ನವದೆಹಲಿ: ಯುಗಾದಿ (Yugadi) ಹಬ್ಬದ ಹೊತ್ತಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (DA) ಶೇ.2ರಷ್ಟು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಈ ಮೂಲಕ ತುಟ್ಟಿಭತ್ಯೆ ಶೇ.53ರಿಂದ ಶೇ.55ಕ್ಕೇರುತ್ತದೆ. ತುಟ್ಟಿಭತ್ಯೆ ಹೆಚ್ಚಳದಿಂದಾಗಿ 1.5 ಕೋಟಿ ಕೇಂದ್ರ ಸರ್ಕಾರಿ ನೌಕರರು (Central Government Employess) ಹಾಗೂ ಪಿಂಚಣಿದಾರರು ಅನುಕೂಲ ಪಡೆದುಕೊಳ್ಳಲಿದ್ದಾರೆ.ಇದನ್ನೂ ಓದಿ:ಇಂದು ಬಿಬಿಎಂಪಿ ಬಜೆಟ್ ಮಂಡನೆ – ಪ್ರಸಕ್ತ ವರ್ಷ 6,000 ಕೋಟಿ ತೆರಿಗೆ ವಸೂಲಿಗೆ ಪ್ರಸ್ತಾವನೆ ಸಾಧ್ಯತೆ!
ಇನ್ನೂ ಕಳೆದ ವರ್ಷ ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.50ರಿಂದ ಶೇ.53ಕ್ಕೇರಿಕೆಯಾಗಿತ್ತು. ಇದೀಗ ಸರ್ಕಾರ ಅದನ್ನು ಶೇ.2ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ಈ ಡಿಎ ಇದೇ ಜನವರಿಯಿಂದ ಅನ್ವಯವಾಗಲಿದ್ದು, ಮಾರ್ಚ್ ತಿಂಗಳ ಸಂಬಳದಲ್ಲಿ ಮೂರು ತಿಂಗಳ ಅರಿಯರ್ಸ್ ಸೇರಿ ಖಾತೆಗೆ ಜಮೆಯಾಗಲಿದೆ.
ಹಣದುಬ್ಬರದಿಂದ ಎದುರಾಗುವ ಸವಾಲುಗಳನ್ನು ಎದುರಿಸಲು ನೌಕರರಿಗೆ ತುಟ್ಟಿಭತ್ಯೆ ನೆರವಾಗುತ್ತದೆ. ಹೆಚ್ಚುತ್ತಿರುವ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದ ತುಟ್ಟಿಭತ್ಯೆಯು ಸಹಾಯವಾಗುತ್ತದೆ. ವೇತನ ಆಯೋಗದ ಪ್ರಕಾರ, ಪ್ರತಿ 10 ವರ್ಷಕ್ಕೊಮ್ಮೆ ಮೂಲ ವೇತನವು ಪರಿಷ್ಕರಣೆಗೊಂಡರೆ, ತುಟ್ಟಿಭತ್ಯೆಯನ್ನು ಹಣದುಬ್ಬರ ಆಧಾರದ ಮೇಲೆ ಹೊಂದಾಣಿಕೆ ಮಾಡಲಾಗುತ್ತದೆ.ಇದನ್ನೂ ಓದಿ:ಪರಿಹಾರದ ಹಣದಲ್ಲಿ ಬೆಟ್ಟಿಂಗ್ – ವಂಚನೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ