ಬೆಂಗಳೂರು: ಎಸ್‍ಸಿ, ಎಸ್‍ಟಿ ನೌಕರರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ, ಕೊನೆಗೂ ಮುಂಬಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಸಮ್ಮತಿ ಸೂಚಿಸಿದೆ.
ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾಯ್ದೆ ಜಾರಿಗೆ ಒಪ್ಪಿಗೆ ಸೂಚಿಸಲಾಗಿದೆ. ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಪಾಡುವಂತೆ ಹೇಳಿತ್ತು. ಆದರೆ, ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರ ಅಭಿಪ್ರಾಯ ಆಧರಿಸಿ ಸರ್ಕಾರ ಕ್ರಮ ಕೈಗೊಂಡಿದೆ.
Advertisement
Advertisement
ಜೇಷ್ಠತಾ ಪಟ್ಟಿ ತಯಾರಿಸಿ, ನಿಯಮಾವಳಿಗೆ ಅನುಗುಣವಾಗಿ ಕಾನೂನು ಜಾರಿಗೆ ತರುವುದಾಗಿ ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ. ಈಗಾಗಲೇ ಎಸ್‍ಸಿ, ಎಸ್‍ಟಿ ಬಡ್ತಿ ಮೀಸಲಾತಿ ಮಸೂದೆಗೆ ರಾಷ್ಟ್ರ ಪತಿಗಳ ಅಂಕಿತ ಹಾಕಿದ್ದಾರೆ. ಹೀಗಾಗಿ ಕಾಯ್ದೆ ಜಾರಿಗೊಳಿಸಲಾಗುತ್ತಿದೆ ಮತ್ತು ಸುಪ್ರೀಂ ಕೋರ್ಟ್ ನ ಅಂತಿಮ ತೀರ್ಪಿಗೆ ಒಳಪಡುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
Advertisement
ಇತ್ತ ಸುಪ್ರೀಂ ಕೋರ್ಟ್ ನಲ್ಲಿ ಇನ್ನೂ ವಿಚಾರಣೆ ಬಾಕಿ ಇದ್ದರೂ ಕಾಯ್ದೆ ಜಾರಿಗೆ ತರಲು ನಿರ್ಧರಿಸಲಾಗಿದೆ. ಮುಂಬಡ್ತಿ ಕಾಯ್ದೆಯ ಜಾರಿಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ತೀವ್ರ ಒತ್ತಡ ಬಂದಿದ್ದು, ಅಲ್ಲದೇ ಸಮನ್ವಯ ಸಮಿತಿ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರಸ್ತಾಪಿಸಿದ್ದರು. ಈ ಹಿನ್ನೆಲೆಯಲ್ಲಿ ಒತ್ತಡಕ್ಕೆ ಮಣಿದು ಕಾಯ್ದೆ ಜಾರಿಗೆ ತೀರ್ಮಾನಿಸಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv