– ದೇಶಾದ್ಯಂತ 5,862 ಕೋಟಿ ಅಂದಾಜು ವೆಚ್ಚದಲ್ಲಿ ಹೊಸ ಕೆ.ವಿ.ಗಳಿಗೆ ಅನುಮೋದನೆ
ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ಮಕ್ಕಳಿಗೆ ದಸರಾ ಹಬ್ಬದ ಕೊಡುಗೆ ಎನ್ನುವಂತೆ 57 ಕೇಂದ್ರೀಯ ವಿದ್ಯಾಲಯಗಳ (Kendriya Vidyalaya) ಸ್ಥಾಪನೆಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ, 2026-27ರಿಂದ 9 ವರ್ಷಗಳ ಅವಧಿಯಲ್ಲಿ 5862.55 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಒಟ್ಟು 57 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ತೆರೆಯಲು ಒಪ್ಪಿಗೆ ಸೂಚಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಮೆರಿಕ ಶಟ್‌ಡೌನ್ -7.50 ಲಕ್ಷ ನೌಕರರಿಗೆ ವೇತನರಹಿತ ಕಡ್ಡಾಯ ರಜೆ!
ಕೇಂದ್ರ ಸರ್ಕಾರಿ ನೌಕರರ ಮಕ್ಕಳ ಶೈಕ್ಷಣಿಕ ಅಗತ್ಯತೆ ಪೂರೈಸಲು ಬದ್ಧವಾಗಿ ಕೇಂದ್ರ ಸರ್ಕಾರ ಈ ಐತಿಹಾಸಿಕ ನಿರ್ಣಯ ತೆಗೆದುಕೊಂಡಿದೆ. ನೂತನ ವಿದ್ಯಾಲಯಗಳನ್ನು ತೆರೆಯಲು 585.52 ಕೋಟಿ ಬಂಡವಾಳ ವೆಚ್ಚ ಮತ್ತು 3277.03 ಕೋಟಿ ಕಾರ್ಯಾಚರಣೆ ವೆಚ್ಚವನ್ನು ಅಂದಾಜಿಸಿದೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಕೆಮ್ಮಿನ ಸಿರಪ್ ಸೇವನೆ – 15 ದಿನಗಳ ಅಂತರದಲ್ಲಿ ಕಿಡ್ನಿ ವೈಫಲ್ಯದಿಂದ 6 ಮಕ್ಕಳು ಸಾವು
ರಾಷ್ಟ್ರೀಯ ಶಿಕ್ಷಣ ನೀತಿ 2020ಕ್ಕೆ ಮಾದರಿ ಶಾಲೆಗಳಾಗಿ ಮೊದಲ ಬಾರಿಗೆ ಈ 57 ಕೇಂದ್ರೀಯ ವಿದ್ಯಾಲಯಗಳನ್ನು ಬಾಲವಟಿಕಾಗಳೊಂದಿಗೆ ಮಂಜೂರು ಮಾಡಲಾಗಿದೆ. ಈ ಮೂಲಕ ರಕ್ಷಣಾ ಮತ್ತು ಅರೆಸೈನಿಕ ಪಡೆಗಳು ಸೇರಿದಂತೆ ಕೇಂದ್ರ ಸರ್ಕಾರದ ನೌಕರರ ಮಕ್ಕಳ ಶೈಕ್ಷಣಿಕ ಅಗತ್ಯಗಳನ್ನು ಪೂರೈಸಲು ದೇಶಾದ್ಯಂತ ಏಕರೂಪದ ಗುಣಮಟ್ಟದ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ರಾಮಚಂದ್ರ ಗುಹಾಗೆ ರಾಜ್ಯ ಸರ್ಕಾರದ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ
ಮಾಸ್ಕೋ, ಕಠ್ಮಂಡು ಮತ್ತು ಟೆಹ್ರಾನ್ ಸೇರಿದಂತೆ 3 ವಿದೇಶಗಳಲ್ಲಿ ಸಹ ಒಟ್ಟು 1,288 ಕ್ರಿಯಾತ್ಮಕ ಕೇಂದ್ರೀಯ ವಿದ್ಯಾಲಯಗಳಿದ್ದು, 2025ರ ಜೂನ್ ಅಂತ್ಯದ ವೇಳೆಗೆ ಅಂದಾಜು 13.62 ಲಕ್ಷ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಈ ಹಿಂದೆ ಕೇಂದ್ರ ಸರ್ಕಾರ 85 ಕೇಂದ್ರೀಯ ವಿದ್ಯಾಲಯಗಳನ್ನು ನೀಡಿತ್ತು. ಇದೀಗ ಹೆಚ್ಚಿನ ಬೇಡಿಕೆ, ಪ್ರಸ್ತಾವನೆಗಳಿರುವುದರಿಂದ ಮತ್ತೆ 57 ಹೆಚ್ಚುವರಿ ವಿದ್ಯಾಲಯಗಳನ್ನು ಮಂಜೂರು ಮಾಡಿದೆ ಎಂದಿದ್ದಾರೆ. ಇದನ್ನೂ ಓದಿ: ದಸರಾ ಜಂಬೂಸವಾರಿಗೆ ಕೌಂಟ್ ಡೌನ್ – ಭರದಿಂದ ಸಾಗಿದ ತಯಾರಿ
ಸಿಸಿಇಎ ಗೃಹ ಸಚಿವಾಲಯ ಪ್ರಾಯೋಜಿಸಿದ 7 ಕೆ.ವಿ.ಗಳು ಮತ್ತು ರಾಜ್ಯ/ಕೇಂದ್ರಾಡಳಿತ ಪ್ರಾಧಿಕಾರಗಳು ಅನುಮೋದಿಸಿದ ಉಳಿದ 50 ಕೆ.ವಿ.ಗಳನ್ನು ತೆರೆಯಲು ಕೇಂದ್ರ ಅನುಮತಿ ನೀಡಿದೆ. 2024ರಲ್ಲಿ ಮಂಜೂರಾದ 85 ಕೆ.ವಿ.ಗಳೊಂದಿಗೆ ಇವುಗಳ ಸ್ಥಾಪನೆ ಸಹ ಮುಂದುವರಿಯುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಯುವತಿ ಮೇಲೆ ಗ್ಯಾಂಗ್ ರೇಪ್ – ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಅರೆಸ್ಟ್
17 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಹಾಗೂ ಕೆ.ವಿ.ಗಳಿಲ್ಲದ 20 ಜಿಲ್ಲೆಗಳಲ್ಲಿ ತೆರೆಯಲು ಪ್ರಸ್ತಾಪಿಸಲಾಗಿದೆ. ಇದಲ್ಲದೆ, ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ 14 ಕೆ.ವಿ.ಗಳನ್ನು, ಎಲ್‌ಡಬ್ಲ್ಯೂಇ ಜಿಲ್ಲೆಗಳಲ್ಲಿ 4 ಕೆ.ವಿ.ಗಳು ಮತ್ತು ಎನ್‌ಇಆರ್/ಗುಡ್ಡಗಾಡು ಪ್ರದೇಶಗಳಲ್ಲಿ 5 ಕೆ.ವಿ.ಗಳನ್ನು ತೆರೆಯಲಾಗುತ್ತಿದೆ. ಕಳೆದ ಬಾರಿ ನೀಡದ ರಾಜ್ಯಗಳಿಗೆ ಈ ಸಲ ಆದ್ಯತೆ ನೀಡಲಾಗಿದೆ ಎಂದು ಸಚಿವ ಜೋಶಿ ಹೇಳಿದ್ದಾರೆ. ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ – ಡಿಎ 3% ಏರಿಕೆ
86 ಸಾವಿರ ವಿದ್ಯಾರ್ಥಿಗಳಿಗೆ ಪ್ರಯೋಜನ: ಕೇಂದ್ರೀಯ ವಿದ್ಯಾಲಯಗಳನ್ನು ತೆರಿದಿರುವುದರಿಂದ ದೇಶಾದ್ಯಂತ 86,640 ವಿದ್ಯಾರ್ಥಿಗಳು ಪ್ರಯೋಜನ ಪಡೆಯುತ್ತಾರೆ. (ಬಾಲವಟಿಕದಿಂದ 12ನೇ ತರಗತಿವರೆಗೆ) 81 ಜನಕ್ಕೆ ಉದ್ಯೋಗ ಸಹ ಒದಗಿಸುತ್ತದೆ ಅಲ್ಲದೇ, 57 ಹೊಸ ಕೆ.ವಿ.ಗಳ ಅನುಮೋದನೆಯಿಂದ ಒಟ್ಟು 4617 ನೇರ ಶಾಶ್ವತ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಮುಂದಿನ ವರ್ಷವೂ ಯಾಕೆ ಪುಷ್ಪಾರ್ಚನೆ ಮಾಡಬಾರದು? Hope So ನಾನೇ ಮಾಡಬಹುದು: ಸಿಎಂ
913 ಕೆವಿಗಳು ಪಿಎಂಶ್ರೀ ಶಾಲೆ: ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಸಾರವಾಗಿ 913 ಕೆ.ವಿ.ಗಳನ್ನು ಪಿ.ಎಂ.ಶ್ರೀ ಶಾಲೆಗಳೆಂದು ಗೊತ್ತುಪಡಿಸಲಾಗಿದೆ. ಪ್ರತಿ ವರ್ಷ ಕೆ.ವಿ.ಗಳಲ್ಲಿ ಬಾಲವಟಿಕಾ 1ನೇ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕರೂರ್ ಕಾಲುಳ್ತಿತ ದುರಂತ; 2 ವಾರ ತಮಿಳುನಾಡು ಪ್ರವಾಸ ರದ್ದಗೊಳಿಸಿದ ವಿಜಯ್