ಕೋಲ್ಕತ್ತಾ: ಮುಂದಿನ ಏಳು ದಿನಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ (Shantanu Thakur) ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ (West Bengal) 24 ಪರಗಣ ಜಿಲ್ಲೆಯ ಕಾಕ್‌ದ್ವಿಪ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಮುಂದಿನ ಏಳು ದಿನಗಳಲ್ಲಿ ಸಿಎಎ ಕಾಯ್ದೆ ದೇಶಾದ್ಯಂತ ಅನುಷ್ಠಾನಕ್ಕೆ ಬರಲಿದೆ ಎಂದು ಹೇಳುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ಹೇಳಿಕೆಯನ್ನ ಪುನರುಚ್ಚರಿಸಿದ್ದಾರೆ. ಇದನ್ನೂ ಓದಿ: ಟೆಕ್ಕಿ ಯುವತಿಯನ್ನ ಗುಂಡಿಕ್ಕಿ ಹತ್ಯೆಗೈದ ಪ್ರಿಯತಮ – ಪೊಲೀಸರು ಪ್ರಕರಣ ಭೇದಿಸಿದ್ದು ಹೇಗೆ?
Advertisement
Advertisement
ಕಳೆದ ವರ್ಷ ಡಿಸೆಂಬರ್‌ನಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಿಎಎ ಕಾಯ್ದೆಯನ್ನು ಅನುಷ್ಟಾನಕ್ಕೆ ತರಲಿದೆ. ಅದನ್ನ ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದ್ದರು. ಇದಕ್ಕೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಕ್ಷೇಪ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಇಂದು ಸಂಜೆ 5 ಕ್ಕೆ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ – BJPಯ ಇಬ್ಬರು ಡಿಸಿಎಂ
Advertisement
Advertisement
2019ರಲ್ಲಿ ‘ಸಿಎಎ’ ವಿಧೇಯಕವನ್ನು ಸಂಸತ್ತು ಅನುಮೋದಿಸಿತ್ತು. ರಾಷ್ಟ್ರಪತಿಗಳ ಅಂಕಿತ ಬಿದ್ದ ನಂತರ ಪ್ರತಿಪಕ್ಷಗಳ ನೇತೃತ್ವದಲ್ಲಿ ದೇಶಾದ್ಯಂತ ಭಾರಿ ಪ್ರತಿಭಟನೆಗಳು ನಡೆದಿದ್ದವು. ಈ ಕಾಯಿದೆಯು ತಾರತಮ್ಯ ನೀತಿಯಿಂದ ಕೂಡಿದ್ದು, ಇದನ್ನು ವಾಪಾಸ್ ಪಡೆಯಬೇಕು ಮುಸ್ಲಿಂ ಸಮುದಾಯ ಹಾಗೂ ಪ್ರತಿಪಕ್ಷಗಳಿಂದ ದೊಡ್ಡ ಪ್ರಮಾಣದ ಪ್ರತಿಭಟನೆಗಳು ವ್ಯಕ್ತವಾಗಿದ್ದವು. ಗಲಭೆಗಳಲ್ಲಿ ದೇಶದ ವಿವಿಧೆಡೆ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಇದನ್ನೂ ಓದಿ: ಕಸ ಮತ್ತೆ ಡಸ್ಟ್‌ಬಿನ್‌ಗೆ ಹೋಗಿದೆ – ಪಕ್ಷ ತೊರೆದ ನಿತೀಶ್ ಕುಮಾರ್‌ಗೆ ಲಾಲೂ ಪುತ್ರಿ ಟಾಂಗ್