ನವದೆಹಲಿ: ಸೆಮಿಕಂಡಕ್ಟರ್‌ಗಾಗಿ ‘ಉತ್ಪಾದನೆ ಆಧಾರಿತ ಪ್ರೋತ್ಸಾಹ (ಪಿಎಲ್‍ಐ)’ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಪಿಎಲ್‍ಐ ಯೋಜನೆಗಾಗಿ 76,000 ಕೋಟಿ ರೂ. ಅನ್ನು ಮುಂದಿನ ಆರು ವರ್ಷಗಳ ಅವಧಿಗೆ ಸರ್ಕಾರ ನಿಗದಿಪಡಿಸಿದೆ.
ಈ ಕುರಿತು ಮಾತನಾಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್, ಈ ಯೋಜನೆಯು ದೇಶದಲ್ಲಿ ಸೆಮಿಕಂಡಕ್ಟರ್ ಮತ್ತು ಡಿಸ್‍ಪ್ಲೇ ಬೋರ್ಡ್‍ಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆ ಒಂದು ಸಾಫ್ಟ್‌ವೇರ್ ಒಂದು ತಿಂಗಳು ‘ಇ-ಸ್ವತ್ತು’ಗೆ ಕೈಕೊಡ್ತು!
Advertisement
Advertisement
ಈ ಯೋಜನೆಯ ಹೊರತಾಗಿ, ಯುಪಿಐ ಮತ್ತು ರುಪೇ ಡೆಬಿಟ್ ಕಾರ್ಡ್‍ಗಳನ್ನು ಬಳಸಿಕೊಂಡು ಡಿಜಿಟಲ್ ವಹಿವಾಟಿನ ಮೇಲೆ 1,300 ಕೋಟಿ ರೂ. ಮರುಪಾವತಿಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.
Advertisement
Thanks to PM @narendramodi Ji for unprecedented decision towards #Aatmanirbhar Semiconductor manufacturing ecosystem in India.#CabinetDecisions pic.twitter.com/WeVNvTZuY9
— Ashwini Vaishnaw (@AshwiniVaishnaw) December 15, 2021
Advertisement
ಟೆಲಿಕಾಂ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, ಪಿಎಲ್‍ಐ ಯೋಜನೆಯು ಮೈಕ್ರೋಚಿಪ್‍ಗಳ ವಿನ್ಯಾಸ, ತಯಾರಿಕೆ, ಪ್ಯಾಕಿಂಗ್ ಮತ್ತು ಪರೀಕ್ಷೆಗೆ ಸಹಕಾರಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಫಸ್ಟ್ ಟೈಂ ಸೂರ್ಯನ ಮೇಲ್ಮೈ ತಲುಪಿತು ಮಾನವ ನಿರ್ಮಿತ ವಸ್ತು
ಇದರ ಜೊತೆಗೆ, 2021-26ರವರೆಗೆ ಪ್ರಧಾನ ಮಂತ್ರಿ ಕೃಷಿ ಯೋಜನೆಯನ್ನು ಅನುಷ್ಠಾನಗೊಳಿಸುವುದಕ್ಕೂ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಈ ಯೋಜನೆಯಿಂದ 22 ಲಕ್ಷ ರೈತರಿಗೆ ಅನುಕೂಲ ಆಗಲಿದೆ ಎಂದು ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ.
ಭಾರತವನ್ನು ಮೊಬೈಲ್ ಉತ್ಪಾದನಾ ಹಬ್ ದೇಶವನ್ನಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಉತ್ಪಾದನೆ ಆಧಾರಿತ ಪ್ರೋತ್ಸಾಹ (ಪಿಎಲ್‍ಐ) ಯೋಜನೆಯನ್ನು ಆರಂಭಿಸಿದೆ. ಉದ್ಯೋಗ ಸೃಷ್ಟಿಗಾಗಿ ಆರಂಭಿಸಲಾದ ಈ ಯೋಜನೆ ಅಡಿ ಮುಂದಿನ 5 ವರ್ಷದಲ್ಲಿ 1.5 ಲಕ್ಷ ಕೋಟಿ ಮೌಲ್ಯದ ಮೊಬೈಲ್ ಫೋನ್ ಹಾಗೂ ಬಿಡಿಭಾಗಗಳನ್ನು ಉತ್ಪಾದಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಪಿಎಲ್‍ಐ ಯೋಜನೆ ಅಡಿ ಲಾಭ ಪಡೆದುಕೊಳ್ಳಲು ದೇಶದ ಮತ್ತು ವಿಶ್ವದ ಹಲವು ಕಂಪನಿಗಳು ಆಯ್ಕೆಯಾಗಿವೆ.