ಮೈಸೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಈಗಾಗಲೇ ಹಿಂಸಾತ್ಮಕ ಹಾಗೂ ನಾನಾ ರೀತಿಯಲ್ಲಿ ಪ್ರತಿಭಟನೆಗಳು ನಡೆದಿವೆ. ಅದರ ಮುಂದುವರಿದ ಭಾಗವಾಗಿ ಮೈಸೂರಲ್ಲಿ ರಂಗೋಲಿ ಸ್ಪರ್ಧೆ ಏರ್ಪಡಿಸುವ ಮೂಲಕ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.
ಕೆಪಿಸಿಸಿ ಮಹಿಳಾ ಘಟಕದಿಂದ ಮೈಸೂರಿನ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಈ ರಂಗೋಲಿ ಸ್ಪರ್ಧೆ ನಡೆಯಿತು. 20ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು. ರಂಗೋಲಿ ಮೂಲಕ ಪ್ರತಿಭಟನಾ ಸಂದೇಶ ಸಾರಿದರು.
Advertisement
Advertisement
ರಂಗೋಲಿ ಬಿಡಿಸಿ ಅದರ ಒಳಗಡೆ ನೋ ಸಿಎಎ, ನೋ ಎನ್‍ಆರ್‍ಸಿ ಎಂದು ಬರೆದಿದ್ದರು. ಈ ಮೂಲಕ ಕಾಂಗ್ರೆಸ್ ಮಹಿಳಾ ಘಟಕದ ಸದಸ್ಯೆಯರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ಈ ಸ್ಪರ್ಧೆ ನಡೆಯಿತು.