ಕೋಲಾರ: ಗ್ರಾಮೀಣ ಭಾಗದ ರೈತರ ಕೇಬಲ್ ಕಳ್ಳತನ (Cable Theft) ಮಾಡುತ್ತಿದ್ದ ಕಳ್ಳರನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಕೋಲಾರ ತಾಲೂಕು ದೊಡ್ಡಹಸಾಳ ಗ್ರಾಮದಲ್ಲಿಂದು ಈ ಘಟನೆ ನಡೆದಿದ್ದು, ಗ್ರಾಮದಲ್ಲಿ ರೈತರ ಬೋರ್ ವೆಲ್‌ಗೆ (Borewell) ಅಳವಡಿಸಿದ್ದ ಕೇಬಲ್ ಕಳ್ಳತನ ಮಾಡುವ ವೇಳೆ ಸಿಕ್ಕಿ ಬಿದ್ದಿದ್ದಾರೆ. ಕೋಲಾರದ ಗಾಂಧಿನಗರ ನಿವಾಸಿಗಳಾದ ಚೇತನ್ ಹಾಗೂ ಸುದೀಪ್ ಕಳ್ಳತನ ಮಾಡುವ ವೇಳೆ ರೈತರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗಿ – ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ ಇರಾನ್
ಸದ್ಯ ಕಳ್ಳರನ್ನು ಹಿಡಿದು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಗೆ ಗ್ರಾಮಸ್ಥರು ಒಪ್ಪಿಸಿದ್ದಾರೆ. ಇನ್ನೂ ಈ ಭಾಗದಲ್ಲಿ ಕಳೆದ ಹಲವು ದಿನಗಳಿಂದ ಪದೇಪದೇ ಪಂಪ್ಸೆಟ್ ಹಾಗೂ ಕೇಬಲ್ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ರೈತರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಆಗಿರಲಿಲ್ಲ. ಆದರೆ ಇಂದು ಇಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದು ಈ ಭಾಗದ ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ಈ ಪಾಪಕೃತ್ಯ ಮಾಡಿದ ಪ್ರತಿಯೊಬ್ಬರನ್ನೂ ಮೋದಿ, ಯೋಗಿ ಶಿಕ್ಷಿಸುತ್ತಾರೆ: ಮೌನಮುರಿದ ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥ
