ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ(Karnataka) ವಿಚಾರವಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಕರ್ನಾಟಕದ ಬೆಟ್ಟ ಕುರುಬ(Betta Kuruba) ಜನಾಂಗಕ್ಕೆ ಸೇರಿದ 12 ಜಾತಿಗಳನ್ನ ಪರಿಶಿಷ್ಟ ಪಂಗಡ(Scheduled Tribes) ಸಮುದಾಯದ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ.
ಕರ್ನಾಟಕ ಸರ್ಕಾರ ಮಾಡಿದ ಶಿಫಾರಸ್ಸನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಈ ಕುರಿತಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
Advertisement
ಪ್ರಧಾನಿ ಶ್ರೀ @narendramodi ಜೀ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ಬೆಟ್ಟ ಕುರುಬ ಜನಾಂಗ ಸೇರಿದಂತೆ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. #CabinetDecisions pic.twitter.com/GWnvZw7E8l
— Pralhad Joshi (@JoshiPralhad) September 14, 2022
Advertisement
ಕರ್ನಾಟಕದ ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳ ಅಂಚಿನಲ್ಲಿ ಬೆಟ್ಟ ಕುರುಬ ಜನಾಂಗ ನೆಲೆಸಿತ್ತು. ಕಾರಣಾಂತರಗಳಿಂದ ಈ ಜನಾಂಗದವರನ್ನು ಒಕ್ಕಲೆಬ್ಬಿಸಲಾಗಿತ್ತು. ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೊಳಿಸುವಂತೆ ಈ ಜನಾಂಗದವರು ಕಳೆದ 30 ವರ್ಷಗಳಿಂದ ಹೋರಾಡುತ್ತಿದ್ದರು. ಇದನ್ನೂ ಓದಿ: ಕೇಂದ್ರದ ನಿರ್ಧಾರವನ್ನು ತುಂಬು ಹೃದಯದಿಂದ ಸ್ವಾಗತಿಸಿ ಸಿದ್ದರಾಮಯ್ಯ
Advertisement
ಕರ್ನಾಟಕದ ಮಲೆ ಮಹದೇಶ್ವರ ಬೆಟ್ಟದಲ್ಲಿ ಹಾಗೂ ಸುತ್ತಮುತ್ತಲಿನ ಬೆಟ್ಟಗಳಲ್ಲಿ ಬೆಟ್ಟ ಕುರುಬರು ವಾಸಿಸುತ್ತಿದ್ದರು. ಇವರನ್ನು ಕಾಡು ಕುರುಬರು ಎಂದು ಕರೆಯಲಾಗುತ್ತಿತ್ತು. ನಂತರದಲ್ಲಿ ಬೆಟ್ಟ ಕುರುಬರು ಎಂದು ಕರೆಯಲಾಗುತ್ತಿತ್ತು. ಇದೀಗ ಈ ಸಮುದಾಯಕ್ಕೆ ಸೇರಿದ 12 ಉಪ ಜಾತಿಗಳನ್ನು ಎಸ್.ಟಿ ಸಮುದಾಯಕ್ಕೆ ಸೇರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.