-ಬರ, ನೀರಾವರಿ ಯೋಜನೆ ವಿಚಾರದ ಬಗ್ಗೆ ಸಂಸದರಿಗೆ ಮನವರಿಕೆ
ಬೆಂಗಳೂರು: ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್ (DK Shivakumar) ತಿಳಿಸಿದರು.
ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ನೀವು ಆತುರದಲ್ಲಿದ್ದೀರಿ. ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.ಇದನ್ನೂ ಓದಿ: ಬಾಂಗ್ಲಾ ಮೂಲದ ದಂಪತಿಗೆ ಹಲ್ಲೆ ಆರೋಪ; ಪುನೀತ್ ಕೆರೆಹಳ್ಳಿ ಆಪ್ತ, ವೈದ್ಯ ಬಂಧನ
ಇದೇ ವೇಳೆ ಇಂದು ನಮ್ಮ ಸಂಸತ್ ಸದಸ್ಯರನ್ನು ಭೇಟಿ ಮಾಡುತ್ತಿದ್ದು, ಅವರಿಗೆ ರಾಜ್ಯದ ಬರ ಪರಿಸ್ಥಿತಿ, ನೀರಿನ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಅನೇಕ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದರು.
ನಾನು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಯಾವ ವಿಚಾರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಸಂಸದರಿಗೆ ಮನವಿ ಮಾಡಲು ಹೋಗುತ್ತಿದ್ದೇನೆ. ನಂತರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು. ರಾಜ್ಯದ ಹಿರಿಯ ನಾಯಕರ ಜೊತೆಗೂ ಪ್ರಮುಖ ವಿಚಾರಗಳನ್ನು ಚರ್ಚಿಸಲಾಗುವುದು ಎಂದು ಹೇಳಿದರು.ಇದನ್ನೂ ಓದಿ: KPSC ನೇಮಕಾತಿಗೆ ಸುಳ್ಳು ಪ್ರಮಾಣಪತ್ರ ಸಲ್ಲಿಕೆ ಆರೋಪ – ಕೇಸ್ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಸುಮಾ ಸಾಹುಕಾರ್‌ಗೆ ಹೈಕೋರ್ಟ್ ತರಾಟೆ
