ಕಲಬುರಗಿ: ಕಲ್ಯಾಣ ಕರ್ನಾಟಕದ (Kalyana Karnataka) ಉತ್ಸವದ ದಿನದಂದೇ ಆ ಭಾಗಕ್ಕೆ ಕಾಂಗ್ರೆಸ್ (Congress) ಸರ್ಕಾರ ಬಿಗ್ ಗಿಫ್ಟ್ ನೀಡಿದೆ. ಕಲಬುರಗಿಯಲ್ಲಿ (Kalaburagi) ದಶಕದ ಬಳಿಕ ಸಂಪುಟ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ (CM Siddaramaiah) ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದಾರೆ.
ಇಂದು ಚರ್ಚೆಯಾದ ಒಟ್ಟು 56 ವಿಷಯಗಳ ಪೈಕಿ 46 ಕಲ್ಯಾಣ ಕರ್ನಾಟಕಕ್ಕೆ ಸಂಬಂಧಪಟ್ಟಿವೆ. ಸುಮಾರು 12,692 ಕೋಟಿ ಪೈಕಿ ಈ ಭಾಗಕ್ಕೆ 11,770 ಕೋಟಿ ಅನುದಾನ ನೀಡಲಾಗಿದೆ. ಬೀದರ್ ಹಾಗು ರಾಯಚೂರು ಪಟ್ಟಣಗಳನ್ನ ಮಹಾನಗರ ಪಾಲಿಕೆಗಳನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಕಲ್ಯಾಣ ಕರ್ನಾಟಕದ ಪ್ರತ್ಯೇಕ ಸಚಿವಾಲಯಕ್ಕೆ ಅನುಮೋದನೆ ಕೊಡಲಾಗಿದೆ. ಇದನ್ನೂ ಓದಿ: ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಸದಸ್ಯರ ಮೇಲೆ ದಾಳಿ, ಸಾವಿರಾರು ಪೇಜರ್ ಸ್ಫೋಟ – 8 ಸಾವು, 2 ಸಾವಿರಕ್ಕೂ ಹೆಚ್ಚು ಮಂದಿ ಗಂಭೀರ ಗಾಯ
Advertisement
ಬೀದರ್-ಕಲಬುರಗಿ ಜನವಸತಿ ಪ್ರದೇಶದ ಕುಡಿಯುವ ನೀರಿಗಾಗಿ 7200 ಕೋಟಿ ವೆಚ್ಚ ಮಾಡಲು ಸಂಪುಟ ಅನುಮತಿ ನೀಡಿದೆ. ಇದರಲ್ಲಿ ಕೇಂದ್ರ ಸರ್ಕಾರ ಅರ್ಧ ಪಾಲನ್ನು ಭರಿಸಲಿದೆ. ಅನುಭವ ಮಂಟಪದಿಂದ ಅಂಜನಾದ್ರಿ ಬೆಟ್ಟದವರೆಗೆ ಇರುವ ಪ್ರವಾಸೋದ್ಯಮ ಸ್ಮಾರಕ ಉಳಿಸಿ ಅಭಿವೃದ್ಧಿ ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ತುಂಬಿದ ತುಂಗಭದ್ರಾ ಜಲಾಶಯಕ್ಕೆ ಸೆಪ್ಟೆಂಬರ್ 22ರಂದು ಸಿಎಂ ಬಾಗೀನ ಅರ್ಪಿಸಲಿದ್ದಾರೆ. ಅದೇ ದಿನ, ಡ್ಯಾಂ ನಲ್ಲಿ ನೀರುಳಿಯುವಂತೆ ಮಾಡಿದ ತಂತ್ರಜ್ಞರನ್ನು ಸಮ್ಮಾನಿಸಲಿದ್ದಾರೆ. ಇದನ್ನೂ ಓದಿ: ಮುತಾಲಿಕ್‌ನ ನಾನು ಕೇರ್ ಮಾಡಲ್ಲಾ, ಅವನಿಗೆ ಬೆಂಕಿ ಹಚ್ಚೋದು ಬಿಟ್ಟರೆ ಬೇರೇನು ಗೊತ್ತಿಲ್ಲ: ಪ್ರಸಾದ್ ಅಬ್ಬಯ್ಯ
Advertisement
Advertisement
ಈ ಬಗ್ಗೆ ಸಿಎಂ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿಯಾಗದ ಹೊರತು ರಾಜ್ಯದ ಅಭಿವೃಧ್ಧಿ ಅಸಾಧ್ಯ. ಇಲ್ಲಿನ ಜನರ ತಲಾದಾಯ ವೃದ್ಧಿ ಜೊತೆಗೆ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಸುಧಾರಣೆ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿ ನಮ್ಮ ಗುರಿಯಾಗಿದ್ದು, ದೇಶದ ಏಕತೆ ಮತ್ತು ಸಮಗ್ರತೆ ಕಾಪಾಡಲು ಬದ್ಧರಾಗಿ ದೃಢಸಂಕಲ್ಪ ಮಾಡುವುದರ ಮೂಲಕ ನವ ಭಾರತ ಮತ್ತು ನವ ಕರ್ನಾಟಕ ನಿರ್ಮಿಸೋಣ ಎಂದರು. ಇದನ್ನೂ ಓದಿ: ಮುತಾಲಿಕ್‌ನ ನಾನು ಕೇರ್ ಮಾಡಲ್ಲಾ, ಅವನಿಗೆ ಬೆಂಕಿ ಹಚ್ಚೋದು ಬಿಟ್ಟರೆ ಬೇರೇನು ಗೊತ್ತಿಲ್ಲ: ಪ್ರಸಾದ್ ಅಬ್ಬಯ್ಯ
Advertisement
ಮೆಗಾ ಟೆಕ್ಸ್ಟೈಲ್, ಸ್ಮಾರ್ಟ್ ಸಿಟಿ:
ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಲಬುರಗಿ ತಾಲೂಕಿನ ನದಿಸಿನ್ನೂರ-ಹೊನ್ನಕಿರಣಗಿ ಬಳಿ 1,000 ಎಕರೆ ಪ್ರದೇಶದಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಮೆಗಾ ಟೆಕ್ಸಟೈಲ್ ಪಾರ್ಕ್ಗನ್ನು ಸ್ಥಾಪಿಸಲಾಗುತ್ತಿದೆ. ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ 50 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುತ್ತಿದ್ದು, ಇದರಿಂದ 1 ಲಕ್ಷ ಜನರಿಗೆ ನೇರ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ರಾಜ್ಯ ಸರ್ಕಾರದಿಂದಲೇ ಸುಮಾರು 1,685 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಲಬುರಗಿ ನಗರವನ್ನು ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲು ಯೋಚಿಸಲಾಗುತ್ತಿದೆ ಎಂದು ಹೇಳಿದರು.
ಏಮ್ಸ್‌ಗೆ ಅಗತ್ಯ ನೆರವು:
ರಾಯಚೂರಿನಲ್ಲಿ ಏಮ್ಸ್ ಸಂಸ್ಥೆಯನ್ನು ಸ್ಥಾಪಿಸಲು ನಮ್ಮ ಸರ್ಕಾರವು ಅಗತ್ಯವಿರುವ ಎಲ್ಲ ನೆರವನ್ನು ಒದಗಿಸಲು ಸಿದ್ಧವಿದೆ. ಕೇಂದ್ರ ಸರ್ಕಾರವು ಕೂಡಲೆ ಏಮ್ಸ್ ಸಂಸ್ಥೆ ಪ್ರಾರಂಭಿಸಲು ಕ್ರಮ ವಹಿಸಬೇಕೆಂದು ಒತ್ತಾಯಿಸಿ, ರಾಜ್ಯದಲ್ಲಿ ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ ಹ್ಯೂಮನ್ ಮಿಲ್ಕ್ ಬ್ಯಾಂಕ್ ಘಟಕಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಹೊಸ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ನುಡಿದರು. ಇದನ್ನೂ ಓದಿ: ಬ್ರಿಟಿಷರಂತೆ ಕಾಂಗ್ರೆಸ್ – ಸಿಜೆಐ ನಿವಾಸದಲ್ಲಿ ಗಣೇಶ ಪೂಜೆಗೆ ಹೋಗಿದ್ದನ್ನು ಟೀಕಿಸಿದವರಿಗೆ ಮೋದಿ ತಿರುಗೇಟು
ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ವ್ಯಾಪ್ತಿಯ 18 ಹೊಸ ತಾಲೂಕುಗಳಲ್ಲಿ ಕಂದಾಯ ಇಲಾಖೆ ಮತ್ತು ಮಂಡಳಿಯ ಸಹಭಾಗಿತ್ವದಲ್ಲಿ ತಾಲ್ಲೂಕು ಆಡಳಿತ ಭವನಗಳನ್ನು (ಮಿನಿ ವಿಧಾನ ಸೌಧ) ನಿರ್ಮಾಣ ಮಾಡಲು ಮಂಡಳಿಯಿಂದ 130 ಕೋಟಿ ರೂ.ವೆಚ್ಚ ಮಾಡಲಾಗುತ್ತಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚಿಕ್ಕಲಪರ್ವಿ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ 397 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲು ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪಬ್ಲಿಕ್ ಟಿವಿ ಸಂಸ್ಥೆ ವಿರುದ್ಧ ಇಲ್ಲಸಲ್ಲದ ಆರೋಪಕ್ಕೆ ಕಾನೂನು ಕ್ರಮ