ಬೆಂಗಳೂರು: ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಸಭೆ ಸಮಾರಂಭಗಳಿಗೆ ಬ್ರೇಕ್ ಹಾಕುವ ಮಸೂದೆ ಮಂಡನೆಗೆ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಧರ್ಮಾಧಾರಿತ ಸಭೆ-ಸಮಾರಂಭಗಳಿಗೆ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದ್ದು, ಈ ಸಂಬಂಧ ಇದೇ ಅಧಿವೇಶನದಲ್ಲಿ ಮಸೂದೆ ಮಂಡನೆಗೆ ನಿರ್ಧರಿಸಿದೆ. ಅಲ್ಲದೇ, ಸಾರ್ವಜನಿಕ ಸ್ಥಳಗಳಲ್ಲೂ ಕೆಲವು ಚಟುವಟಿಕೆಗಳ ನಿರ್ಬಂಧ ಸಂಬಂಧ ಬಿಲ್ ಮಂಡನೆಗೆ ಇಂದಿನ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದನ್ನೂ ಓದಿ: Parliament Session | ಲೋಕಸಭೆಯಲ್ಲಿ 11 ಬಿಲ್ ಚರ್ಚೆಯಿಲ್ಲದೇ ಪಾಸ್ – 1 ಮಸೂದೆ ಪೂರ್ಣ ಚರ್ಚೆ ಬಳಿಕ ಅಂಗೀಕಾರ
ಖಾಸಗಿ ಸಂಘ ಸಂಸ್ಥೆ/ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆ ಕಾನೂನುಬದ್ಧವಾಗಿ ನಡೆಸಲು ಪೂರ್ವಾನುಮತಿ ಪಡೆಯಲು ಹೊರಡಿಸಿದ್ದ ಆದೇಶ ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ.
ಆದೇಶ ಹಿಂಪಡೆದು ಕರ್ನಾಟಕ ರಾಜ್ಯ ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ 2026 ಮಂಡನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ. ಇದನ್ನೂ ಓದಿ: ಕಾರಾಗೃಹ ವ್ಯವಸ್ಥೆಯ ಲೋಪದಲ್ಲಿ ಯಾರೇ ಇದ್ದರೂ ಅವರ ಮೇಲೆ ಕ್ರಮ: ಪ್ರಿಯಾಂಕ್ ಖರ್ಗೆ

