ ಸುಮಾರು 932 ಕುಟುಂಬಗಳಿಗೆ 5 ಸಾವಿರ ಎಕರೆ ಜಮೀನು ನೀಡಲಾಗಿತ್ತು. 1971ರ ಬಳಿಕ ಬಂದ ಕುಟುಂಬಗಳಿಗೆ ಪೌರತ್ವ ಹಾಗೂ ಯಾವುದೇ ಸೌಲಭ್ಯ ನೀಡಿರಲಿಲ್ಲ. ಪೌರತ್ವಕ್ಕಾಗಿ ನಿರಾಶ್ರಿತರು ಕಳೆದ 40 ವರ್ಷಗಳಿಂದ ಅರ್ಜಿ ಹಾಕುತ್ತಲೇ ಇದ್ದರು. ಅದರಂತೆ ಐವರಿಗೆ ಪೌರತ್ವ ಸಿಕ್ಕಿದೆ. ಪೌರತ್ವ ಕೋರಿ ಒಟ್ಟು 146 ಅರ್ಜಿಗಳು ಸಲ್ಲಿಕೆಯಾಗಿತ್ತು. ಈ ಪೈಕಿ ಆರ್.ಎಚ್ ಕ್ಯಾಂಪ್‌ನಲ್ಲಿ ವಾಸಿಸುತ್ತಿರುವ ಐವರಿಗೆ ಪೌರತ್ವ ದೊರೆತಿದೆ. ಇದನ್ನೂ ಓದಿ: Koppala | ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ನ ಚೈನ್ ಲಿಂಕ್ ಕಟ್ – ಜನರಲ್ಲಿ ಆತಂಕ!
Advertisement
ಸಿಎಎಯಲ್ಲಿ ಏನಿದೆ?
ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ಥಾನದಲ್ಲಿ ಕಿರುಕುಳಕ್ಕೆ ಒಳಗಾದ ಮುಸ್ಲಿಮೇತರರಿಗೆ ಭಾರತದ ಪೌರತ್ವ (Citizenship) ನೀಡಲಾಗುತ್ತದೆ. 2014ರ ಡಿಸೆಂಬರ್ 31ಕ್ಕೆ ಮೊದಲು ರಕ್ಷಣೆ ಬಯಸಿ ಭಾರತಕ್ಕೆ ಶರಣಾರ್ಥಿಗಳಾಗಿ ಬಂದಿರುವ ಹಿಂದೂಗಳು, ಕ್ರೈಸ್ತರು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳಿಗೆ ಮಾತ್ರ ಸಿಎಎ ಅನ್ವಯ ಪೌರತ್ವ ನೀಡಲಾಗುತ್ತದೆ. ಪೌರತ್ವ ನೋಂದಣಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿಯೇ ಮುಗಿಯಲಿದ್ದು, ದೇಶದಲ್ಲಿರುವ ಮುಸ್ಲಿಮರಿಗೆ ಸಿಎಎಯಿಂದ ಯಾವುದೇ ತೊಂದರೆ ಆಗುವುದಿಲ್ಲ. ಇದನ್ನೂ ಓದಿ: TB ಡ್ಯಾಮ್ ಪರಿಶೀಲನೆಗೆ ಬೆಂಗಳೂರು, ಹೈದರಾಬಾದ್, ಚೆನ್ನೈನಿಂದ ತಜ್ಞರ ತಂಡ ಆಗಮನ: ತಂಗಡಗಿ