ಬೆಂಗಳೂರು: ಸಂಕ್ರಾಂತಿ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟ ಪುನಾರಚನೆ ಆಗುವ ಸಾಧ್ಯತೆ ಇದೆ. ಮೂಲ ಮತ್ತು ವಲಸಿಗ ಸಚಿವರಿಗೆ ಕೊಕ್ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ.
ಸಚಿವರ ಕಾರ್ಯವೈಖರಿ, ಕ್ರಿಯಾಶೀಲತೆಯನ್ನು ಮಾನದಂಡವಾಗಿ ಇಟ್ಟುಕೊಂಡು ಸಚಿವರಿಗೆ ಗೇಟ್ ಪಾಸ್ ನೀಡುವ ಬಗ್ಗೆ ಚರ್ಚೆಯಾಗುತ್ತದೆ. ಜನವರಿ 8, 9 ರಂದು ಹೈಕಮಾಂಡ್ ಸಭೆ ನಡೆಸಲಿದ್ದು, ಸಭೆ ಬಳಿಕ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಹೊರಟಿದ್ದಾರೆ: ಶ್ರೀರಾಮುಲು
Advertisement
Advertisement
6+4 ಸೂತ್ರದಡಿಯಲ್ಲಿ ಸಂಪುಟ ಪುನಾರಚನೆಯ ಯೋಜನೆ ಇದೆ. ವಲಸಿಗರಲ್ಲಿ ಮೂರು, ಮೂಲದಲ್ಲಿ ಮೂರು ಸಚಿವರು ಸಂಪುಟದಿಂದ ಹೊರ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಸಂಪುಟದಿಂದ 6 ಸಚಿವರನ್ನು ಹೊರ ಹಾಕಿದರೆ ಒಟ್ಟು 10 ಸ್ಥಾನ ಖಾಲಿ ಉಳಿಯಲಿವೆ. ಆಗ ಎಲೆಕ್ಷನ್ ಕ್ಯಾಬಿನೆಟ್ ರಚಿಸಲು ಹೈಕಮಾಂಡ್ ಉತ್ಸುಕವಾಗಿದ್ದು, 10 ಸ್ಥಾನಗಳನ್ನು ತುಂಬಲು ಹೈಕಮಾಂಡ್ ಪ್ಲ್ಯಾನ್ ಮಾಡಿದೆ.
Advertisement
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಸಿಎಂ ಬದಲಾಗಲಿದ್ದಾರೆ ಎಂದು ಹೇಳಿ ಸುದ್ದಿಯಾಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ಹೇಳಿಕೆ ಮೂಲಕ ಸುದ್ದಿಯಾಗಿದ್ದಾರೆ. ಸಂಕ್ರಾಂತಿ ನಂತರ ಸಚಿವ ಸಂಪುಟ ಪುನಾರಚನೆಯಾಗಲಿದೆ ಎಂದು ಹೇಳಿಕೆ ನೀಡಿದ್ದರು. ಇದನ್ನೂ ಓದಿ: PM ಕಿಸಾನ್ ಯೋಜನೆ 10ನೇ ಕಂತಿನಡಿ ಕರ್ನಾಟಕಕ್ಕೆ 685 ಕೋಟಿ ರೂ.ಗೂ ಹೆಚ್ಚಿನ ಹಣ ಬಿಡುಗಡೆ
Advertisement
ಸಂಪುಟ ಪುನಾರಚನೆ ವದಂತಿ ಬಗ್ಗೆ ಅನೇಕ ಸಚಿವರು ಪ್ರತಿಕ್ರಿಯಿಸಿದ್ದಾರೆ. ಯಾರಿಗೂ ಅಧಿಕಾರ ಶಾಶ್ವತ ಅಲ್ಲ. ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಶಿಸ್ತಿನ ಸಿಪಾಯಿಗಳಂತೆ ಪಕ್ಷಕ್ಕಾಗಿ ದುಡಿಯುತ್ತೇವೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.