ಲಕ್ನೋ: ಮೋದಿ ಗ್ಯಾರಂಟಿಗೆ (Modi Guarantee) ತಾಜಾ ಉದಾಹರಣೆ ಸಿಎಎ. ಸಿಎಎ (CAA) ಅಡಿಯಲ್ಲಿ ಪೌರತ್ವ ಪ್ರಮಾಣ ಪತ್ರ ನೀಡಲು ಆರಂಭಿಸಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.
ಉತ್ತರ ಪ್ರದೇಶದ (Uttar Pradesh) ಲಾಲ್‌ಗಂಜ್‌ನಲ್ಲಿ (Lalganj) ಮಾತನಾಡಿದ ಅವರು, ವಿದೇಶಗಳಿಂದ ಬಂದಿರುವ ಅಲ್ಪಸಂಖ್ಯಾತರು ನಮ್ಮ ದೇಶದಲ್ಲಿದ್ದಾರೆ. ಧರ್ಮದ ಆಧಾರದ ಮೇಲೆ ದೇಶ ಹಂಚಿಕೆಯಾದಾಗ ಬಲಿಯಾದವರು ಇವರು. ಅವರು ಯಾವಾಗ ಬೇಕಾದರೂ ಬರಬಹುದು ಎಂದು ಗಾಂಧೀಜಿ ಹೇಳಿದ್ದರು. ಆದರೆ ಕಾಂಗ್ರೆಸ್ ಈ ಜನರ ಬಗ್ಗೆ ಗಮನಿಸಿಲ್ಲ. ಇಲ್ಲಿನ ಮತಬ್ಯಾಂಕ್‌ಗಾಗಿ ಗಮನಿಸಿಲ್ಲ. ದಲಿತ, ಓಬಿಸಿ ಸಮುದಾಯದ ಜನರು ಕಷ್ಟದಲ್ಲಿದ್ದರು. ಅವರನ್ನು ಕರೆತರುವ ಕೆಲಸ ನಾವು ಮಾಡಿದ್ದೇವೆ ಎಂದರು. ಇದನ್ನೂ ಓದಿ: ರಾಹುಲ್ ಗಾಂಧಿ ಪರ ಡಿಕೆಶಿ ಪ್ರಚಾರ – ಮೋದಿಗೆ ಸಾಲು ಸಾಲು ಪ್ರಶ್ನೆ
Advertisement
Advertisement
ಹತ್ತು ವರ್ಷಗಳ ಹಿಂದೆ ಜನರು ದೇವರ ಭರವಸೆಯಲ್ಲಿ ಬದುಕುತ್ತಿದ್ದರು. ಕೆಲವು ಕಡೆ ಬಾಂಬ್ ದಾಳಿ, ಕೆಲವು ಕಡೆ ಸ್ಲೀಪರ್ ಸೆಲ್, ಕೆಲವು ಕಡೆ ಕೋಮು ಘರ್ಷಣೆ, ಇನ್ನೂ ಕೆಲವು ಕಡೆ ಭಯೋತ್ಪಾದನೆಯಿಂದ ಸಂಕಷ್ಟ ಪರಿಸ್ಥಿತಿ ಇತ್ತು. ಸಾವಿರಾರು ತಾಯಂದಿರು ತಮ್ಮ ಮಕ್ಕಳನ್ನು ಕಳೆದುಕೊಂಡರು. ಈ ಹಿಂದಿನ ಸರ್ಕಾರಗಳು ಇಂತಹ ಜನರಿಗೆ ಸಹಕಾರ ನೀಡುತ್ತಿದ್ದವು. ಈಗಲೂ ನಿಮ್ಮ ಮೀಸಲಾತಿಯನ್ನು ಕಿತ್ತು ಸಮುದಾಯವೊಂದಕ್ಕೆ ನೀಡಲು ಚಿಂತಿಸಿವೆ. ಬಜೆಟ್ 15% ಅಲ್ಪಸಂಖ್ಯಾತರ ಹೆಸರಿನಲ್ಲಿ ಹೋಗುತ್ತಿದೆ. 70 ವರ್ಷಗಳಿಂದ ಹಿಂದೂ-ಮುಸ್ಲಿಂ ರಾಜಕೀಯ ಮಾಡಿವೆ. ನಾವು ಒಂದಾಗಿ ಹೋಗಬೇಕು. ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಉಚಿತ ಪಡಿತರ ಜನರ ತೆರಿಗೆ ಹಣದಿಂದ ನೀಡಲಾಗುತ್ತಿದೆ, ದಯೆ ರೂಪದಲ್ಲಿ ಬಿಂಬಿಸುವ ಅಗತ್ಯವಿಲ್ಲ: ಮಾಯಾವತಿ ಟೀಕೆ
Advertisement