ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸಚಿವ ಸಂಪುಟ ಬುಧವಾರ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ.4 ರಷ್ಟು ತುಟ್ಟಿಭತ್ಯೆ (DA) ಹೆಚ್ಚಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ಮಾಹಿತಿ ನೀಡಿದರು. ಇದು ಜುಲೈ 1 ರಿಂದಲೇ ಜಾರಿಗೆ ಬರಲಿದೆ.
Advertisement
ಜುಲೈ 1 ರಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ.4 ರಷ್ಟು ಡಿಎ ಹೆಚ್ಚಿಸಿ ಸಚಿವ ಸಂಪುಟ ಅನುಮೋದಿಸಿದೆ. ಇದರಿಂದ ಸರಿಸುಮಾರು 41.85 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಲಕ್ಷ ಪಿಂಚಣಿದಾರರಿಗೆ ಪ್ರಯೋಜನ ಆಗಲಿದೆ. ಇದನ್ನೂ ಓದಿ: ಪಿಎಫ್‌ಐ ನಂತೆಯೇ RSSನ್ನೂ ಬ್ಯಾನ್ ಮಾಡಿ: ಕೇರಳ ವಿಪಕ್ಷಗಳ ಒತ್ತಾಯ
Advertisement
Advertisement
ಕೇಂದ್ರ ಸರ್ಕಾರವು ಪ್ರತಿ ವರ್ಷ ಜುಲೈ 1 ರಂದು ತುಟ್ಟಿಭತ್ಯೆಯನ್ನು ಪರಿಷ್ಕರಿಸುತ್ತದೆ. ಆದರೆ ಈ ನಿರ್ಧಾರವನ್ನು ಸಾಮಾನ್ಯವಾಗಿ ಸೆಪ್ಟೆಂಬರ್‌ನಲ್ಲಿ ಪ್ರಕಟಿಸಲಾಗುತ್ತದೆ.