ಅಪ್ರಾಪ್ತ ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ – ಸುಗ್ರೀವಾಜ್ಞೆಗೆ ಕೇಂದ್ರ ಸಂಪುಟ ಅಸ್ತು

Public TV
1 Min Read
pm modi cabinet meet

ನವದೆಹಲಿ: ಅಪ್ರಾಪ್ತ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಸುಗ್ರೀವಾಜ್ಞೆಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ.

12 ವರ್ಷ ವಯಸ್ಸಿನ ಕೆಳಗಿನ ಮಕ್ಕಳ ಮೇಲೆ ಅತ್ಯಾಚಾರ ನಡೆಸಿದರೆ ಗಲ್ಲು ಶಿಕ್ಷೆ ಹಾಗೂ ಇಂತಹ ಪ್ರಕರಣಗಳ ವಿಚಾರಣೆ ವೇಗವಾಗಿ ನಡೆಯಲು ವಿಶೇಷ ಕ್ರಮಗೊಳ್ಳಲಾಗಿದೆ. 16 ಕೆಳಗಿನ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿದರೆ ಇದುವರೆಗೂ ವಿಧಿಸುತ್ತಿದ್ದ 10 ವರ್ಷಗಳ ಕನಿಷ್ಠ ಶಿಕ್ಷೆಯನ್ನು 20 ವರ್ಷಗಳಿಗೆ ಹೆಚ್ಚಿಸಲಾಗಿದ್ದು. ಗರಿಷ್ಠ ಪ್ರಮಾಣದ ಶಿಕ್ಷೆಯಾಗಿ ಜೀವವಾದಿ ಶಿಕ್ಷೆ ವಿಧಿಸಬಹುದಾಗಿದೆ.

Capture 4

ಜಮ್ಮು ಕಾಶ್ಮೀರ ಕಥುವಾ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿ ಆಶಿಫಾ ಮೇಲೆ ನಡೆದ ಅತ್ಯಾಚಾರ ಬಳಿಕ ದೇಶದೆಲ್ಲೆಡೆ ತೀವ್ರ ಪ್ರತಿಭಟನೆ ನಡೆದಿದ್ದವು. ಅಲ್ಲದೇ ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಮನೇಕಾ ಗಾಂಧಿ ಘಟನೆ ಕುರಿತು ಪ್ರತಿಕ್ರಿಯೆ ನೀಡಿ, ಪೋಸ್ಕೋ ಕಾಯ್ದೆ ಅಡಿ ಗಲ್ಲು ಶಿಕ್ಷೆಗೆ ಅವಕಾಶ ಕಲ್ಪಿಸುವ ಕುರಿತು ಚಿಂತನೆ ನಡೆಸುವುದಾಗಿ ತಿಳಿಸಿದ್ದರು.

ಅಲ್ಲದೇ ಶುಕ್ರವಾರ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಂಬಂಧ ಕೇಂದ್ರ ಸರ್ಕಾರ ಗಲ್ಲು ಶಿಕ್ಷೆ ವಿಧಿಸುವ ಕುರಿತ ಪತ್ರವನ್ನು ಸಲ್ಲಿಸಿತ್ತು. ಸದ್ಯ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ನೀಡಿರುವ ಈ ತಿದ್ದುಪಡಿ ಮಸೂದೆ ಮುಂದಿನ ಜುಲೈ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಕಾನೂನು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

2012ರ ನಿರ್ಭಯಾ ಪ್ರಕರಣದ ಬಳಿಕ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಅವಕಾಶ ನೀಡಲಾಗಿತ್ತು. ಆದರೆ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚದ ಬಳಿಕ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಕಳೆದ ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಕ್ರಿಯೆ ನೀಡಿ, ಮಕ್ಕಳ ಮೇಲಿನ ಅತ್ಯಾಚಾರ ನಡೆಸುವಂತಹ ಕೃತ್ಯಗಳನ್ನು ಸಹಿಸುವುದಿಲ್ಲ. ಇಂತಹ ಪ್ರಕರಣಗಳಲ್ಲಿ ನ್ಯಾಯ ನೀಡಲಾಗುತ್ತದೆ ಎಂದು ತಿಳಿಸಿದ್ದರು. ಅಲ್ಲದೇ ಕೇವಲ ಹೆಣ್ಣು ಮಕ್ಕಳ ಚಲನ ವಲನಗಳ ಕಣ್ಣಿಡುವ ಪೋಷಕರು ತಮ್ಮ ಗಂಡು ಮಕ್ಕಳನ್ನು ಈ ಕುರಿತು ಕೇಳಬೇಕಿದೆ ಎಂದು ಹೇಳಿದ್ದರು.

Share This Article