ಮೊಬೈಲಿನಲ್ಲಿ ದೆಹಲಿಯ ಹಿಂಸಾತ್ಮಕ ಪ್ರತಿಭಟನೆ ವಿಡಿಯೋ ಇಟ್ಟುಕೊಂಡಿದ್ದ ವ್ಯಕ್ತಿ ಅರೆಸ್ಟ್

Public TV
2 Min Read
mobile

ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ(ಜೆಎಂಐ) ವಿದ್ಯಾರ್ಥಿಗಳ ಪ್ರತಿಭಟನೆ ಹಿಂಸಾಚಾರ ತಿರುಗಿತ್ತು. ಈ ವಿಡಿಯೋವನ್ನು ತನ್ನ ಮೊಬೈಲಿನಲ್ಲಿ ಇಟ್ಟುಕೊಂಡಿದ್ದ ಎಂದು ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಚಂದೌಸಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ವ್ಯಕ್ತಿಯನ್ನು ಹಾಗೂ ಆತನ ಮೊಬೈಲ್ ಪರಿಶೀಲಿಸಿದ್ದು, ಈ ವೇಳೆ ವಿಡಿಯೋಗಳಿರುವುದು ಬೆಳಕಿಗೆ ಬಂದಿದೆ. ತಕ್ಷಣ ಮೊಬೈಲನ್ನು ಮುಟ್ಟುಗೋಲು ಹಾಕಿಕೊಂಡು, ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

delhi protest e1576592787804

ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 505(ಯಾವುದೇ ವರ್ಗ ಅಥವಾ ಸುಮುದಾಯದ ವಿರುದ್ಧ ಅಪರಾಧ ಹಾಗೂ ಪ್ರಚೋದನೆ ನೀಡುವುದು) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66ಎ ಅಡಿ ಪ್ರಕರಣ ದಾಖಲಿಸಲಾಗಿದೆ.

ಜೆಎಂಐ ವಿದ್ಯಾರ್ಥಿಗಳು ದೆಹಲಿಯಲ್ಲಿ ನಡೆಸಿದ ಪ್ರತಿಭಟನೆಯ ಡಜನ್‍ಗೂ ಅಧಿಕ ವಿಡಿಯೋಗಳನ್ನು ಮೊಬೈಲಿನಲ್ಲಿ ಇಟ್ಟುಕೊಂಡಿದ್ದನೆಂದು ಪೊಲೀಸರು ಆರೋಪಿಸಿದ್ದಾರೆ. ಇಂತಹ ವಿಡಿಯೋಗಳು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಹದಗೆಡಿಸುತ್ತವೆ ಹೀಗಾಗಿ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದ ಸುಮಾರು 10-11 ವಿಡಿಯೋಗಳು ಮೊಬೈಲಿನಲ್ಲಿದ್ದವು. ಈ ವಿಡಿಯೋಗಳು ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವಂತಿದ್ದವು ಎಂದು ಎಫ್‍ಐಆರ್‍ನಲ್ಲಿ ನಮೂದಿಸಲಾಗಿದೆ. ಪ್ರತಿಭಟನೆ ವೇಳೆ ಹಿಂಸಾಚಾರ ನಡೆಸಿದ್ದಕ್ಕಾಗಿ ದೆಹಲಿ ಪೊಲೀಸರು ಈಗಾಗಲೇ ಸ್ಥಳೀಯ ಕಾಂಗ್ರೆಸ್ ಮುಖಂಡರು ಸೇರಿದಂತೆ 10 ಜನ ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ಇದರಲ್ಲಿ ಜಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳನ್ನು ಬಂಧಿಸಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

Police Jeep

ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಹೀಗಾಗಿ ಪೊಲೀಸರು ಮೂವರು ವಿದ್ಯಾರ್ಥಿಗಳು ಹಾಗೂ ಕಾಂಗ್ರೆಸ್‍ನ ಮಾಜಿ ಶಾಸಕನ ವಿರುದ್ಧ ಬುಧವಾರ ಎಫ್‍ಐಆರ್ ದಾಖಲಿಸಿದ್ದರು. ಡಿ.17ರಂದು ನಡೆದ ತೀವ್ರ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರು ಪೊಲೀಸರ ಮೇಲೆ ಸಹ ಹಲ್ಲೆ ನಡೆಸಿದ್ದರು. ಹೀಗಾಗಿ ಪೊಲೀಸರು ಹಿಂಸಾತ್ಮಕ ಪ್ರತಿಭಟನಾಕಾರರ ವಿರುದ್ಧ ಗಲಭೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ತಡೆ ಕಾಯ್ದೆಯಡಿ ಎಫ್‍ಐಆರ್ ದಾಖಲಿಸಿದ್ದರು.

ಪ್ರತಿಭಟನೆಯ ವೇಳೆ ದೆಹಲಿ ನಗರ ಸಾರಿಗೆ ಬಸ್ಸುಗಳಿಗೆ ಬೆಂಕಿ ಹಚ್ಚಿ, ರಸ್ತೆ ಹಾಗೂ ಸಾರೈ ಜುಲೆನಾ ಪೊಲೀಸ್ ಬೂತ್‍ನಲ್ಲಿದ್ದ ಹಲವು ವಾಹನಗಳನ್ನು ಧ್ವಂಸ ಮಾಡಿದ್ದರು. ಪರಿಸ್ಥಿತಿ ಹತೋಟಿಗೆ ಬಾರದೇ ಇದ್ದಾಗ ಗುಂಪು ಚದುರಿಸಲು ಪೊಲೀಸರು ಗ್ಯಾಸ್ ಫಿರಂಗಿ ಬಳಸಿದ್ದರು. ಆದರೂ ಪ್ರತಿಭಟನಾಕಾರರು ಗೇಟ್ ನಂ.4.7 ಹಾಗೂ 8ರಿಂದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಆಗ ಪೊಲೀಸ್ ಸಿಬ್ಬಂದಿ ವಿಶ್ವವಿದ್ಯಾಲಯದೊಳಗೆ ಪ್ರವೇಶಿಸಿ ಹಿಂಸಾತ್ಮಕ ಪ್ರತಿಭನಾಕಾರರನ್ನು ಎಳೆತಂದು ಎಫ್‍ಐಆರ್ ದಾಖಲಿಸಿದ್ದರು.

ಈ ಸಂದರ್ಭದಲ್ಲಿ ಹಲವು ಪೊಲೀಸ್ ಸಿಬ್ಬಂದಿಗೆ ತೀವ್ರ ಗಾಯಗಳಾಗಿದ್ದವು. ಇಷ್ಟಾದರೂ ಪ್ರತಿಭಟನಾಕಾರರು ಟಿಕೋನಾ ಪಾರ್ಕ್, ಝಾಕೀರ್ ನಗರ, ಧಲನ್ ಪೊಲೀಸ್ ಬೂತ್ ಬಳಿಯ ಸುಮಾರು 70 ರಿಂದ 80 ಬೈಕ್‍ಗಳನ್ನು ಧ್ವಂಸ ಮಾಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *