ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ?: ಬಿಎಸ್‍ವೈ ವಿರುದ್ಧ ಸಿದ್ದರಾಮಯ್ಯ ಕಿಡಿ

Public TV
1 Min Read
BSY SIDDU

ಬೆಂಗಳೂರು: ಸಚಿವ ಸಂಪುಟ ರಚನೆ ವಿಳಂಬ, ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ಯಾಕೆ ತೋರುತ್ತಿಲ್ಲ? ಅತಿವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆದರೆ ಆಡಳಿತ ಯಂತ್ರ ಮಾತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ ಎಂದು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ವಿಶ್ವಾಸ ಮತಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ, ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ನಿಮಗೆ ಕಾಣುತ್ತಿಲ್ಲವೇ ಎಂದು ಮಾಜಿ ಸಿಎಂ ಗುಡುಗಿದ್ದಾರೆ.

ಅತಿವೃಷ್ಟಿ-ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ, ಕೃಷಿ, ಗ್ರಾಮೀಣ ಅಭಿವೃದ್ಧಿ ಇಲಾಖೆಗಳಿಗೆ ಸಚಿವರೇ ಇಲ್ಲ. ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ? ಸಂಪುಟ ವಿಸ್ತರಣೆಯದ್ದೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿ, ನಿನ್ನೆಯಷ್ಟೇ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಬಿಜೆಪಿ ಸರ್ಕಾರದ ಆದೇಶವನ್ನು ಕುಟುಕಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *