– AI ಕ್ಯಾಮೆರಾ, ಪೋರ್ಟಬಲ್ ಜಾಮರ್ ಸೇರಿ ಅತ್ಯಾಧುನಿಕ ಉಪಕರಣಗಳ ಅಳವಡಿಕೆ ಅನುಮೋದನೆ
ಬೆಂಗಳೂರು: ರಾಜ್ಯದ ಕಾರಾಗೃಹ ಇಲಾಖೆಯನ್ನು (Prisons Department) ಆಧುನಿಕ ತಂತ್ರಜ್ಞಾನ ಆಧಾರಿತವಾಗಿ ಬಲಪಡಿಸುವ ನಿಟ್ಟಿನಲ್ಲಿ ವಿವಿಧ ಅತ್ಯಾಧುನಿಕ ಉಪಕರಣಗಳ ಖರೀದಿ ಮತ್ತು ಅಳವಡಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಇಂದು (ಆ.21) ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆಗೆ ಅನುಮೋದನೆ ದೊರೆತಿದ್ದು, ಕಾರಾಗೃಹಗಳ ಭದ್ರತೆ, ಮೇಲ್ವಿಚಾರಣೆ ಹಾಗೂ ಕಾರ್ಯಕ್ಷಮತೆಯನ್ನು ಮತ್ತಷ್ಟು ಹೆಚ್ಚಿಸುವುದು ಸರ್ಕಾರದ ಉದ್ದೇಶವಾಗಿದೆ. ಇದನ್ನೂ ಓದಿ: ಹಣ ವರ್ಗಾವಣೆ, ಆತ್ಮಹತ್ಯೆ ಪತ್ರ ಸೇರಿ ಎಲ್ಲ ದಾಖಲೆಗಳಿದ್ರೂ ನಾಗೇಂದ್ರ ರಾಜೀನಾಮೆ ನೀಡುತ್ತಿಲ್ಲ – ಆರ್.ಅಶೋಕ್
ಕಾರಾಗೃಹಗಳಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಕ್ಯಾಮೆರಾಗಳು, ಪೋರ್ಟಬಲ್ ಸಿಗ್ನಲ್ ಜಾಮರ್‌ಗಳು ಹಾಗೂ ಕೈದಿಗಳ ದೂರವಾಣಿ ಕರೆ ವ್ಯವಸ್ಥೆ (Prisoner Calling System) ಸೇರಿದಂತೆ ಹಲವು ಆಧುನಿಕ ಉಪಕರಣಗಳನ್ನು ಅಳವಡಿಸಲಾಗುವುದು. ಇದರಿಂದ ಅನಧಿಕೃತ ಚಟುವಟಿಕೆಗಳನ್ನು ತಡೆಗಟ್ಟಲು ಹಾಗೂ ಭದ್ರತಾ ಮೇಲ್ವಿಚಾರಣೆಯನ್ನು ಪರಿಣಾಮಕಾರಿಗೊಳಿಸಲು ನೆರವಾಗಲಿದೆ.
ಬದಲಾಗುತ್ತಿರುವ ಸವಾಲುಗಳಿಗೆ ಅನುಗುಣವಾಗಿ ಕಾರಾಗೃಹ ಇಲಾಖೆಯಲ್ಲೂ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸುವುದು ಅಗತ್ಯ. ಸುರಕ್ಷತೆ ಮತ್ತು ಮೇಲ್ವಿಚಾರಣೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು ಸಂಪುಟ ಇದಕ್ಕೆ ಸಮ್ಮತಿ ಸೂಚಿಸಿದೆ.ಇದನ್ನೂ ಓದಿ: ಮ್ಯಾನ್ಮಾರ್‌ನ ಬೌದ್ಧ ವಿಹಾರದ ಮೇಲೆ ಭೀಕರ ವಾಯುದಾಳಿ – 14 ಮಂದಿ ಸಾವು, 20 ಜನರಿಗೆ ಗಾಯ

