ಬೆಂಗಳೂರು: ರಾಜ್ಯದ ರಾಜಕೀಯ ಹಾಗೂ ಧಾರ್ಮಿಕ ವಲಯದಲ್ಲಿ ಕೋಲಾಹಲ ಸೃಷ್ಟಿಸಿದ್ದ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೊನೆಗೂ ಸಿದ್ದರಾಮುಯ್ಯ ನೇತೃತ್ವದ ರಾಜ್ಯಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇದೇ ವೇಳೆ ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ಸಿಕ್ಕಿದ್ರೆ ಹೆಚ್ಚು ಸೌಲಭ್ಯ ಸಿಗುತ್ತೆ ಎನ್ನವು ಚರ್ಚೆ ನಡೆಯುತ್ತದೆ. ಆದರೆ ಪ್ರತ್ಯೇಕ ಧರ್ಮ ಸ್ಥಾನ ಜೊತೆಗೆ ಯಾವ ಸೌಲಭ್ಯಗಳಿ ಸಿಗುತ್ತೆ ಎಂಬುದರ ಮಾಹಿತಿ ಇಲ್ಲಿದೆ.
Advertisement
ರಾಜ್ಯ ಸರ್ಕಾರ ಪ್ರತ್ಯೇಕ ಧರ್ಮ ಸ್ಥಾನಮಾನ ವಿಚಾರದಲ್ಲಿ ಕೆಲವು ನಿರ್ಣಯಗಳನ್ನು ಕೈಗೊಂಡಿದೆ. ಒಂದು ವೇಳೆ ಕೇಂದ್ರ ರಾಜ್ಯ ಸರ್ಕಾರದ ಶಿಫಾರಸಿಗೆ ಒಪ್ಪಿಗೆ ನೀಡಿದರು ಅಲ್ಪ ಸಂಖ್ಯಾತರಿಗೆ ಸಿಗುವ ವಿಶೇಷ ಸೌಲಭ್ಯಗಳು ಲಿಂಗಾಯತ, ವೀರಶೈವರಿಗೆ ಸಿಗುವುದಿಲ್ಲ. ಉದ್ಯೋಗದಲ್ಲೂ ಯಾವುದೇ ಸೌಲಭ್ಯಗಳು ಸಿಗಲ್ಲ. ಆದರೆ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅಲ್ಪಸಂಖ್ಯಾತರಿಗೆ ಇರುವ ಸೌಲಭ್ಯ ಸಿಗುತ್ತೆ.
Advertisement
ಲಿಂಗಾಯತ, ವೀರಶೈವರಿಗೆ ಅಲ್ಪಸಂಖ್ಯಾತ ಸ್ಥಾನಮಾನದಿಂದ ಹಾಲಿ ಇರುವ ಪ್ರವರ್ಗ ಬದಲಾಗುವುದಿಲ್ಲ. ಪ್ರಸ್ತುತ ಇರುವ 3ಬಿ ಅಡಿಯಲ್ಲಿಯೇ ಲಿಂಗಾಯತ, ವೀರಶೈವ ಸಮುದಾಯ ಮುಂದುವರೆಯುತ್ತದೆ. ಲಿಂಗಾಯತ, ವೀರಶೈವರಿಗೆ ಅಲ್ಪಸಂಖ್ಯಾತ ಸ್ಥಾನ ಸಿಕ್ಕರೇ ಮುಸ್ಲಿಮರಿಗೆ ಹಾಲಿ ಇರುವ ಸೌಲಭ್ಯಗಳಿಗೆ ಯಾವುದೇ ಧಕ್ಕೆ ಉಂಟಾಗುವುದಿಲ್ಲ. ರಾಜ್ಯದಲ್ಲಿ ಮುಸ್ಲಿಮರಿಗೆ ಪ್ರಸ್ತುತ 4%ರಷ್ಟು ಮೀಸಲಾತಿ ನೀಡಲಾಗಿದೆ. ಇದನ್ನು ಓದಿ: ಬಸವ ತತ್ವ ಪರಿಪಾಲಕರಿಗೆ ಪ್ರತ್ಯೇಕ ಧರ್ಮ- ಕ್ಯಾಬಿನೆಟ್ ಸಭೆಯ ಇನ್ಸೈಡ್ ಸ್ಟೋರಿ ಇಲ್ಲಿದೆ
Advertisement
Advertisement
ಸಚಿವ ಸಂಪುಟದ ನಿರ್ಣಯಗಳೇನು?
* ಬಸವ ತತ್ವ ಒಪ್ಪಿ ಬರುವವರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ
* ಲಿಂಗಾಯತ ಮತ್ತು ವೀರಶೈವ, ಬಸವತತ್ವದಡಿ ನಂಬಿಕೆ ಇರುವವರಿಗೆ ಅನ್ವಯ
* ಪ್ರತ್ಯೇಕ ಧರ್ಮಕ್ಕೆ ಒಳಗಾಗುವವರಿಗೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ
* ಕರ್ನಾಟಕ ಅಲ್ಪಸಂಖ್ಯಾತ ಕಾಯ್ದೆಯ ಸೆಕ್ಷನ್ 2ಡಿ ಅಡಿ ಶಿಫಾರಸು
* ಕೇಂದ್ರದ ಅಲ್ಪಸಂಖ್ಯಾತ ಆಯೋಗದ 2 (ಸಿ) ಕಾಯ್ದೆ ಅನ್ವಯ
ಅಲ್ಪಸಂಖ್ಯಾತರ ಸ್ಥಾನಮಾನ ಯಾರಿಗೆ?
* ರಾಜ್ಯ ಸರ್ಕಾರವೇನೋ ಶಿಫಾರಸು ಮಾಡಿದೆ ಆದ್ರೆ ಕೇಂದ್ರ ಸಂಪುಟ ಒಪ್ಪಿಗೆ ನೀಡಬೇಕು
* ಅಲ್ಪಸಂಖ್ಯಾತರ ಸ್ಥಾನಮಾನ ಬೇಕಾದರೆ ವೀರಶೈವರು ಕೂಡ ಬಸವ ತತ್ವ ಪಾಲನೆ ಮಾಡಬೇಕು
* ವೀರಶೈವರು ತಮ್ಮದೇ ಆದ ತತ್ವ ಸಿದ್ಧಾಂತ ಹೊಂದಿರುವುದರಿಂದ ಬಸವ ತತ್ವ ಅನುಕರಣೆ ಅಸಾಧ್ಯ
* ಅಲ್ಪಸಂಖ್ಯಾತರ ಸ್ಥಾನಮಾನ ಸಿಕ್ಕಿದ್ರೆ, ಲಿಂಗಾಯತರು ಮತ್ತು ವೀರಶೈವರು ಹಿಂದುಗಳಲ್ಲ! ಇದನ್ನು ಓದಿ: ಸಿಎಂ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ: ರಂಭಾಪುರಿ ಶ್ರೀ