ಮಂಡ್ಯ: ಜಿಲ್ಲೆಯ ನೂತನ ಸಮಗ್ರ ಕೃಷಿ ವಿಶ್ವವಿದ್ಯಾಲಯ (Agriculture University) ಸ್ಥಾಪಿಸಬೇಕೆನ್ನುವ ಬಹುದಿನದ ಕನಸು ನನಸಾಗುವ ಹಂತ ತಲುಪಿದೆ.
ಸಮಗ್ರ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿ ಸ್ಥಾಪನೆಯಿಂದ ರೈತರ ಅನೇಕ ಸಮಸ್ಯೆಗಳಿಗೆ ವಿಶೇಷವಾಗಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಒಂದೇ ಮೂಲದಿಂದ ಪರಿಹಾರ ದೊರಕಿಸಬೇಕೆಂಬ ಮಹತ್ವಕಾಂಕ್ಷಿ ಕನಸನ್ನ ನನಸಾಗಿಸುವ ಉದ್ದೇಶವನ್ನು ಕೃಷಿ ಸಚಿವರು ಚಲುವರಾಯಸ್ವಾಮಿ (Chaluvarajaswamy) ಹೊಂದಿದ್ದರು.
Advertisement
Advertisement
ಈಗಾಗಲೇ ರಾಜ್ಯದ ಶಿವಮೊಗ್ಗದಲ್ಲಿ (Shivamogga) ಸಸ್ಯಾಧಾರಿತ ಕೃಷಿ ವಿಜ್ಞಾನಗಳ ಸಮಗ್ರ ಕೃಷಿ ಹಾಗೂ ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯವು 2013 ರಿಂದ ರೈತರ ಆಶೋತ್ತರಗಳಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದೆ. ಇದೇ ಮಾದರಿಯಲ್ಲೇ ಮಂಡ್ಯದಲ್ಲೂ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ದೊರೆತಿದೆ. ಇದನ್ನೂ ಓದಿ: ಕುಂಭಮೇಳದಲ್ಲಿ 7 ಅಡಿ ಎತ್ತರದ ರಷ್ಯಾದ ಬಾಬಾ – ‘ಪರಶುರಾಮನ ಅವತಾರ’ ಎಂದ ಭಕ್ತರು
Advertisement
Advertisement
ನೂತನವಾಗಿ ಪ್ರಾರಂಭಿಸುವ ವಿಶ್ವವಿದ್ಯಾಲಯಕ್ಕೆ ಬೆಂಗಳೂರು ಕೃಷಿ ವಿವಿಯಿಂದ ಮಂಡ್ಯ ಕೃಷಿ ಕಾಲೇಜು (ವಿ.ಸಿ ಫಾರಂ), ಹಾಸನ ಕೃಷಿ ಕಾಲೇಜು ಹಾಗೂ ಚಾಮರಾಜನಗರ ಕೃಷಿ ಕಾಲೇಜುಗಳು ಹಾಗೂ ಶಿವಮೊಗ್ಗ ವಿಶ್ವವಿದ್ಯಾಲಯದಿಂದ ಪೊನ್ನಂಪೇಟೆ ಅರಣ್ಯ ಕಾಲೇಜು ಹಾಗೂ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಮೈಸೂರು ತೋಟಗಾರಿಕೆ ಕಾಲೇಜು ಮಂಡ್ಯ ವಿಶ್ವವಿದ್ಯಾಲಯಕ್ಕೆ ಸೇರ್ಪಡೆಗೊಳ್ಳುತ್ತಿವೆ.
ನೂತನವಾಗಿ ಪ್ರಾರಂಭಗೊಳ್ಳುವ ಮಂಡ್ಯ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳು ಸೇರ್ಪಡೆಗೊಳ್ಳುತ್ತವೆ. ಕಾರಣ ಈ ಜಿಲ್ಲೆಗಳಲ್ಲಿರುವ ಯಾವುದೇ ಕೃಷಿ ಸಂಬಂಧಿತ ವಿಶ್ವವಿದ್ಯಾಲಯಗಳ ಶಿಕ್ಷಣ, ಸಂಶೋಧನೆ ಹಾಗೂ ವಿಸ್ತರಣಾ ಘಟಕಗಳು ಯಥಾವತ್ತಾಗಿ ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಸೇರ್ಪಡೆಗೊಳ್ಳುತ್ತವೆ.
ಶಿವಮೊಗ್ಗ ತೋಟಗಾರಿಕೆ ಮತ್ತು ಕೃಷಿ ವಿಶ್ವವಿದ್ಯಾಲಯದ ಮಾದರಿಯಲ್ಲಿ ಮಂಡ್ಯದಲ್ಲಿ ಪ್ರಾರಂಭಿಸುವ ನೂತನ ಕೃಷಿ ವಿಶ್ವವಿದ್ಯಾಲಯವನ್ನು ಕೂಡಾ ಎಲ್ಲಾ ಸಸ್ಯ ಶಾಸ್ತ್ರಗಳ ಸಮನ್ವಯತೆಯನ್ನು ಸಾಧಿಸಿ ಮಂಡ್ಯ ಸಮಗ್ರ ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: Aeroindia 2025| ಯಲಹಂಕ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡಗಳ ಕ್ರೇನ್ ಎತ್ತರ ಇಳಿಸಿ: ಬಿಬಿಎಂಪಿ