ಬೆಂಗಳೂರು: ರಾಜ್ಯಪಾಲ ವಜೂಭಾಯಿ ವಾಲಾ ಆಗಮಿಸುತ್ತಿದ್ದ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ.
ಮಂಗಳವಾರ ರಾತ್ರಿ ಸುಮಾರು 10.50ಕ್ಕೆ ಸುಮಾರಿಗೆ ಯಲಹಂಕ ಏರ್‍ಫೋರ್ಸ್ ಮುಂಭಾಗದಲ್ಲಿ ಎಲಿವೇಟೆಡ್ ರಸ್ತೆ ಸಂಚಾರ ನಿರ್ಬಂಧಿಸಿ ಟ್ರಾಫಿಕ್ ನಿಯಂತ್ರಣ ಮಾಡಲಾಗಿತ್ತು. ರಾಜ್ಯಪಾಲರು ಇನ್ನೇನು ಕೆಲವೇ ನಿಮಿಷಗಳಲ್ಲಿ ಆಗಮಿಸುವ ವೇಳೆ ಕ್ಯಾಬ್, ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೇಡ್‍ಗಳಿಗೆ ಡಿಕ್ಕಿ ಹೊಡೆದಿದೆ.
ಬ್ಯಾರಿಕೇಡ್ ಗಳ ಮುಂದೆ ನಿಂತಿದ್ದ 6 ಜನ ಪೇದೆಗಳು ಪಕ್ಕಕ್ಕೆ ಜಿಗಿದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.