KarnatakaLatestMain Post

ರಾಜಸ್ಥಾನ : ಎಲ್ಲ ಸಚಿವರಿಂದ ರಾಜೀನಾಮೆ ಪಡೆದ ಗೆಹ್ಲೋಟ್‌

ಜೈಪುರ: ರಾಜಸ್ಥಾನದ ಕಾಂಗ್ರೆಸ್‌ ಸರ್ಕಾರದಲ್ಲಿರುವ ಎಲ್ಲ ಸಚಿವರು ರಾಜೀನಾಮೆ ಸಲ್ಲಿಸಿದ್ದಾರೆ.

ಸಂಪುಟ ಪುನಾರಚನೆಯಾಗಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ತಮ್ಮ ಸರ್ಕಾರದ ಎಲ್ಲಾ ಸಚಿವರ ರಾಜೀನಾಮೆಯನ್ನು ತೆಗೆದುಕೊಂಡಿದ್ದಾರೆ. ಭಾನುವಾರ ರಾಜಭವನದಲ್ಲಿ ನೂತನ ಸಚಿವ ಸಂಪುಟದ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಮತ್ತು ಹಿರಿಯ ನಾಯಕರ ನಡುವೆ ಹಲವು ಸುತ್ತಿನ ಸಭೆಯ ಬಳಿಕ ಸಂಪುಟ ಪುನಾರಚನೆಗೆ ಕ್ಷಣಗಣನೆ ಆರಂಭವಾಗಿದೆ. ಗೆಹ್ಲೋಟ್ ಅವರು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಸೇರಿದಂತೆ ಪಕ್ಷದ ನಾಯಕರನ್ನು ಭೇಟಿಯಾದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ: ವಿದರ್ಭ ವಿರುದ್ಧ ಕರ್ನಾಟಕಕ್ಕೆ ರೋಚಕ ಜಯ – ಫೈನಲ್‍ಗೆ ಲಗ್ಗೆ

ರಾಜಸ್ಥಾನ ಸರ್ಕಾರ ರಚನೆಯಾದ ಬಳಿಕ ತಮ್ಮ ಬೆಂಬಲಿಗರನ್ನು ಗೆಹ್ಲೋಟ್‌ ಕಡೆಗಣಿಸುತ್ತಿದ್ದಾರೆ ಎಂದು ಸಚಿನ್‌ ಪೈಲಟ್‌ ಹೈಕಮಾಂಡ್‌ಗೆ ನಿರಂತರ ದೂರು ನೀಡಿದ್ದರು. ಹೀಗಾಗಿ ಈ ಬಾರಿ ನಡೆಯಲಿರುವ ಪುನರಾಚನೆಯಲ್ಲಿ ಅರ್ಧಕ್ಕೂ ಹೆಚ್ಚು ಸಚಿನ್‌ ಪೈಲಟ್‌ ಬೆಂಬಲಿಗರಿಗೆ ಮಂತ್ರಿಸ್ಥಾನ ಸಿಗುವ ಸಾಧ್ಯತೆಯಿದೆ. ರಾಜಸ್ಥಾನದ ಸಂಪುಟದಲ್ಲಿ ಪ್ರಸ್ತುತ 21 ಸಚಿವರಿದ್ದು, ಇನ್ನೂ ಒಂಬತ್ತು ಮಂದಿಗೆ ಅವಕಾಶವಿದೆ.

Leave a Reply

Your email address will not be published.

Back to top button