ಶೀಘ್ರದಲ್ಲೇ ಸಂಪುಟ ವಿಸ್ತರಣೆ: ವಿಜಯೇಂದ್ರ ವಿಶ್ವಾಸ

Public TV
1 Min Read
CKD 6

ಚಿಕ್ಕೋಡಿ(ಬೆಳಗಾವಿ): ಅತಿ ಶೀಘ್ರದಲ್ಲೇ ಸಂಪುಟ ವಿಸ್ತರಣೆ ಆಗಲಿದೆ ಎಂಬ ವಿಶ್ವಾಸವಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ ವೀಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ವಿಶಾಳಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ಇರುವ ಎಲ್ಲ ಪ್ರಶ್ನೆಗಳಿಗೆ ಶೀಘ್ರದಲ್ಲೇ ಉತ್ತರ ಸಿಗಲಿದೆ ಎಂದರು.

ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಅಸಮಾಧಾನ ಬಿಜೆಪಿ ಪಕ್ಷದಲ್ಲಿ ಇಲ್ಲ. ಸಚಿವ ಸಂಪುಟ ವಿಸ್ತರಣೆ ಬಳಿಕ ಸುಭದ್ರ ಸರಕಾರವನ್ನ ಯಡಿಯೂರಪ್ಪನವರು ನೀಡುತ್ತಾರೆ ಎಂದು ತಿಳಿಸಿದರು.

CKD 1 3

ಇದೇ ವೇಳೆ ಸೋತವರಿಗೆ ಸಚಿವ ಸ್ಥಾನವಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸೋತವರಿಗೂ ಸಚಿವ ಸ್ಥಾನ ನೀಡುವ ಬಗ್ಗೆ ಬಿಜೆಪಿ ವರಿಷ್ಠರು ಹಾಗೂ ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳುತ್ತಾರೆ. ಡಿಸಿಎಂ ಸ್ಥಾನ ಇರಬೇಕೋ ಬೇಡವೋ ಎನ್ನುವುದರ ಬಗ್ಗೆಯೂ ಸಿಎಂ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡುತ್ತಾರೆ ಎಂದರು.

ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನ ಕೊಲೆಗೆ ಯತ್ನ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಪದವಿಯಿಂದ ಇಳಿದ ಬಳಿಕ ಹಾಗೂ ಉಪ ಚುನಾವಣೆಯಲ್ಲಿ ಸೋತ ಬಳಿಕ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಈ ರೀತಿ ಹೇಳಿಕೆಗಳು ಅವರಿಗೆ ಶೋಭೆ ತರುವುದಿಲ್ಲ. ಅವರ ಮಾತುಗಳಿಗೆ ಯಾರೂ ಮಹತ್ವ ಕೊಡುವ ಅವಶ್ಯಕತೆಯಿಲ್ಲ ಎಂದು ಹೆಚ್‍ಡಿಕೆ ಹೇಳಿಕೆಗೆ ಟಾಂಗ್ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *