ಬೆಟ್ಟ ಕುರುಬ ಸೇರಿದಂತೆ ಒಟ್ಟು 12 ಜಾತಿಗಳು ಎಸ್‌ಟಿ ವರ್ಗಕ್ಕೆ ಸೇರ್ಪಡೆ: ಮೋದಿಗೆ ಬಿಎಸ್‌ವೈ ಅಭಿನಂದನೆ

Advertisements

ಬೆಂಗಳೂರು: ರಾಜ್ಯದ ಬೆಟ್ಟಕುರುಬ(Betta Kuruba) ಸೇರಿದಂತೆ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರ್ಪಡೆಗೊಳಿಸಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ.

Advertisements

ಮಾಜಿ ಸಿಎಂ ಯಡಿಯೂರಪ್ಪ(Yediyurappa) ಟ್ವೀಟ್‌ ಮಾಡಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ(Narendra Modi) ಸರ್ಕಾರವನ್ನು ಅಭಿನಂದಿಸಿದ್ದಾರೆ.  ಇದನ್ನೂ ಓದಿ: 6 ವಾರದೊಳಗೆ ಸರ್ಕಾರಿ ಬಂಗಲೆಯನ್ನು ತೊರೆಯಿರಿ – ಸುಬ್ರಮಣಿಯನ್ ಸ್ವಾಮಿಗೆ ಕೋರ್ಟ್ ಗಡುವು

Advertisements

ತಮ್ಮ ಟ್ವೀಟ್‌ನಲ್ಲಿ, ಇಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸಂಪುಟ ಸಭೆಯಲ್ಲಿ ನಮ್ಮ ರಾಜ್ಯದ ಬೆಟ್ಟಕುರುಬ ಸೇರಿದಂತೆ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿರುವುದು ಸ್ವಾಗತಾರ್ಹ. ಆ ಮೂಲಕ ಸಮುದಾಯಗಳ ಬಹುದಿನಗಳ ಬೇಡಿಕೆ ಈಡೇರಿಸಿದಂತಾಗಿದ್ದು ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

Live Tv

Advertisements
Exit mobile version