ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ರದ್ದು – ವಿಧಾನಸೌಧಕ್ಕೆ ಶಿಫ್ಟ್

Public TV
1 Min Read
Vidhana Soudha

ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ (Nandi Hills) ನಡೆಯಬೇಕಿದ್ದ ವಿಶೇಷ ಸಚಿವ ಸಂಪುಟ ಸಭೆ (Cabinet Meeting) ಕೊನೆ ಕ್ಷಣದಲ್ಲಿ ರದ್ದಾಗಿದೆ.

ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಕ್ಯಾಬಿನೆಟ್ ಸಭೆಯನ್ನು ವಿಧಾನಸೌಧದ ಸಭಾಂಗಣದಲ್ಲೇ ನಡೆಸಲು ತೀರ್ಮಾನಿಸಲಾಗಿದೆ. ಸಿಎಂ ಸೂಚನೆಯ ಮೇರೆಗೆ ಕೊನೆಕ್ಷಣದಲ್ಲಿ ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನ ರದ್ದು ಮಾಡಲಾಗಿದೆ ಎಂದು ತಿಳಿದುಬಂದಿದೆ.ಇದನ್ನೂ ಓದಿ: ನಾವಿರುವವರೆಗೂ ಎಸ್ಕಾಂಗಳ ಖಾಸಗೀಕರಣಕ್ಕೆ ಅವಕಾಶವಿಲ್ಲ: ಡಿ.ಕೆ ಶಿವಕುಮಾರ್

ವಿಶೇಷ ಸಚಿವ ಸಂಪುಟ ಸಭೆಗಾಗಿ ಕಳೆದ ಒಂದು ವಾರದಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸೇರಿದಂತೆ ಜಿಲ್ಲೆಯ ಅಧಿಕಾರಿಗಳು ಶ್ರಮವಹಿಸಿ ಸಾಕಷ್ಟು ಕೆಲಸ ಕಾರ್ಯಗಳನ್ನು ಕೈಗೊಂಡಿದ್ದರು.

ನಂದಿ ಬೆಟ್ಟವನ್ನು ಮಧುವಣಗಿತ್ತಿಯಂತೆ ಶೃಂಗಾರ ಮಾಡಲಾಗಿತ್ತು. ಅಂತಿಮ ಹಂತದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಸಭೆ ದಿಢೀರ್ ರದ್ದಾದ ಹಿನ್ನೆಲೆ ಅಧಿಕಾರಿಗಳಲ್ಲಿ ನಿರಾಸೆ ಮೂಡಿಸಿದೆ.ಇದನ್ನೂ ಓದಿ: ಗುಜರಾತ್‌ನಲ್ಲಿ ಪ್ರವಾಹ ಪರಿಸ್ಥಿತಿ – 9 ಜನರಿದ್ದ ಇಕೋ ಕಾರು ನೀರುಪಾಲು, ನಾಲ್ವರು ಸಾವು

Share This Article