ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ; 7ನೇ ವೇತನ ಆಯೋಗದ ಶಿಫಾರಸು ಜಾರಿ ಬಗ್ಗೆ ಸದ್ಯಕ್ಕಿಲ್ಲ ತೀರ್ಮಾನ!

Public TV
2 Min Read
Siddaramaiah DK Shivakumar

– 2025ರ ಇನ್ವೆಸ್ಟ್ ಕರ್ನಾಟಕಕ್ಕೆ 85 ಕೋಟಿ ಮೀಸಲು
– ದರ್ಶನ್ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡದಂತೆ ಸಿಎಂ ಖಡಕ್ ಸೂಚನೆ

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಗುರುವಾರ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿಂದು ಮೊದಲ ಸಂಪುಟ ಸಭೆ (Cabinet Meeting) ನಡೆಯಿತು. ಸಂಪುಟ ಸಭೆಯಲ್ಲಿ ಏಳನೇ ವೇತನ ಆಯೋಗದ (7th Pay Commission) ಶಿಫಾರಸುಗಳ ಜಾರಿ ವಿಚಾರವಾಗಿ ಚರ್ಚೆ ನಡೆದಿದೆ. ಆದರೆ ಯಾವುದೇ ನಿರ್ಣಯ ಹೊರಬೀಳಲಿಲ್ಲ.

ಇನ್ನು, ತುರ್ತು ಕಾಮಗಾರಿಗಳಿಗೆ ಸಂಬಂಧಿಸಿ ಆಡಳಿತಾತ್ಮಕ ಅನುಮೋದನೆ ನೀಡಿದ್ದ 147 ಟೆಂಡರ್ ಪೈಕಿ 53ಕ್ಕೆ ಇನ್ನೂ ಟೆಂಡರ್ ಕರೆಯದಿರುವುದನ್ನು ಸಂಪುಟ ಗಂಭೀರವಾಗಿ ಪರಿಗಣಿಸಿದೆ. ಮುಂದಿನ ತಿಂಗಳಲ್ಲಿ ಕಾಮಗಾರಿ ಆರಂಭಿಸಲು ಸಿಎಂ ಸೂಚನೆ ನೀಡಿದ್ದಾರೆ. ಫೆ.12ರಿಂದ 14ರ ವರೆಗೆ ಬೆಂಗಳೂರಿನಲ್ಲಿ `ಇನ್ವೆಸ್ಟ್ ಕರ್ನಾಟಕ’ ಆಯೋಜಿಸಲು ಸಂಪುಟ ಒಪ್ಪಿಗೆ ಸೂಚಿಸಿದ್ದು, ಇದಕ್ಕೆ 85 ಕೋಟಿ ಮೀಸಲಿರಿಸಿದೆ. ಕಲ್ಯಾಣ ಕರ್ನಾಟಕ ಹಾಗೂ ವಾಯುವ್ಯ ಸಾರಿಗೆ ನಿಗಮಕ್ಕೆ 112 ವೇಗದೂತ ಬಸ್ ನೀಡಲು ಒಪ್ಪಿಗೆ ಸೂಚಿಸಿದೆ. ಇದನ್ನೂ ಓದಿ: Exclusive: ವಾಲ್ಮೀಕಿ ನಿಗಮದ ಹಗರಣ ಕೇಸ್: ಎಂಡಿ ಪದ್ಮನಾಭ್ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ!

ಲೋಕಸಭಾ ಚುನಾವಣೆ ನಂತರದ ಮೊದಲ ಕ್ಯಾಬಿನೆಟ್ ಸಭೆ ಇದಾಗಿದ್ದು, ಹಲವು ಮಹತ್ವದ ವಿಷಯಗಳ ಚರ್ಚೆ ನಡೆದಿದೆ. ಮುಂಗಾರು ಪ್ರಾರಂಭವಾಗಿರುವ ಹಿನ್ನೆಲೆ ಕೆಲವು ಭಾಗಗಳಲ್ಲಿ ಅತಿವೃಷ್ಠಿಯಿಂದ ಪ್ರವಾಸ ಸಾಧ್ಯತೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಈ ಕುರಿತು ಮುಂಜಾಗ್ರತೆಗಳ ಬಗ್ಗೆಯೂ ಸಚಿವರೊಟ್ಟಿಗೆ ಮಾತುಕತೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ರೈತರ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಬಗ್ಗೆಯೂ ಚರ್ಚೆ ನಡೆದಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್‌ನ 8ನೇ ಆರೋಪಿ ಶರಣಾಗತಿ – ದರ್ಶನ್‌ಗೆ ಕಾರು ಕೊಟ್ಟಿದ್ದವರಿಗೂ ಸಂಕಷ್ಟ!

ಇನ್ನು ಸಚಿವ ಸಂಪುಟ ಸಭೆಯಲ್ಲಿ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಎಚ್ಚರಿಕೆ ನೀಡಿದ್ದಾರೆ. ದರ್ಶನ್ ವಿಚಾರದಲ್ಲಿ ಯಾರು ಇಂಟರ್‌ಫಿಯರ್ ಆಗಬೇಡಿ. ಯಾರ ಹೆಸರು ಕೇಳಿ ಬರದಂತೆ ನೋಡಿಕೊಳ್ಳಿ ಎಂದು ಸಚಿವರಿಗೆ ಸಿಎಂ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಅವನು ಮಾಡಿದ್ದು ಅವನು ಅನುಭವಿಸುತ್ತಾನೆ ಎಂದಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದ ಎಲ್ಲಾ ಶಾಲೆಗಳಲ್ಲಿ ಇನ್ಮುಂದೆ ರಾಷ್ಟ್ರಗೀತೆ ಕಡ್ಡಾಯ!

Share This Article