ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ವರಿಷ್ಠರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Advertisement
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ನಮ್ಮ ಮುಂದೆ ವಿಧಾನ ಪರಿಷತ್ ಚುನಾವಣೆ ಹಾಗೂ ಬೆಳಗಾವಿ ಅಧಿವೇಶನವಿದೆ. ಈ ಕುರಿತು ವರಿಷ್ಠರ ಸಲಹೆಯಂತೆ ನಿರ್ಧರಿಸಲಾಗುವುದು. ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ನಿಲುವಿನ ಬಗ್ಗೆ ಜೆಡಿಎಸ್ ಪಕ್ಷದ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಬೇಕು ಎಂದರು. ಇದನ್ನೂ ಓದಿ: ದೆಹಲಿ ವರಿಷ್ಠರು ಇದ್ದಾರೆ ಅಂತ ನಾನು ಜೀವಂತ ಇದ್ದೀನಿ: ರಮೇಶ್ ಜಾರಕಿಹೊಳಿ
Advertisement
Advertisement
ಬಿಜೆಪಿ ಸೇರದ ಕಾರಣ ನನ್ನನ್ನು ಜೈಲಿಗೆ ಕಳುಹಿಸಿದರು ಎಂಬ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಎಲ್ಲಾ ಹೇಳಿಕೆಗಳಿಗೆ ನಾನು ಉತ್ತರ ನೀಡಬೇಕಿಲ್ಲ ಎಂದು ನುಡಿದರು. ಇದನ್ನೂ ಓದಿ: ಬಿಜೆಪಿಗೆ ಸೇರಿಲ್ಲ ಅಂತ ನನ್ನ ತಿಹಾರ್ ಜೈಲಿಗೆ ಕಳುಹಿಸಿದ್ರು: ಡಿ.ಕೆ ಶಿವಕುಮಾರ್
Advertisement
ಒಮಿಕ್ರಾನ್ ರೂಪಾಂತರ ತಳಿ ಪತ್ತೆ ಹಿನ್ನೆಲೆಯಲ್ಲಿ ಮಾಲ್ ಮತ್ತು ಚಿತ್ರಮಂದಿರಗಳಲ್ಲಿ ಶೇ. 50 ರಷ್ಟು ಜನರಿಗೆ ಮಾತ್ರ ಅವಕಾಶ ಕಲ್ಪಿಸಬೇಕೆಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ, ಎಲ್ಲ ಸಲಹೆಗಳನ್ನು ತಜ್ಞರ ಸಮಿತಿ ಮುಂದಿಟ್ಟು ಅವರ ಅಭಿಪ್ರಾಯ ಪಡೆದು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಕ್ಲಸ್ಟರ್‌ಗಳಲ್ಲಿ ಸೋಂಕು ಕಂಡುಬಂದಿರು ಕಡೆಗಳಲ್ಲಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಲಾಗಿದ್ದು, ಚಿಕಿತ್ಸೆಗೆ ಕ್ರಮ ವಹಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡರು.